ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್; ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿವೇತನ ಹೆಚ್ಚಳ

ಬೆಂಗಳೂರು ಏಪ್ರಿಲ್‌ 18: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು.

ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು.

Increase in scholarships under Vidyasiri scheme CM Siddaramaiah announces

12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಿ ಅಸಮಾನತೆ ಹೆಚ್ಚಾಯಿತು ಎಂದು ವಿವರಿಸಿದರು. ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಹೋರಾಡಿದ್ದನ್ನು ವಿವರಿಸಿದರು.

ಎಲ್ಲಾ ಜಾತಿ, ಸಮುದಾಯಗಳ ಜಾತ್ಯತೀತ ಪ್ರತಿನಿಧಿಗಳನ್ನೊಳಗೊಂಡ ಅನುಭವ ಮಂಟಪದ ಉದ್ದೇಶವೇ ಜಾತಿ ಮುಕ್ತ ಸಮಾಜದ ನಿರ್ಮಾಣವಾಗಿತ್ತು ಎಂದರು. ಮಡಿವಾಳ ಸಮಾಜದಲ್ಲಿ ಯಾರೂ ಶಾಸಕರಿಲ್ಲ, ಒಬ್ಬರು ಮಾತ್ರ IAS ಅಧಿಕಾರಿ ಇದ್ದಾರೆ. ಮಡಿವಾಳ ಸಮಾಜ ಇಷ್ಟು ಹಿಂದುಳಿಯಲು ಮನುಸ್ಮೃತಿ ಕಾರಣ. ಈ ಅಸಮಾನತೆ ಕಾರಣಕ್ಕೇ ಮನುಸ್ಮೃತಿಯನ್ನು ಅಂಬೇಡ್ಕರ್ ಅವರು ಬೆಂಕಿ ಹಾಕಿ ಸುಟ್ಟರು. ಈ ಮನುಸ್ಮೃತಿಯೇ ಜಾತಿ ವ್ಯವಸ್ಥೆಯ ಮೂಲ ಎಂದರು.

ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದರು. ಸಮಾನತೆ ಸಾರುವ ಸಂವಿಧಾನವನ್ನು ವಿರೋಧಿಸುವವರನ್ನು ದೂರ ಇಡಿ. ಹತ್ತಿರ ಸೇರಿಸಬೇಡಿ. ಸಂವಿಧಾನ ವಿರೋಧಿಗಳ ಜೊತೆ ಕೈ ಜೋಡಿಸುವುದು ಮಡಿವಾಳ ಮಾಚಿದೇವರಿಗೆ ಮಾಡುವ ಅವಮಾನ ಎಂದು ಹೇಳಿದರು.

ಅನುಭವ ಮಂಟಪ- ಬಸವಾದಿ ಶರಣರ ವೈಭವ' ರಥಯಾತ್ರೆಯು ಇಡೀ ರಾಜ್ಯದಲ್ಲಿ ಪ್ರಯಾಣ ಮಾಡಲಿದೆ. ಇದರಿಂದ ವಚನ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಸವಣ್ಣನವರು ಸಮಾಜಕ್ಕಾಗಿ ಬದುಕಿದವರು. ಸಮಾಜದ ಬದಲಾವಣೆಗಾಗಿ ಬದುಕಿರುವವರೆಗೂ ಪ್ರಯತ್ನಿಸಿದರು. ಬಸವಣ್ಣನವರ ಅನುಭವ ಮಂಟಪ ಪರಿಕಲ್ಪನೆಯ ಮೂಲಕ 12 ನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವದ ಸ್ಥಾಪನೆಯಾಗಿತು. ಇಲ್ಲಿ ಚರ್ಚೆ ಮತ್ತು ಅದಕ್ಕೆ ಪರಿಹಾರವನ್ನು ಕಂಡುಹಿಡಿದು ಅದನ್ನು ಜಾರಿ ಮಾಡುತ್ತಿದ್ದರು. ಜಗತ್ತಿನ ಮೊದಲನೇ ಸಂಸತ್ತು ಇದಾಗಿತ್ತು. ಎಲ್ಲಾ ಧರ್ಮ, ಜಾತಿಯವರಿಗೆ ಭಾಗವಹಿಸಲು ಅವಕಾಶವನ್ನು ಕಲ್ಪಿಸಲಾಗಿತ್ತಲ್ಲದೇ ಅವರ ಅಭಿಪ್ರಾಯವನ್ನು ಮುಕ್ತವಾಗಿ ವ್ಯಕ್ತಪಡಿಸಬಹುದಾಗಿತ್ತು ಎಂದರು.

ಕಳೆದ ಬಾರಿ ನಮ್ಮ ಸರ್ಕಾರದ ಅವಧಿಯಲ್ಲಿ ಬಸವ ಕಲ್ಯಾಣದ ಪುನರುತ್ಥಾನ ಮಾಡಲು ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಪುನರುತ್ಥಾನದ ಕೆಲಸವನ್ನು ಈ ಬಾರಿ ಪೂರೈಸಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ನಮ್ಮ ಸರ್ಕಾರ ಘೋಷಣೆಯನ್ನು ಮಾಡಿದೆ. ಕೇವಲ ಘೋಷಣೆ ಮಾಡಿಲ್ಲ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಒಪ್ಪಿಕೊಂಡು ಜಾರಿ ಮಾಡಿದೆ. ಬಸವಣ್ಣ ಸಾಮಾಜಿಕ ಕ್ರಾಂತಿ ಮಾಡಿದವರು. ಸಮಾಜದಲ್ಲಿನ ಸಾಮಾಜಿಕ ರೋಗಗಳಿಗೆ ಪರಿಹಾರವನ್ನು ಸೂಚಿಸಿದ್ದು ಮಾತ್ರವಲ್ಲದೇ ನುಡಿದಂತೆ ನಡೆಯುವ ಹಾಗೂ ನಡೆದಂತೆ ನುಡಿಯುವ ಪ್ರಯತ್ನವನ್ನು ಮಾಡಿದರು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+