ಕರ್ನಾಟಕದಲ್ಲಿ ಪ್ರತಿನಿತ್ಯ 1 ಲಕ್ಷ ಜನರಿಗೆ ಕೊರೊನಾವೈರಸ್ ತಪಾಸಣೆ

ಬೆಂಗಳೂರು, ಮಾರ್ಚ್ 17: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯ ಭೀತಿ ಎದುರಾಗಿದೆ. ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ರಾಜ್ಯದಲ್ಲಿ ಸೋಂಕು ಪರೀಕ್ಷೆ ವೇಗ ಹೆಚ್ಚಿಸುವುದಕ್ಕೆ ಸರ್ಕಾರ ನಿರ್ಧರಿಸಿದೆ.

ಕರ್ನಾಟಕದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಪ್ರತಿನಿತ್ಯ 1 ಲಕ್ಷ ಜನರಿಗೆ ಕೊರೊನಾವೈರಸ್ ಸೋಂಕಿನ ಪರೀಕ್ಷೆ ನಡೆಸಲಾಗುವುದು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

"ಕೊರೊನಾ ಸೋಂಕಿನ ಎರಡನೇ ಅಲೆಯನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಒಟ್ಟು ದೈನಂದಿನ ಕೋವಿಡ್ ಪರೀಕ್ಷಾ ಗುರಿಯನ್ನು 1 ಲಕ್ಷಕ್ಕೆ ಹೆಚ್ಚಿಸಲಾಗಿದೆ" ಎಂದು ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

Karnataka Increases Covid-19 Testing Target To 1 Lakh Per Day To Prevent Second Wave Of Covid-19


ಸರ್ಕಾರದ ಸುತ್ತೋಲೆಯಲ್ಲಿ ಇರುವುದೇನು:

ರಾಜ್ಯದಲ್ಲಿ ಜಿಲ್ಲಾವಾರು ಕೊರೊನಾವೈರಸ್ ಸೋಂಕು ಪತ್ತೆಗೆ ನಡೆಸುವ ಆರ್ಎಟಿ ಮತ್ತು ಆರ್ ಟಿ-ಪಿಸಿಆರ್ ಪರೀಕ್ಷೆಯನ್ನು 70,500ಕ್ಕೆ ಇಳಿಸಲಾಗಿತ್ತು. ಆದರೆ ರಾಜ್ಯದಲ್ಲಿ ಕೊವಿಡ್ ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ ಉಂಟಾಗುತ್ತಿರುವ ಹಿನ್ನೆಲೆ ತಾಂತ್ರಿಕ ಸಲಹಾ ಸಮಿತಿ ಸಲಹೆ ಹಾಗೂ ಸರ್ಕಾರದ ಸೂಚನೆಯಂತೆ ರಾಜ್ಯದ ಒಟ್ಟು ಕೊವಿಡ್ ಪರೀಕ್ಷಾ ಗುರಿಯನ್ನು 1 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಕರ್ನಾಟಕದಲ್ಲಿ ಕೊರೊನಾವೈರಸ್ ಪ್ರಕರಣ:

ಕರ್ನಾಟಕದಲ್ಲಿ ಒಂದೇ ದಿನ 1135 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 962339ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 6 ಜನ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 12403ಕ್ಕೆ ಏರಿಕೆಯಾಗಿದೆ. ಈವರೆಗೂ 940489 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+