ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಟಿ ದಾಳಿ : ಮೂರು ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಖುಲಾಸೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 28 : ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿ ಪ್ರಕರಣದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಖುಲಾಸೆಯಾಗಿದ್ದಾರೆ. 3 ಪ್ರಕರಣದಲ್ಲಿ ಸಚಿವರನ್ನು ಆರೋಪ ಮುಕ್ತಗೊಳಿಸಲಾಗಿದೆ.

ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐಟಿ ದಾಳಿಯ ವೇಳೆ ಸಾಕ್ಷ್ಯನಾಶ, ತಪ್ಪು ಮಾಹಿತಿ ನೀಡಿರುವುದು ಮತ್ತು ಚೀಟಿ ಹರಿದ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಆರೋಪ ಮುಕ್ತಗೊಳಿಸಿ ಆದೇಶ ನೀಡಿದೆ.

ಕಾಂಗ್ರೆಸ್ ನಾಯಕ ಡಿಕೆಶಿ ನಿರಾಳ: ಕೇಸು ಮುಂದೂಡಿದ ಹೈಕೋರ್ಟ್ಕಾಂಗ್ರೆಸ್ ನಾಯಕ ಡಿಕೆಶಿ ನಿರಾಳ: ಕೇಸು ಮುಂದೂಡಿದ ಹೈಕೋರ್ಟ್

Income tax raid : DK Shivakumar acquitted in 3 cases

ಆದರೆ, ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಹಣ ಪತ್ತೆಯಾದ ಪ್ರಕರಣ, ಹವಾಲ ಹಣ ಆರೋಪ ಪ್ರಕರಣದ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ಆಪ್ತರಾದ ಸುನೀಲ್ ಶರ್ಮಾ ಮತ್ತು ಸಚಿನ್ ನಾರಾಯಣ್ ಅವರು ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.

ಇಡಿ ನೋಟಿಸ್ ಪ್ರಕರಣ : ಡಿ.ಕೆ.ಶಿವಕುಮಾರ್‌ಗೆ ರಿಲೀಫ್ಇಡಿ ನೋಟಿಸ್ ಪ್ರಕರಣ : ಡಿ.ಕೆ.ಶಿವಕುಮಾರ್‌ಗೆ ರಿಲೀಫ್

ಡಿ.ಕೆ.ಶಿವಕುಮಾರ್ ಅವರ ನಿವಾಸ ಮತ್ತು ಈಗಲ್ಟನ್ ರೆಸಾರ್ಟ್‌ ಮೇಲೆ ಐಟಿ ದಾಳಿ ನಡೆದಿತ್ತು. ಆಗ ಅವರು ಹಲವು ಪ್ರಮುಖ ಸಾಕ್ಷಿಗಳನ್ನು ನಾಶ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇಲಾಖೆಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪವಿತ್ತು.

ಹಣ ಪತ್ತೆ ಕೇಸು : ಹೈಕೋರ್ಟ್ ಮೊರೆ ಹೋದ ಡಿ.ಕೆ.ಶಿವಕುಮಾರ್ಹಣ ಪತ್ತೆ ಕೇಸು : ಹೈಕೋರ್ಟ್ ಮೊರೆ ಹೋದ ಡಿ.ಕೆ.ಶಿವಕುಮಾರ್

ಐಟಿ ಕಾಯ್ದೆ ಸೆಕ್ಷನ್ 277, 278, 193, 199 ಹಾಗೂ 120 (ಬಿ) ಅಡಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಪ್ರಕರಣಗಳನ್ನು ದಾಖಲು ಮಾಡಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಡಿ.ಕೆ.ಶಿವಕುಮಾರ್ ಅವರು ಪ್ರಕರಣ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು.

English summary
Water resources minister of Karnataka D.K.Shivakumar acquitted in 3 cases field by Income tax department against him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X