Get Updates
Get notified of breaking news, exclusive insights, and must-see stories!

ಮೀಸಲಾತಿ ಹೆಚ್ಚಳ: ಸಿಎಂ ಬಸವರಾಜ ಬೊಮ್ಮಾಯಿಗೆ ಸಿಹಿ ತಿನ್ನಿಸಿದ ಮಠಾಧೀಶರು

ಬೆಂಗಳೂರು, ಅ.8: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಎಸ್ಸಿ ಎಸ್ಟಿ ಸಮುದಾಯದ ವಿವಿಧ ಮಠಾಧೀಶರು ಗೃಹ ಕಚೇರಿ ಕೃಷ್ಣಾದಲ್ಲಿ ಸಿಹಿ ತಿನ್ನಿಸಿ ಅಭಿನಂದನೆ ಸಲ್ಲಿಸಿದರು‌.

ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ, ಮಾದರ ಚೆನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಗೋವಿಂದ ಕಾರಜೋಳ, ಬಿ‌ ಶ್ರೀರಾಮುಲು , ಆನಂದ ಸಿಂಗ್, ಶಂಕರ ಪಾಟೀಲ್ ಮುನೇನಕೊಪ್ಪ, ಶಾಸಕರಾದ ರಾಜುಗೌಡ, ರೇಣುಕಾಚಾರ್ಯ ಮತ್ತಿತರರು ಹಾಜರಿದ್ದರು.

ಬಹಳ ವರ್ಷಗಳ ನ್ಯಾಯಸಮ್ಮತವಾದ ಬೇಡಿಕೆ ಮತ್ತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿಯನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ಸಂವಿಧಾನದಲ್ಲಿ ಹೇಳಿರುವಂತೆ ಜನಸಂಖ್ಯೆಯ ಆಧಾರದಲ್ಲಿ ಮೀಸಲಾತಿ ನೀಡಬೇಕೆಂಬ ಬೇಡಿಕೆಯಂತೆ ಪರಿಶಿಷ್ಟ ಜಾತಿಗೆ ಶೇ 15 ರಷ್ಟಿದ್ದ ಮೀಸಲಾತಿಯನ್ನು ಶೇ 17% ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ 3 ರಿಂದ ಶೇ.7% ಕ್ಕೆ ಮೀಸಲಾತಿ ಹೆಚ್ಚಿಸಲು ಒಮ್ಮತದ ತೀರ್ಮಾನಕ್ಕೆ ಸಂಪುಟ ಸಭೆಯೂ ಅನುಮೋದನೆ ನೀಡಿದೆ. ಇದನ್ನು ಕೂಡಲೇ ರಾಜ್ಯಪತ್ರದಲ್ಲಿ (ಗೆಜೆಟ್ ನೋಟಿಫಿಕೇಶನ್ )ಪ್ರಕಟಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೀಸಲಾತಿ ಹೆಚ್ಚಳಕ್ಕಾಗಿ ಹಲವು ದಿನಗಳಿಂದ ಹೋರಾಟದ ನಡೆಸಿದ್ದರು.

ಮೀಸಲಾತಿ ಹೆಚ್ಚಳ ಸ್ವಾಗತಾರ್ಹ

ಮೀಸಲಾತಿ ಹೆಚ್ಚಳ ಸ್ವಾಗತಾರ್ಹ

ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ 15ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ. 3ರಿಂದ 7ಕ್ಕೆ ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವು ಚಾರಿತ್ರಿಕವಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಪ್ರತಿಕ್ರಿಯಿಸಿದ್ದಾರೆ.

ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡ ನಂತರ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳ ಮಾಡಬೇಕು ಎನ್ನುವುದು ಈ ಸಮುದಾಯಗಳ ಬಹುದಿ‌ನಗಳ ಬೇಡಿಕೆ ಆಗಿತ್ತು. ಇದಕ್ಕೆ ಸ್ಪಂದಿಸಿ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಇದು ಅತ್ಯಂತ ಸ್ವಾಗತಾರ್ಹವಾಗಿದೆ ಎಂದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಮತ್ತು ನ್ಯಾಯಮೂರ್ತಿ ಸುಭಾಷ್ ಆಡಿ ಅವರ ವರದಿಗಳ ಶಿಫಾರಸುಗಳಿಗೆ ಅನುಗುಣವಾಗಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಲ್ಲಿ ಸಮಾಜದ ದುರ್ಬಲ ವರ್ಗಗಳ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯದ ಹಿತ ಆಡಗಿದೆ ಎಂದು ಅವರು ಹೇಳಿದ್ದಾರೆ.

ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣಕ್ಕೇನೂ ಇದರಿಂದ ಧಕ್ಕೆ ಆಗುವುದಿಲ್ಲ. ಸರ್ಕಾರವು ಸಮಾಜದ ಎಲ್ಲಾ ಸಮುದಾಯಗಳ ಏಳಿಗೆಗೂ ಬದ್ಧವಾಗಿದೆ ಎಂದು ಸಚಿವರು ನುಡಿದರು.

ಬೇರೆ ರಾಜಕೀಯ ಪಕ್ಷಗಳಿಗೆ ಇಚ್ಛಾಶಕ್ತಿಯ ಕೊರತೆ ಇತ್ತು

ಬೇರೆ ರಾಜಕೀಯ ಪಕ್ಷಗಳಿಗೆ ಇಚ್ಛಾಶಕ್ತಿಯ ಕೊರತೆ ಇತ್ತು

ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳದ ಕುರಿತಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಬಿಜೆಪಿ ತನ್ನ ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಈ ನಿರ್ಧಾರಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸಂಪುಟದ ಸದಸ್ಯರನ್ನು ಅವರು ಅಭಿನಂದಿಸಿದ್ದಾರೆ. ಬೇರೆ ರಾಜಕೀಯ ಪಕ್ಷಗಳಿಗೆ ರಾಜಕೀಯ ಇಚ್ಛಾಶಕ್ತಿಯ ಕೊರತೆ ಇತ್ತು. ಅವರೆಲ್ಲರೂ ಇದನ್ನು ಮುಂದಕ್ಕೆ ಹಾಕುತ್ತ ಬಂದಿದ್ದರು. ಪ್ರಸ್ತುತ ಜನಸಂಖ್ಯೆ ಆಧಾರದಡಿ ಮೀಸಲಾತಿ ನಿರ್ಧಾರ ಆಗಬೇಕಿದೆ. 1950ರಲ್ಲಿ ಮಾಡಿದ ಜನಗಣತಿ ಆಧಾರದಲ್ಲಿ ಮೀಸಲಾತಿ ಪ್ರಮಾಣ ನಿಗದಿಪಡಿಸಲಾಗಿತ್ತು. ಅದರ ಸ್ಥೂಲ ಮಾರ್ಪಾಡಿನೊಂದಿಗೆ ಪ್ರಸ್ತುತ ಇರುವ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವ ಕ್ರಾಂತಿಕಾರಿ ನಿರ್ಧಾರವನ್ನು ಕರ್ನಾಟಕ ಬಿಜೆಪಿ ಸರಕಾರ ತೆಗೆದುಕೊಂಡಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರೋಹಿಣಿ ಆಯೋಗದ ವರದಿ ಬರಲಿದೆ

ರೋಹಿಣಿ ಆಯೋಗದ ವರದಿ ಬರಲಿದೆ

ಇದು ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದ ಜ್ವಲಂತ ಸಮಸ್ಯೆ. ಇದಕ್ಕಾಗಿ ಅನೇಕ ಆಯೋಗಗಳ ರಚನೆ ಮಾಡಲಾಗಿತ್ತು. ನ್ಯಾ. ನಾಗಮೋಹನ್ ದಾಸ್ ಆಯೋಗದ ಶಿಫಾರಸಿನ ಅನ್ವಯ ರಾಜ್ಯ ಸರಕಾರವು ಇದಕ್ಕೆ ಒಪ್ಪಿಗೆ ಕೊಟ್ಟು ಜಾರಿಗೆ ತರುವ ಪ್ರಯತ್ನದಲ್ಲಿದೆ. ಹಿಂದೆ ಕುಲದೀಪ್ ಸಿಂಗ್ ಆಯೋಗದ ಶಿಫಾರಸಿನಡಿ

ಬಿಜೆಪಿ, ಸರ್ವವ್ಯಾಪಿ, ಸರ್ವಸ್ಪರ್ಶಿಯಾಗಿ ಪ್ರತಿಯೊಂದು ಸಮಾಜವನ್ನು ಮೇಲಕ್ಕೆ ತರುವುದರಲ್ಲಿ ನಂಬಿಕೆ ಇಟ್ಟ ಪಕ್ಷ. ಬಡವರು, ಶೋಷಿತರಿಗೆ ಬೇಕಾದ ಎಲ್ಲ ಅಗತ್ಯ ಮೀಸಲಾತಿಯ ಸವಲತ್ತನ್ನು ಕೊಡುವ ದಿಟ್ಟ ಮತ್ತು ದೃಢ ನಿರ್ಧಾರವನ್ನು ಬಿಜೆಪಿ ತೆಗೆದುಕೊಂಡಿದೆ ಎಂದು ಕಟೀಲ್ ತಿಳಿಸಿದ್ದಾರೆ.

ಬೇರೆ ಬೇರೆ ರಾಜ್ಯಗಳಲ್ಲಿ ಇಂಥ ಸಮಸ್ಯೆ ಕಾಣಿಸಿಕೊಂಡಾಗ ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಜಸ್ಟಿಸ್ ರೋಹಿಣಿ ಆಯೋಗವನ್ನು ನೇಮಿಸಿದೆ. ಈ ಆಯೋಗದ ಶಿಫಾರಸು ಲಭಿಸಿದ ಬಳಿಕ ಮಿಕ್ಕ ಎಲ್ಲ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಡವರಲ್ಲಿ ಬಡವರಿಗೆ ಮೀಸಲಾತಿ ಪ್ರಯೋಜನ

ಬಡವರಲ್ಲಿ ಬಡವರಿಗೆ ಮೀಸಲಾತಿ ಪ್ರಯೋಜನ

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳುವ ಮೂಲಕ ನಾವು ಸಮಾಜದ ಸಾಮಾಜಿಕವಾಗಿ ಶೋಷಿತ ವರ್ಗಗಳ ಕಲ್ಯಾಣಕ್ಕಾಗಿ ನಮ್ಮ ಪ್ರಾಮಾಣಿಕ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಭಾರತ ಸರ್ಕಾರವು ಈಗಾಗಲೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯಾಗಿ ಅಂಗೀಕರಿಸಿದೆ. ತಿದ್ದುಪಡಿಯ ಪರಿಣಾಮವಾಗಿ, ಈಗಿರುವ ಜಾತಿಗಳು ಮತ್ತು ಸಮುದಾಯಗಳ ಪಟ್ಟಿಗಳಲ್ಲಿ ಸೇರಿಸದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 10 ಪ್ರತಿಶತ ಮೀಸಲಾತಿಯನ್ನು ಒದಗಿಸಲಾಗಿದೆ. ನಮ್ಮ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಜಿಯವರ ಈ ದೂರದೃಷ್ಟಿಯ ಕಾರಣದಿಂದಾಗಿ ಎಲ್ಲಾ ಜಾತಿ ಮತ್ತು ಸಮುದಾಯಗಳ ಬಡವರಲ್ಲಿ ಬಡವರು ಮೀಸಲಾತಿಯ ಪ್ರಯೋಜನವನ್ನು ಪಡೆಯಲು ಸಮರ್ಥರಾಗಿದ್ದಾರೆ ಎಂದ ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+