SWR: ಸ್ವಾತಂತ್ರೋತ್ಸವ, ಗಣೇಶೋತ್ಸವ ಪ್ರಯಾಣಿಕರಿಗೆ ಸಿಹಿ ಸುದ್ದಿ! ಈ ಮಾರ್ಗಗಳಲ್ಲಿ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ
Festival Special Trains: ಸಾತಂತ್ರ್ಯ ದಿನಾಚರಣೆ ನಂತರ ಗಣೇಶ ಚತುರ್ಥಿ ಆಚರಣೆ ಎದುರಾಗಿದ್ದು, ಈ ಸಮಯದಲ್ಲಿ ಪ್ರಯಾಣಿಕರ ಸಂಚಾರ ಹೆಚ್ಚಾಗಿರುತ್ತದೆ. ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ನಿರೀಕ್ಷಿತ ಹೆಚ್ಚುವರಿ ಜನದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು (SWR) ರಾಜ್ಯದ ವಿವಿಧ ಮಾರ್ಗಗಳಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಕಾರ್ಯಾಚರಣೆ ನಡೆಸಲಿದೆ. ಹಾಗಾದ್ರೆ ಯಾವೆಲ್ಲ ಮಾರ್ಗಗಳಲ್ಲಿ ಈ ವಿಶೇಷ ರೈಲು ಸೇವೆ ಸಿಗಲಿದೆ? ಇಲ್ಲಿದೆ ಮಾಹಿತಿ
ಬೆಂಗಳೂರು ಯಶವಂತಪುರ-ಮಡಗಾಂವ್ ಒಂದು ರೈಲು (ಒಂದು ಟ್ರಿಪ್) ಮತ್ತು ಎಸ್‌ಎಂವಿಟಿ ಬೆಂಗಳೂರು-ಬೆಳಗಾವಿ ನಡುವೆ ಎರಡು (ಎರಡು ಟ್ರಿಪ್) ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಾಗುತ್ತಿದೆ. ಅವುಗಳ ವೇಳಾಪಟ್ಟಿ, ನಿಲುಗಡೆಯ ನಿಲ್ದಾಣಗಳು ಸೇರಿದಂತೆ ಅಗತ್ಯ ವಿವರ ತಿಳಿಯಿರಿ.

ಯಶವಂತಪುರ-ಮಡಗಾಂವ್ ವಿಶೇಷ ರೈಲು
* ಯಶವಂತಪುರ-ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ರೈಲು ಸಂಖ್ಯೆ (06541) 2025 ಆಗಸ್ಟ್ 14 ರಂದು ರಾತ್ರಿ 11:55 ಕ್ಕೆ ಯಶವಂತಪುರದಿಂದ ಹೊರಡಲಿದೆ. ಮರುದಿನ ಆಗಸ್ಟ್ 15 ರಂದು ಸಂಜೆ 6:05 ಕ್ಕೆ ಮಡಗಾಂವ್ ತಲುಪಲಿದೆ. ಮತ್ತೆ ಮರಳಿ, ರೈಲು ಸಂಖ್ಯೆ 06542 ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 17 ರಂದು ರಾತ್ರಿ 10:15 ಕ್ಕೆ ಮಡಗಾಂವ್‌ನಿಂದ ಹೊರಟು, ಆಗಸ್ಟ್ 18 ರಂದು ಸಂಜೆ 4:30 ಗಂಟೆಗೆ ಯಶವಂತಪುರಕ್ಕೆ ಬಂದು ಸೇರಲಿದೆ.
ನಿಲುಗಡೆ ಮಾರ್ಗಗಳು ಯಾವುವು?
ಈ ರೈಲುಗಳು ಎರಡೂ ಬದಿ ಸಂಚಾರ ವೇಳೆ ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ ರೋಡ್, ಕಬಕಪುತ್ತೂರು, ಬಂಟವಾಳ, ಸುರತಲ್, ಉಡುಪಿ, ಕುಂದಾಪುರ, ಬೈಂದೂರು, ಂದೂರು, ಭಟ್ಕಳ, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆ ನೀಡುತ್ತವೆ. 18 ಬೋಗಿಗಳನ್ನು ಹೊಂದಿದ್ದು, ಅದರಲ್ಲಿ 12 ಕ್ಲೀಪರ್ ಕ್ಲಾಸ್, 4 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್/ಡಿ ಬೋಗಿ ಹೊಂದಿವೆ.
ಬೆಂಗಳೂರು ಎಸ್‌ಎಂವಿಟಿ -ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು
* ಎಸ್‌ಎಂವಿಟಿ ಬೆಂಗಳೂರು-ಬೆಳಗಾವಿ-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳು (06571/06572) ಪೈಕಿ
ರೈಲು ಸಂಖ್ಯೆ 06571 ಎಸ್‌ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 22 ರಂದು ಸಂಜೆ 7 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಗ್ಗೆ 7:30 ಕ್ಕೆ ಬೆಳಗಾವಿ ತಲುಪಲಿದೆ.
* ಅದೇ ರೀತಿ ಬೆಳಗಾವಿ-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು (06572) 2025 ಆಗಸ್ಟ್ 23ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 5:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ಟರ್ಮಿನಲ್‌ಗೆ ಬಂದು ಸೇರಲಿದೆ.

* ಎಸ್‌ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್‌ಪ್ರೆಸ್ ರೈಲು (06573) ಆಗಸ್ಟ್ 26 ರಂದು ಸಂಜೆ 7:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಗ್ಗೆ 8:25 ಕ್ಕೆ ಬೆಳಗಾವಿ ತಲುಪಲಿದೆ. ಇನ್ನೂ ಬೆಳಗಾವಿ-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು (06574) 2025 ಆಗಸ್ಟ್ 27ರಂದು ಸಂಜೆ 5:30 ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 5:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಬರಲಿದೆ.
ನಿಲುಗಡೆ ನಿಲ್ದಾಣಗಳು ಯಾವುವು?
ಈ ಎರಡೂ ರೈಲುಗಳು ಸಹ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಂಎಂ ಹಾವೇರಿ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಳ್ಳಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿವೆ. 1 ಎಸಿ ಟು ಟೈಯರ್, 3ಎಸಿ ತ್ರಿ ಟೈಯರ್, 10 ಸ್ವೀಪರ್ ಕ್ಲಾಸ್, 3 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್‌ಎಲ್‌ಆರ್/ಡಿ ಸೇರಿ ಒಟ್ಟು 19 ಬೋಗಿಗಳನ್ನು ಹೊಂದಿರುತ್ತವೆ.
ಐಆರ್‌ಸಿಟಿ ಆಪ್ ಇಲ್ಲವೇ ಆನ್‌ಲೈನ್ ಮೂಲಕ ಎಂದಿನಂತೆ ಈ ರೈಲುಗಳಿಗೆ ಟಿಕೆಟ್ ಕಾಯ್ದಿರಿಸಬಹುದು. ಹೆಚ್ಚಿನ ಮಾಹಿತಿಗೆ ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಇಲ್ಲವೇ ರೈಲ್ವೇ ಸಹಾಯವಾಣಿ ಸಂಖ್ಯೆ 139 ಗೆ ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.












Click it and Unblock the Notifications