ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವಧನ ಹೆಚ್ಚಳಕ್ಕೆ ಸರ್ಕಾರ ಆದೇಶ: ಇಲ್ಲಿವೆ ವಿವರ
ಬೆಂಗಳೂರು, ಮಾರ್ಚ್ 05: ಇತ್ತೀಚೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಧರಣಿ ನಡೆಸಿದ್ದ ಅತಿಥಿ ಉಪನ್ಯಾಸಕರು, ಖಾಯಂಗೊಳಿಸಲು ಬೇಡಿಕೆ ಇರಿಸಿದ್ದರು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತಿಥಿ ಉಪನ್ಯಾಸಕರ ನಿಯೋಗದೊಂದಿಗೆ ಸಭೆ ನಡೆಸಿದ್ದರು. ಸೇವಾ ಭದ್ರತೆ ನೀಡಲು ಕಾನೂನು ತೊಡಕುಗಳಿರುವುದರಿಂದ ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದು, ಇದೀಗ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಂಜಿನಿಯರ್ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು ಹಾಗೂ ಕಿರಿಯ ತಾಂತ್ರಿಕ ಶಾಲೆಗಳ ಅತಿಥಿ ಉಪನ್ಯಾಸಕರ ಮಾಸಿಕ ಗೌರವಧನ ಹೆಚ್ಚಳ ಮಾಡಲಾಗಿದ್ದು, ಜನವರಿ 1 ರಿಂದ ಜಾರಿ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸೇವಾ ಅವಧಿಯ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಗೌರವಧನವನ್ನು ಕನಿಷ್ಠ 5 ಸಾವಿರ ರೂ.ಗಳಿಂದ ಗರಿಷ್ಠ 8 ಸಾವಿರ ರೂ. ಹಾಗೂ 5 ಲಕ್ಷ ರೂ. ಆರೋಗ್ಯ ವಿಮೆ ಮತ್ತು 60 ವರ್ಷ ತುಂಬಿದ ಅತಿಥಿ ಉಪನ್ಯಾಸಕರಿಗೆ ವಾರ್ಷಿಕ 50 ಸಾವಿರ ರೂ.ಗಳಂತೆ ಗರಿಷ್ಠ 5 ಲಕ್ಷ ರೂ.ಗಳ ಇಡಿಗಂಟಿನ ಸೌಲಭ್ಯವನ್ನು ನೀಡುವುದಾಗಿ ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಅಲ್ಲದೇ ಅತಿಥಿ ಉಪನ್ಯಾಸಕರ ಆರೋಗ್ಯ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ.ಗಳ ಆರೋಗ್ಯ ವಿಮಾ ಸೌಲಭ್ಯವನ್ನು ನೀಡುವ ನಿಟ್ಟಿನಲ್ಲಿ ಆರೋಗ್ಯ ವಿಮಾ ಸೌಲಭ್ಯವನ್ನು ಅನುಷ್ಠಾನಗೊಳಿಸಲು ಮಂಜೂರು ಮಾಡಲಾಗಿದೆ.
ಇನ್ನೂ ಪ್ರಸ್ತುತ ವಿದ್ಯಾರ್ಹತೆ ಮತ್ತು ಸೇವಾವಧಿ ಆಧಾರದ ಅತಿಥಿ ಉಪನ್ಯಾಸಕರ ಗೌರವಧನ 26 ಸಾವಿರದಿಂದ 32 ಸಾವಿರ ರೂ.ವರೆಗೆ ಇದೆ. ಇದನ್ನು ಪರಿಷ್ಕರಿಸಲಾಗಿದ್ದು, ಕ್ರಮವಾಗಿ 5 ಸಾವಿರ, 6 ಸಾವಿರ, 7 ಸಾವಿರ ಮತ್ತು 8 ಸಾವಿರಕ್ಕೆ ಹೆಚ್ಚಿಸಲಾಗಿದೆ. 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 32 ಸಾವಿರ ರೂ., 5 ವರ್ಷಕ್ಕಿಂತ ಕಡಿಮೆ ಸೇವಾವಧಿ ಮತ್ತು ಯುಜಿಸಿ ವಿದ್ಯಾರ್ಹತೆ ಹೊಂದಿರುವವರಿಗೆ 30 ಸಾವಿರ ರೂ. ಗೌರವಧನವಿದೆ. 5 ವರ್ಷಕ್ಕಿಂತ ಕಡಿಮೆ ಸೇವಾವಧಿ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 26 ಸಾವಿರ ರೂ. ಗೌರವಧನವಿದೆ. ಇದನ್ನು ಪರಿಷ್ಕರಿಸಲಾಗಿದೆ.
ಯಾರಿಗೆ ಎಷ್ಟು ಸಂಬಳ?
* 5 ವರ್ಷಕ್ಕಿಂತ ಕಡಿಮೆ ಸೇವೆ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ 35 ಸಾವಿರ ರೂ.
* 5 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 31 ಸಾವಿರ ರೂ.
* 5 ವರ್ಷಕ್ಕಿಂತ 10 ವರ್ಷಗಳ ಸೇವೆ ಸಲ್ಲಿಸಿರುವವರಿಗೆ ಮತ್ತು ಯುಜಿಸಿ ವಿದ್ಯಾರ್ಹತೆ ಹೊಂದಿರುವವರಿಗೆ 38 ಸಾವಿರ ರೂ.
* 5 ವರ್ಷದಿಂದ 10 ವರ್ಷ ಸೇವೆ ಮತ್ತು ಯುಜಿಸಿ ವಿದ್ಯಾರ್ಹತೆ ಹೊಂದಿಲ್ಲದವರಿಗೆ 34 ಸಾವಿರ ರೂ.
* 10 ರಿಂದ 15 ವರ್ಷ ಸೇವೆ ಸಲ್ಲಿಸಿ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆಯವರಿಗೆ 39 ಸಾವಿರ ರೂ.
* ಯುಜಿಸಿ ನಿಗದಿಪ ಡಿಸಿದ ವಿದ್ಯಾರ್ಹತೆ ಇಲ್ಲದವರಿಗೆ 35 ಸಾವಿರ ರೂ.
15 ವರ್ಷ ಕ್ಕಿಂತ ಹೆಚ್ಚಿನ ಸೇವಾವಧಿ ಮತ್ತು ಯುಜಿಸಿ ವಿದ್ಯಾರ್ಹತೆ ಹೊಂದಿ ರುವವರಿಗೆ 40 ಸಾವಿರ ರೂ.
ಯುಜಿಸಿ ವಿದ್ಯಾರ್ಹತೆ ಹೊಂದಿಲ್ಲದವರಿಗೆ 36 ಸಾವಿರ ರೂ.ಗೆ ಹೆಚ್ಚಿಸಿದೆ.












Click it and Unblock the Notifications