• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಇಡೀ ದೇಶಕ್ಕಲ್ಲ, ಕರ್ನಾಟಕಕ್ಕಂತೂ ಲಾಕ್‌ಡೌನ್ ಅಗತ್ಯವಿದೆ: ತಜ್ಞರು

|

ಬೆಂಗಳೂರು, ಮೇ 7: ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ಹಲವು ರಾಜ್ಯಗಳು ಲಾಕ್‌ಡೌನ್ ಘೋಷಿಸಿವೆ.

ಆದರೆ, ಕೆಲ ತಜ್ಞರು ಇಡೀ ಭಾರತಕ್ಕೆ ಲಾಕ್‌ಡೌನ್ ಅಗತ್ಯವಿಲ್ಲ. ಆದರೆ, ಹೆಚ್ಚೆಚ್ಚು ಸೋಂಕು ಇರುವ ಪ್ರದೇಶ ಹಾಗೂ ರಾಜ್ಯಗಳಿಗೆ ಲಾಕ್‌ಡೌನ್ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೆಚ್ಚುವರಿ ಹಣ ವಸೂಲಿಗೆ ಕಡಿವಾಣ, ಸಿಟಿ ಸ್ಕ್ಯಾನಿಂಗ್‌ಗೆ ದರ ನಿಗದಿ ಮಾಡಿದ ಸರ್ಕಾರಹೆಚ್ಚುವರಿ ಹಣ ವಸೂಲಿಗೆ ಕಡಿವಾಣ, ಸಿಟಿ ಸ್ಕ್ಯಾನಿಂಗ್‌ಗೆ ದರ ನಿಗದಿ ಮಾಡಿದ ಸರ್ಕಾರ

ಸೋಂಕು ನಿಯಂತ್ರಿಸಲು ಇಡೀ ದೇಶವನ್ನೇ ಲಾಕ್‌ಡೌನ್ ಮಾಡುವುದು ಪರಿಹಾರವಲ್ಲ ಎಂದು ಹೇಳಿದ್ದಾರೆ. ಆದರೆ ಯಾವ್ಯಾವ ರಾಜ್ಯಗಳಲ್ಲಿ ಹೆಚ್ಚು ಸೋಂಕಿದೆಯೋ ಆ ರಾಜ್ಯಗಳಲ್ಲಿ ಲಾಕ್‌ಡೌನ್ ಅಗತ್ಯವಿದೆ. ಹಾಗೆಯೇ ಇನ್ನುಳಿದ ರಾಜ್ಯಗಳಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸುವ ಅಗತ್ಯವಿದೆ.

ಸಿಎಂ ಕೊಟ್ಟ ಸುಳಿವು: 14ದಿನ ಕರ್ನಾಟಕ ಸಂಪೂರ್ಣ ಲಾಕ್ ಡೌನ್?ಸಿಎಂ ಕೊಟ್ಟ ಸುಳಿವು: 14ದಿನ ಕರ್ನಾಟಕ ಸಂಪೂರ್ಣ ಲಾಕ್ ಡೌನ್?

ಕೋವಿಡ್ ತಜ್ಞ ಸಮಿತಿಯ ಸದಸ್ಯ ಹಾಗೂ ವೈರಾಲಜಿಸ್ಟ್ ಡಾ.ವಿ.ರವಿಯವರು ಮಾತನಾಡಿ, ಪ್ರಸ್ತುತ ಬೆಳವಣಿಗೆ ಗಮನಿಸಿದರೆ, ಇಡೀ ಭಾರತಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಎಂದೆನಿಸುತ್ತದೆ. ಕೆಲವು ತಿಂಗಳ ವೈಜ್ಞಾನಿಕ ವರದಿಯನ್ನು ಆಧರಿಸಿ ಆಯಾ ರಾಜ್ಯಗಳಲ್ಲಿ ಲಾಕ್‌ಡೌನ್ ಜಾರಿಗೊಳಿಸುವ ಕುರಿತು ನಿರ್ಧಾರ ಕೈಗೊಳ್ಳಬೇಕಿದೆ.

ಕರ್ನಾಟಕದಲ್ಲಿ ಲಾಕ್‌ಡೌನ್ ಬೇಕು

ಕರ್ನಾಟಕದಲ್ಲಿ ಲಾಕ್‌ಡೌನ್ ಬೇಕು

ಕರ್ನಾಟಕದಲ್ಲಿಯೂ ಸೋಂಕು ವ್ಯಾಪಕಗೊಂಡಿದ್ದು, ಕೆಲವು ವಾರಗಳ ಬಳಿಕ ಕಡಿಮೆಯಾಗಲಿದೆ. ಹೀಗಾಗಿ ಇಡೀ ಭಾರತವನ್ನೇ ಲಾಕ್‌ಡೌನ್ ಮಾಡುವ ಬದಲು ಆಯಾ ರಾಜ್ಯಗಳಲ್ಲಿ ಮಾತ್ರ ಲಾಕ್ಡೌನ್ ಜಾರಿ ಮಾಡಬೇಕು ಎಂದು ತಿಳಿಸಿದ್ದಾರೆ. ಭಾರತದ ವಾಸ್ತವಿಕ ಸತ್ಯಗಳು ಬೇರೆಯಾಗಿದೆ. ಮಹಾರಾಷ್ಟ್ರದಲ್ಲಿ ಸೋಂಕು ವ್ಯಾಪಕಗೊಂಡಿತ್ತು. ಇದೀಗ ನಿಧಾನಗತಿಯಲ್ಲಿ ಕಡಿಮೆಯಾಗುತ್ತಿದೆ. ಮಹಾರಾಷ್ಟ್ರದಲ್ಲಿ ಅತ್ಯಂತ ಕಠಿಣ ಲಾಕ್‌ಡೌನ್ ಜಾರಿಗೆ ತರಲಾಗಿತ್ತು. ಇದೀಗ ಸಡಿಲಗೊಳಿಸಲು ಸರ್ಕಾರ ಮುಂದಾಗಿದೆ.

ಕೊರೊನಾ ಎರಡನೇ ಅಲೆ ಕುರಿತು ಕಳೆದ ವರ್ಷವೇ ಎಚ್ಚರಿಕೆ ನೀಡಿದ್ದೆ

ಕೊರೊನಾ ಎರಡನೇ ಅಲೆ ಕುರಿತು ಕಳೆದ ವರ್ಷವೇ ಎಚ್ಚರಿಕೆ ನೀಡಿದ್ದೆ

ಮಾರ್ಚ್ ಮಧ್ಯಂತರ- ಮೇ ತಿಂಗಳಿನಲ್ಲಿ ದೇಶದಲ್ಲಿ ಕೊರೊನಾ 2ನೇ ಅಲೆ ಏಳಲಿದೆ ಎಂದು ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲೇ ನಾನು ಎಚ್ಚರಿಕೆ ನೀಡಿದ್ದೆ. ನಾನಷ್ಟೇ ಅಲ್ಲ, ಹಲವು ತಜ್ಞರು ಸಲಹೆ ಹಾಗೂ ಎಚ್ಚರಿಕೆಯನ್ನು ನೀಡಿದ್ದರು.

ಕೊರೊನಾ ಮೂರನೇ ಅಲೆ ಬಗ್ಗೆ ಮಾಹಿತಿ

ಕೊರೊನಾ ಮೂರನೇ ಅಲೆ ಬಗ್ಗೆ ಮಾಹಿತಿ

ಅಕ್ಟೋಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಕೊರೊನಾ 3ನೇ ಅಲೆ ಆರಂಭವಾಗಲಿದೆ. ಇದು ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಏಕೆಂದರೆ ಮಕ್ಕಳಿಗೆ ಯಾವುದೇ ಲಸಿಕೆಗಳೂ ಬಂದಿಲ್ಲ ಎಂದು ಎಚ್ಚರಿಸಿದ್ದಾರೆ.

ರಾಜಕೀಯ ನಾಯಕರು ಸಲಹೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ

ರಾಜಕೀಯ ನಾಯಕರು ಸಲಹೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ

ಸಲಹೆಗಳನ್ನು ನಮ್ಮ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರು ನಿರ್ಲಕ್ಷ್ಯಿಸಿದ್ದರು. ಮಹಾರಾಷ್ಟ್ರದಲ್ಲಿ ಸೋಂಕು ವ್ಯಾಪಕಗೊಂಡಾಗಲೂ ಕೂಡ ಯಾವುದೇ ಕಠಿಣ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿಲ್ಲ. ಜನರು ಎಲ್ಲಾ ಎಚ್ಚರಿಕೆಗಳನ್ನು ಗಾಳಿಗೆ ತೂರಿದ್ದರು. ಸರ್ಕಾರ ಕೂಡ ಚುನಾವಣಾ ಮೆರವಣಿಗೆಗಳನ್ನು ನಡೆಸಿತು, ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿದರು.

ಆರ್ಥಿಕ ಚಟುವಟಿಕೆಗಳ ಮೇಲೆ ಕ್ರಮ

ಆರ್ಥಿಕ ಚಟುವಟಿಕೆಗಳ ಮೇಲೆ ಕ್ರಮ

ಸೋಂಕು ನಿಯಂತ್ರಣಗೊಂಡರೂ ಕೂಡ ಸರ್ಕಾರ ಆರ್ಥಿಕ ಚಟುವಟಿಕೆಗಳ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಜನರು ಕಡ್ಡಾಯವಾಗಿ ಮಾಸ್ಕ್‌ಗಳನ್ನು ಧರಿಸಲೇಬೇಕು. ಲಸಿಕೆ ಪಡೆಯಬೇಕು.

English summary
Countering a growing demand for a national lockdown, Dr V Ravi, noted virologist and member, Covid Expert Committee, Karnataka, said that India does not need one at this stage of the pandemic, when some states have started plateauing and some are witnessing a late surge.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X