ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

100 ಕೋಟಿ ಡೋಸ್ ಲಸಿಕೆ ಸಾಧನೆ; ಯಾರು, ಏನು ಹೇಳಿದರು?

|
Google Oneindia Kannada News

ಬೆಂಗಳೂರು, ಅಕ್ಟೋಬರ್ 21; ಭಾರತ ಗುರುವಾರ ಶತಕೋಟಿ ಡೋಸ್ ಕೊರೊನಾ ಲಸಿಕೆ ಪೂರೈಸುವ ಮೂಲಕ ಮಹತ್ತರ ಮೈಲಿಗಲ್ಲು ಸಾಧಿಸಿದೆ. ಭಾರತದಲ್ಲಿ ವಿತರಿಸಲಾಗಿರುವ ಲಸಿಕೆಯ ಪ್ರಮಾಣ ಅಮೆರಿಕಾ ಮತ್ತು ಐರೋಪ್ಯ ರಾಷ್ಟ್ರಗಳ ಒಟ್ಟು ಲಸಿಕೆಗಿಂತ ಹೆಚ್ಚಾಗಿದೆ.

ಈ ನೂರು ಕೋಟಿ ಡೋಸ್‌ಗಳಲ್ಲಿ ಕರ್ನಾಟಕದ ಪಾಲು 6.21 ಕೋಟಿ ಡೋಸ್. ಜನವರಿ 16ರಂದು ಆರಂಭವಾದ ಲಸಿಕಾ ಅಭಿಯಾನ ಕೇವಲ 9 ತಿಂಗಳುಗಳಲ್ಲಿ ಶತಕೋಟಿ ಪೂರೈಸುವ ಮೂಲಕ ವಿಶ್ವದ ಅತ್ಯಂತ ದೊಡ್ಡ ಹಾಗೂ ವೇಗವಾದ ಲಸಿಕಾ ಅಭಿಯಾನವಿದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

 'ಅಭಿನಂದನೆ ಪ್ರಧಾನಿ ಮೋದಿ': ಲಸಿಕೆ ಮೈಲಿಗಲ್ಲಿಗೆ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಪ್ರತಿಕ್ರಿಯೆ 'ಅಭಿನಂದನೆ ಪ್ರಧಾನಿ ಮೋದಿ': ಲಸಿಕೆ ಮೈಲಿಗಲ್ಲಿಗೆ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಪ್ರತಿಕ್ರಿಯೆ

ಈ ಮಹತ್ತರ ಸಾಧನೆಗೆ ದೇಶದ ಖ್ಯಾತ ವೈದ್ಯರು ಹಾಗೂ ಆರೋಗ್ಯ ಕ್ಷೇತ್ರದ ಪರಿಣಿತರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕೇವಲ 9 ತಿಂಗಳಲ್ಲಿ ನೂರು ಕೋಟಿ ಲಸಿಕೆ ನೀಡಿರುವುದು ಬಹುದೊಡ್ಡ ಸಾಧನೆ. ಈ ಪೈಕಿ ಬಹುತೇಕ ಲಸಿಕೆ ಉಚಿತವಾಗಿದೆ. ಇಂತಹ ಅದ್ಭುತ ಶ್ರಮವಹಿಸಿದ ಸರ್ಕಾರಕ್ಕೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಆರಂಭದಿಂದಲೇ ಕರ್ನಾಟಕವು ಸೋಂಕಿನ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದೆ.

100 ಕೋಟಿ ಲಸಿಕೆ ಡೋಸ್ ಸಂಭ್ರಮಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ಕೊಟ್ಟ ಹರಿಪ್ರಸಾದ್100 ಕೋಟಿ ಲಸಿಕೆ ಡೋಸ್ ಸಂಭ್ರಮಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ಕೊಟ್ಟ ಹರಿಪ್ರಸಾದ್

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಮಾತನಾಡಿದ್ದು, "ನಮ್ಮ ವಿಜ್ಞಾನಿಗಳ ಆವಿಷ್ಕಾರ, ಪ್ರಧಾನಿ ಮೋದಿ ಅವರ ನಾಯಕತ್ವ, ಆರೋಗ್ಯ ಸಿಬ್ಬಂದಿ ಹಾಗೂ ಮುಂಚೂಣಿ ಕಾರ್ಯಕರ್ತರ ಶ್ರಮ ಇಲ್ಲದೆ ಈ ಸಾಧನೆ ಸಾಧ್ಯವಾಗುತ್ತಿರಲಿಲ್ಲ. ವಿರೋಧ ಪಕ್ಷಗಳು ನಮ್ಮ ದೇಧದ ಲಸಿಕಾ ಅಭಿಯಾನದ ಬಗ್ಗೆ ಟೀಕೆ ಮಾಡಿದ್ದವು. ಆದರೆ ನಮ್ಮ ದೇಶದ ಸಾಮರ್ಥ್ಯ ಏನು ಎಂದು ಇಂದು ಪ್ರಧಾನಿ ಮೋದಿ ಅವರು ನಿರೂಪಿಸಿದ್ದಾರೆ. 100 ಕೋಟಿ ಲಸಿಕೆಯಲ್ಲಿ ಕರ್ನಾಟಕದ ಪಾಲು 6.12 ಕೋಟಿ ಎನ್ನುವ ಬಗ್ಗೆ ತೃಪ್ತಿ ಇದೆ" ಎಂದು ಹೇಳಿದ್ದಾರೆ.

 India Completes 100 Crore Covid Vaccine Doses Who Said What

ಕೋವಿಡ್ ತಾಂತ್ರಿಕ ಸಲಾಹಾ ಸಮಿತಿ ಅಧ್ಯಕ್ಷರಾದ ಡಾ. ಎಂ. ಕೆ. ಸುದರ್ಶನ್ ಮಾತನಾಡಿ, "ಕೊರೊನಾ ಸಾಂಕ್ರಮಿಕದ ವಿರುದ್ಧ ಹೋರಾಡಲು ಲಸಿಕೆ ಅತ್ಯಂತ ಪ್ರಭಾವಿ ಅಸ್ತ್ರವಾಗಿದ್ದು, ಪ್ರಧಾನಿ ಮೋದಿ, ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರ ನೇತೃತ್ವದಲ್ಲಿ ಇದನ್ನು ಸಮರ್ಪಕವಾಗಿ ಬಳಸಲಾಗಿದೆ. ಕೊರೊನಾ ಮುಕ್ತ ದೇಶವಾಗುವತ್ತ ಭಾರತ ದೊಡ್ಡ ಹೆಜ್ಜೆ ಇಟ್ಟಿದೆ" ಎಂದು ಬಣ್ಣಿಸಿದ್ದಾರೆ.

ಐತಿಹಾಸಿಕ ಹೆಜ್ಜೆ: ಭಾರತದಲ್ಲಿ 100 ಕೋಟಿ ಡೋಸ್ ಕೊವಿಡ್-19 ಲಸಿಕೆ ವಿತರಣೆಐತಿಹಾಸಿಕ ಹೆಜ್ಜೆ: ಭಾರತದಲ್ಲಿ 100 ಕೋಟಿ ಡೋಸ್ ಕೊವಿಡ್-19 ಲಸಿಕೆ ವಿತರಣೆ

ಕೋವಿಡ್ ತಾಂತ್ರಿಕ ಸಮಿತಿಯ ಸದಸ್ಯರಾದ ಡಾ. ದೇವಿ ಶೆಟ್ಟಿ ಮಾತನಾಡಿ, "ಎರಡು ವರ್ಷಗಳ ಹಿಂದೆ ಹೊಸ ಲಸಿಕೆ ಸಂಶೋಧನೆ ಮತ್ತು ದೇಶೀಯ ಉತ್ಪಾದನೆ ಇರಲಿ, ಇಷ್ಟು ಜನಕ್ಕೆ ಅತೀ ಕಡಿಮೆ ಸಮಯದಲ್ಲಿ ಲಸಿಕೆ ನೀಡಬಹುದು ಎಂದೂ ಯಾರೂ ಯೋಚಿಸಿರಲಿಲ್ಲ. ಈ ಸಾಧನೆಯ ಶ್ರೇಯಸ್ಸು ಪ್ರಧಾನಿ ಮೋದಿ ಅವರ ನಾಯಕತ್ವಕ್ಕೆ, ರಾಜ್ಯ ಸರ್ಕಾರಗಳಿಗೆ, ಹಳ್ಳಿ ಹಳ್ಳಿಗೂ, ಮನೆ ಮನೆಗೂ ಲಸಿಕೆ ತಲುಪಿಸಲು ಶ್ರಮಿಸಿದ ಮುಂಚೂಣಿ ಕಾರ್ಯಕರ್ತರಿಗೆ ಸಲ್ಲುತ್ತದೆ. ಭಾರತ ಇಂದು ಕೋವಿಡ್ ವಿರುದ್ಧ ಹೆಚ್ಚಿನ ಸುರಕ್ಷತೆ ಸಾಧಿಸಿದೆ ಎಂದು ಹೇಳಬಹುದು" ಎಂದು ತಿಳಿಸಿದ್ದಾರೆ.

ತಾಂತ್ರಿಕ ಸಲಹಾ ಸಮಿತಿಯ ಸದಸ್ಯರಾದ ಡಾ. ಸಿ. ಎನ್. ಮಂಜುನಾಥ್ ಮಾತನಾಡಿ, "ಕೊರೊನಾ ಲಸಿಕೆ ಅಭಿಯಾನದಲ್ಲಿ ಬೇಡಿಕೆ ಮತ್ತು ಪೂರೈಕೆಯ ನಿರ್ವಹಣೆ, ಸರಬರಾಜು ಮತ್ತು ವಿತರಣೆಯ ನಿರ್ವಹಣೆ, ಆರೋಗ್ಯ ಸಿಬ್ಬಂದಿಗಳನ್ನು ನಿರಂತರವಾಗಿ ಹುರಿದಿಂಬಿಸಿವುದು ಮುಖ್ಯವಾಗಿದ್ದು ರಾಜ್ಯ ಸರ್ಕಾರ ಇದನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದೆ. ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಆಗಾಗ್ಗೆ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಲಸಿಕೆ ಹಿಂಜರಿಕೆ ತಗ್ಗಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ" ಎಂದರು.

ಮಣಿಪಾಲ್ ಆಸ್ಪತ್ರೆ ಮುಖ್ಯಸ್ಥ ಡಾ. ಸುದರ್ಶನ್ ಬಲ್ಲಾಳ್ ಮಾತನಾಡಿ, "ಲಸಿಕೆ ವಿತರಣೆಗೆ ನಾಲ್ಕು ಮುಖ್ಯವಾದ ಸವಾಲುಗಳಿತ್ತು. ಲಸಿಕೆ ಹಿಂಜರಿಕೆ ನಿವಾರಿಸುವುದು, ಉಚಿತ ಲಸಿಕೆ ಒಡಗಿಸುವುದು, ಸೂಕ್ತ ಹಂಚಿಕೆ ಹಾಗೂ ಗ್ರಾಮೀಣ ಭಾಗಗಳಿಗೆ ತಲುಪಿಸುವುದು. ಈ ನಾಲ್ಕು ಸವಾಲುಗಳನ್ನು ಪ್ರಧಾನಿ ಮೋದಿ ಅವರ ನೇತೃತ್ವದ ಸರ್ಕಾರ ಯಶಸ್ವಿಯಾಗಿ ಎದುರಿಸಿದೆ" ಎಂದು ಶ್ಲಾಘಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಡಾ. ಅರುಂಧತಿ ಚಂದ್ರಶೇಖರ್ ಮಾತನಾಡಿ, "ಇದು ಪ್ರತಿ ಭಾರತೀಯರಿಗೆ ಹೆಮ್ಮೆಯ ಕ್ಷಣ. ಜಗತ್ತಿನ ಅತಿ ದೊಡ್ಡ ಲಸಿಕಾ ಅಭಿಯಾನವು ಕೇವಲ 9 ತಿಂಗಳಲ್ಲಿ 100 ಕೋಟಿಯ ಸಾಧನೆ ಮಾಡಿದೆ. ತಳಮಟ್ಟದಲ್ಲಿ ಕೆಲಸ ಮಾಡುವ ಜೊತೆಗೆ, ಲಸಿಕಾ ಅಭಿಯಾನ ರೂಪಿಸುವ ಯೋಜನೆ, ಅನುಷ್ಠಾನ, ನಿರ್ವಹಣೆ, ಪಾಲುದಾರರ ನಿರ್ವಹಣೆ ಮೊದಲಾದ ಕ್ರಮಗಳು ಇಲ್ಲಿ ಮುಖ್ಯ ಪಾತ್ರ ವಹಿಸಿವೆ" ಎಂದರು.

Recommended Video

India vs Pakistan ಪಂದ್ಯಕ್ಕೆ ಆಟಗಾರರಲ್ಲಿ Ticket ಬೇಡಿಕೆ | Oneindia Kannada

English summary
India completed 100 crore Covid-19 vaccine doses on October 21, 2021. Who said what on this achievement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X