ಸ್ಮೃತಿ ಇರಾನಿ ಕಿವಿ ಹಿಂಡಿ ಪಕ್ವ ರಾಜಕಾರಣ ಮಾಡಲಿ: ಮೋದಿ ವಿರುದ್ಧ ಸಿದ್ದರಾಮಯ್ಯ ಟೀಕೆ
ಬೆಂಗಳೂರು, ಅಕ್ಟೋಬರ್ 13: ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ ಸತತವಾಗಿ ಕುಸಿಯುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಚಾರವಾಗಿ ತಮ್ಮ ಸಂಪುಟ ಸಹೋದ್ಯೋಗಿಯಾದ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಸ್ಮೃತಿ ಇರಾನಿಯವರನ್ನು ಪ್ರಶ್ನಿಸುತ್ತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ ಸತತವಾಗಿ ಕುಸಿಯುತ್ತಿದ್ದರೂ ಪ್ರಧಾನಿ @narendramodi ಅವರು ಈ ವಿಚಾರವಾಗಿ ತಮ್ಮ ಸಂಪುಟ ಸಹೋದ್ಯೋಗಿಯಾದ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಸ್ಮೃತಿ ಇರಾನಿಯವರನ್ನು ಪ್ರಶ್ನಿಸುತ್ತಿಲ್ಲ, ಅವರ ಸಾಧನೆ ಏನು ಎಂಬುದನ್ನು ವಿವರಿಸುತ್ತಿಲ್ಲ. ಕೇವಲ ಅಪಕ್ವ ರಾಜಕಾರಣದಲ್ಲೇ ವ್ಯಸ್ತರಾಗದಂತೆ ಅವರಿಗೆ…
— Siddaramaiah (@siddaramaiah) October 13, 2023
ಸ್ಮೃತಿ ಇರಾನಿ ಅವರ ಸಾಧನೆ ಏನು ಎಂಬುದನ್ನು ವಿವರಿಸುತ್ತಿಲ್ಲ. ಕೇವಲ ಅಪಕ್ವ ರಾಜಕಾರಣದಲ್ಲೇ ವ್ಯಸ್ತರಾಗದಂತೆ ಅವರಿಗೆ ಕಿವಿಹಿಂಡಿ ಆಡಳಿತದೆಡೆಗೆ ಗಮನಹರಿಸಲು ಪ್ರಧಾನಿಯವರು ಇನ್ನಾದರೂ ಸೂಚಿಸಲಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತವು 111ನೇ ಸ್ಥಾನಕ್ಕೆ ಕುಸಿದಿರುವುದು ಅತ್ಯಂತ ಕಳವಳಕಾರಿ ಬೆಳವಣಿಗೆ. ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕ ದೇಶಗಳು ಮಾತ್ರವಲ್ಲ ಸುಡಾನ್, ನೈಜೀರಿಯಾ, ಕಾಂಗೋದಂತಹ ದೇಶಗಳಿಗಿಂತಲೂ ಭಾರತದ ಸ್ಥಿತಿ ಕೆಟ್ಟದಾಗಿರುವುದು ವಿಷಾದನೀಯ ಎಂದು ಅವರು ಹೇಳಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ವಿಶೇಷವಾಗಿ 2018-22ರ ಅವಧಿಯಲ್ಲಿ ಭಾರತದಲ್ಲಿನ ಮಕ್ಕಳ ಅಪೌಷ್ಟಿಕತೆಯು ಜಗತ್ತಿನಲ್ಲಿಯೇ ಹೆಚ್ಚಿರುವುದು ಅತ್ಯಂತ ಆತಂಕಕಾರಿಯಾಗಿದೆ. ದುರಂತವೆಂದರೆ ತಮ್ಮನ್ನು ವಿಶ್ವಗುರು ಎಂದು ಬಿಂಬಿಸಿಕೊಳ್ಳುವಲ್ಲಿಯೇ ಸದಾಕಾಲ ವ್ಯಸ್ತರಾಗಿರುವ ಪ್ರಧಾನಿ ಮೋದಿಯವರು ತಮ್ಮ ಆಡಳಿತದ ವೈಫಲ್ಯವನ್ನು ಎತ್ತಿಹಿಡಿಯುವ ಇಂತಹ ವಿಷಯಗಳು ಪ್ರಸ್ತಾಪವಾದೊಡನೆಯೇ ಮಹಾಮೌನಿಯಾಗುತ್ತಾರೆ, ಜಾಣಕಿವುಡು, ಜಾಣಕುರುಡು ಪ್ರದರ್ಶಿಸುತ್ತಾರೆ ಎಂದು ಹೇಳಿದ್ದಾರೆ.
ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ ಉತ್ತಮವಾಗಬೇಕೆಂದರೆ ದೇಶವು ಹಸಿವು ಮತ್ತು ಅಪೌಷ್ಟಿಕತೆ ಮುಕ್ತವಾಗಬೇಕಿದೆ. ವಿಶೇಷವಾಗಿ ಮಕ್ಕಳು ಮತ್ತು ಮಹಿಳೆಯರನ್ನು ತೀವ್ರವಾಗಿ ಕಾಡುತ್ತಿರುವ ಅಪೌಷ್ಟಿಕತೆ ದೂರಾಗಬೇಕಿದೆ. ವಿಪರ್ಯಾಸವೆಂದರೆ, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯವು ಈ ವಿಚಾರದ ಗಂಭೀರತೆಯನ್ನು ಅರಿಯುತ್ತಿಲ್ಲ.
ಪ್ರತಿ ಬಾರಿ ವರದಿ ಪ್ರಕಟವಾದಾಗಲೂ ಕೇಂದ್ರ ಸರ್ಕಾರ ವರದಿಯನ್ನು ಪ್ರಶ್ನಿಸುವ ಮೂಲಕ ತಮ್ಮ ವೈಫಲ್ಯ ಮರೆಮಾಚಲು ಹತಾಶ ಪ್ರಯತ್ನ ಮಾಡುತ್ತಾರೆ. ದೇಶವನ್ನು ಕಾಂಗ್ರೆಸ್ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರು ಪೋಲು ಮಾಡುತ್ತಿರುವ ಶ್ರಮ ಮತ್ತು ಸಂಪತ್ತನ್ನು ದೇಶವನ್ನು ಹಸಿವು ಮುಕ್ತಗೊಳಿಸಲು ಬಳಸಿದ್ದರೆ ವಿಶ್ವದ ಮುಂದೆ ಭಾರತ ತಲೆ ತಗ್ಗಿಸುವಂತಹ ಹೀನಾಯ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.
ಕರ್ನಾಟಕವನ್ನು ಹಸಿವು ಮುಕ್ತಗೊಳಿಸುವ ಉದ್ದೇಶದಿಂದ ನಮ್ಮ ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಊಟ, ಮಾತೃಪೂರ್ಣ, ಇಂದಿರಾ ಕ್ಯಾಂಟೀನ್ ನಂತಹ ಯೋಜನೆಗಳನ್ನು ಜಾರಿಗೊಳಿಸಿರುವುದನ್ನು ಪ್ರಧಾನಿಯವರಿಗೆ ನೆನಪಿಸಬಯಸುತ್ತೇನೆ. ನಮ್ಮ ಈ ಯೋಜನೆಗಳನ್ನು ಮಾದರಿಯಾಗಿಟ್ಟುಕೊಂಡು ಕೇಂದ್ರ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸುವ ಮೂಲಕ ಮಾತ್ರ ಹಸಿವಿನ ವಿರುದ್ದ ನಿರ್ಣಾಯಕ ಹೋರಾಟ ನಡೆಸಲು ಸಾಧ್ಯ ಎನ್ನುವುದನ್ನು ಸನ್ಮಾನ್ಯ ನರೇಂದ್ರ ಮೋದಿ ಅವರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ











Click it and Unblock the Notifications