ಡೆಂಗ್ಯೂ ಪ್ರಕರಣಗಳ ಹೆಚ್ಚಳ : ಮುನ್ನೆಚ್ಚರಿಕೆ ಕ್ರಮಕ್ಕೆ ಗ್ರಾಮ ಪಂಚಾಯತಿಗಳಿಗೆ ಖಡಕ್ ಸೂಚನೆ‌

ಬೆಂಗಳೂರು, ಜುಲೈ 08: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕುಡಿಯುವ ನೀರಿನ ಸರಬರಾಜು ಟ್ಯಾಂಕ್ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನಿಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕೆಂದು ಸಚಿವರು ಹೇಳಿದ್ದಾರೆ.

Increase in Dengue Cases in the State Gram Panchayats Alerted to Precautionary Measures

ಮನೆಗಳು, ಅಂಗಡಿ-ಮುಂಗಟ್ಟುಗಳು, ಹೊಟೇಲ್ ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನೀರು ನಿಲ್ಲದಂತೆ ಕ್ರಮವಹಿಸಬೇಕು ಮತ್ತು ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳುಬೇಕು; ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು.

ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸುವುದು; ಸಾರ್ವಜನಿಕ ಸ್ಥಳಗಳು, ರಸ್ತೆಗಳಲ್ಲಿ ಮಳೆಯ ನೀರು ನಿಲ್ಲದಂತೆ ಗುಂಡಿ ಹಾಗೂ ತಗ್ಗುಗಳನ್ನು ಮುಚ್ಚಬೇಕು; ಸಾರ್ವಜನಿಕ ನಲ್ಲಿಗಳು ಹಾಗೂ ಕೊಳವೆ ಬಾವಿಗಳಿಂದ ಹೆಚ್ಚುವರಿ ನೀರು ಸರಾಗವಾಗಿ ಹರಿಯುವಂತೆ ಸೂಕ್ತವಾದ ಚರಂಡಿ ವ್ಯವಸ್ಥೆ ಮಾಡುವುದರ ಜೊತೆಗೆ ಈಗಾಗಲೇ ಇರುವ ಚರಂಡಿಗಳಲ್ಲಿ ಶೇಖರಣೆಗೊಂಡಿರುವ ಹೂಳನ್ನು ಎತ್ತಿ ನೀರು ಸರಾಗವಾಗಿ ಹರಿಯುವಂತೆ ಮತ್ತು ಚರಂಡಿಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಬೇಕು.

ಕುಡಿಯುವ ನೀರಿನ ಪೂರೈಕೆ ನಳಗಳಿಗೆ ಕಂಟ್ರೋಲ್ ವಾಲ್ಸ್ ಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ಕೈಗೊಳ್ಳಬೇಕು, ಇದರಿಂದ ನಳಗಳ ಸುತ್ತಲಿನ ಗುಂಡಿಗಳಲ್ಲಿ ನೀರು ಶೇಖರಣೆಯಾಗುವುದನ್ನು ಹಾಗೂ ಈಡಿಸ್ ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬಹುದು ಎಂದು ಗ್ರಾಮೀಣಾಭಿವೃದ್ಧಿ ಸಚಿವರು ತಿಳಿಸಿದ್ದಾರೆ.

ಕೊಳವೆ ಬಾವಿಗಳು ಹಾಗೂ ನೀರು ಸರಬರಾಜು ಪೈಪುಗಳು ಒಳಚರಂಡಿಯಿಂದ ದೂರದಲ್ಲಿರುವಂತೆ ಕ್ರಮವಹಿಸುವುದು ಮತ್ತು ಪೈಪುಗಳಲ್ಲಿ ನೀರು ಸೋರಿಕೆಯಾಗದಂತೆ ನಿಗಾವಹಿಸಬೇಕು. ಗ್ರಾಮಗಳಲ್ಲಿರುವ ಸಮುದಾಯದ ಶೌಚಾಲಯಗಳಲ್ಲಿ ಹಾಗೂ ಮನೆಗಳ ಶೌಚಾಲಯಗಳ ಪಕ್ಕದಲ್ಲಿರುವ ನೀರಿನ ತೊಟ್ಟಿಗಳಿಗೆ ಮುಚ್ಚಳವನ್ನು ಅಳವಡಿಸಬೇಕು ಹಾಗೂ ತೊಟ್ಟಿಯನ್ನು ಸ್ವಚ್ಛಗೊಳಿಸಬೇಕು.

ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕಟ್ಟಿಸಿರುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು. ಖಾಲಿ ನಿವೇಶನಗಳಲ್ಲಿ ಘನತ್ಯಾಜ್ಯ ವಸ್ತುಗಳು ಮತ್ತು ಮಳೆ ನೀರು ಸಂಗ್ರಹವಾಗದಂತೆ ಕ್ರಮವಹಿಸಲು ನಿವೇಶನಗಳ ಮಾಲೀಕರಿಗೆ ಸೂಚನೆ ನೀಡಬೇಕು ಹಾಗೂ ಸೂಚನೆ ಪಾಲಿಸದವರಿಗೆ ನಿಯಮಾನುಸಾರ ದಂಡ ವಿಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಟ್ಟೆಚ್ಚರ ನೀಡಿದ್ದಾರೆ.

ಎಳನೀರು ಮಾರಾಟಗಾರರು ಒಡೆದ ಎಳೆನೀರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಲು ಎಳೆನೀರು ಬುರುಡೆಗಳನ್ನು ನಾಲು, ಭಾಗಗಳಾಗಿ ಒಡೆದು, ಬೋರಲು ಇಡುವಂತೆ ಸೂಚಿಸಬೇಕು, ಮತ್ತು ಪ್ರತಿದಿನ ಕಡ್ಡಾಯವಾಗಿ ವಿಲೇವಾರಿ ಮಾಡುವಂತೆ ನೋಡಿಕೊಳ್ಳಬೇಕು.

ಆರೋಗ್ಯ ಸಿಬ್ಬಂದಿಯವರ ಜೊತೆಗೆ ಗ್ರಾಮ ಪಂಚಾಯತಿಗಳ ಸದಸ್ಯರು, ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು, ಅಂಗನವಾಡಿ, ಶಾಲೆ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಡೆಂಗ್ಯೂ ನಿಯಂತ್ರಣಕ್ಕೆ ಆರೋಗ್ಯ ಶಿಕ್ಷಣದ ಮೂಲಕ ಅರಿವು ಮೂಡಿಸುವಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದೂ ಸಚಿವರು ತಮ್ಮ ಮಾರ್ಗದರ್ಶನ ಸೂಚಿಯಲ್ಲಿ ತಿಳಿಸಿದ್ದಾರೆ. ಗ್ರಾಮ ಮಟ್ಟದಲ್ಲಿರುವ 'ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿ' ಗಳನ್ನು (Village Health, Sanitation & Nutrition Committee) ಡೆಂಗ್ಯೂ ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಗ್ರಾಮ ಪಂಚಾಯತಿಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+