ಆದಾಯ ತೆರಿಗೆ ಇಲಾಖೆಯಿಂದ ಡಿ.ಕೆ. ಶಿವಕುಮಾರ್ ಗೆ ಸಮನ್ಸ್
ಬೆಂಗಳೂರು, ನವೆಂಬರ್ 05: ಕರ್ನಾಟಕ ಸರ್ಕಾರದ ಇಂಧನ ಸಚಿವ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಆಘಾತಕಾರಿ ಸುದ್ದಿ ಸಿಕ್ಕಿದೆ. ಆದಾಯ ತೆರಿಗೆ ಇಲಾಖೆಯಿಂದ ಮತ್ತೊಮ್ಮೆ ನೋಟಿಸ್ ಜಾರಿಯಾಗಿದ್ದು, ನವೆಂಬರ್ 06ರಂದು ವಿಚಾರಣೆಗೆ ಹಾಜರಾಗಬೇಕಿದೆ.
ನವೆಂಬರ್ 6 ರಂದು ಡಿ.ಕೆ. ಶಿವಕುಮಾರ್ ಮತ್ತು ಕುಟುಂಬದವರು ವಿಚಾರಣೆಗೆ ಹಾಜರಾಗಬೇಕು, ಜತೆಗೆ ಚಾರ್ಟೆಡ್ ಅಕೌಂಟೆಂಟ್ ಗಳನ್ನು ಕರೆ ತರುವಂತಿಲ್ಲ ಎಂದು ನೋಟಿಸ್ ನಲ್ಲಿ ಸೂಚಿಸಲಾಗಿದೆ.

ಎರಡು ತಿಂಗಳ ಹಿಂದೆ ಸದಾಶಿವನಗರದಲ್ಲಿರುವ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ ಸೇರಿದಂತೆ ಸುಮಾರು 60 ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಸುಮಾರು 3 ದಿನಗಳ ಕಾಲ ನಡೆದ ದಾಳಿಯ ಸಂದರ್ಭದಲ್ಲಿ ಹಲವು ಮಹತ್ವದ ದಾಖಲೆ ವಶಪಡಿಸಿಕೊಳ್ಳಲಾಗಿತ್ತು.
ವಶಪಡಿಸಿಕೊಂಡ ದಾಖಲೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಲು ಡಿಕೆ ಶಿವಕುಮಾರ್, ಡಿಕೆ ಸುರೇಶ್ ಹಾಗೂ ಕುಟುಂಬದವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.












Click it and Unblock the Notifications