• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

155214ಕ್ಕೆ ಕರೆ ಮಾಡಿದರೆ ಕಾರ್ಮಿಕರ ಮನೆ ಬಾಗಿಲಿಗೆ ಆಹಾರ

|

ಬೆಂಗಳೂರು, ಮಾರ್ಚ್.29: ಕೊರೊನಾ ವೈರಸ್ ಸೋಂಕು ಹರಡುವುದಕ್ಕೆ ಬ್ರೇಕ್ ಹಾಕುವುದಕ್ಕಾಗಿ 21 ದಿನಗಳ ಕಾಲ ಭಾರತ ಲಾಕ್ ಡೌನ್ ಗೆ ಕರೆ ನೀಡಲಾಗಿದೆ. ಇದರಿಂದ ಕೂಲಿ ಕಾರ್ಮಿಕರು ಹಸಿವಿನಿಂದ ನರಕಯಾತನೆ ಅನುಭವಿಸುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದಲ್ಲಿನ ಕೂಲಿ ಕಾರ್ಮಿಕರು ಮತ್ತು ಕಟ್ಟಡ ಕಾರ್ಮಿಕರ ಹಸಿವು ನೀಗಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಸಹಾಯವಾಣಿಗೆ ಚಾಲನೆ ನೀಡಿದೆ. ಈ ನಂಬರ್ ಗೆ ಕಾರ್ಮಿಕರು ಕರೆ ಮಾಡಿದರೆ ಆಹಾರವನ್ನು ಪೂರೈಕೆ ಮಾಡಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಕೊರೊನಾ ಸೋಂಕಿತನಿಗೆ ಚಿಕಿತ್ಸೆ ನೀಡಿದ ವೈದ್ಯ ಬಿಚ್ಚಿಟ್ಟ ಆಘಾತಕಾರಿ ವಿಷ್ಯ!ಕೊರೊನಾ ಸೋಂಕಿತನಿಗೆ ಚಿಕಿತ್ಸೆ ನೀಡಿದ ವೈದ್ಯ ಬಿಚ್ಚಿಟ್ಟ ಆಘಾತಕಾರಿ ವಿಷ್ಯ!

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರೂಪಿಸಿರುವ ವೆಬ್ ಸೈಟ್ ಹಾಗೂ ಬಡ ಕೂಲಿ ಕಾರ್ಮಿಕರ ಹಸಿವು ನೀಗಿಸಲು ಕಾರ್ಮಿಕ ಇಲಾಖೆ ಸ್ಥಾಪಿಸಿರುವ ಶುಲ್ಕ ರಹಿತ ದೂರವಾಣಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಚಾಲನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ 31 ಫೀವರ್ ಕ್ಲಿನಿಕ್‍ಗಳು ಆರಂಭ: ಸುಧಾಕರ್ಬೆಂಗಳೂರಿನಲ್ಲಿ 31 ಫೀವರ್ ಕ್ಲಿನಿಕ್‍ಗಳು ಆರಂಭ: ಸುಧಾಕರ್

155214 ಸಹಾಯವಾಣಿಗೆ ವೈದ್ಯಕೀಯ ಸಚಿವರಿಂದ ಚಾಲನೆ:

ರಾಜ್ಯದಲ್ಲಿ ಇರುವ ಕೂಲಿ ಹಾಗೂ ವಲಸೆ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯು 155214 ಸಹಾಯವಾಣಿಯನ್ನು ತೆರೆದಿದೆ. ಈ ಸಂಖ್ಯೆಗೆ ಕರೆ ಮಾಡಿದರೆ ಅವರು ಎಲ್ಲಿದ್ದಾರೆ ಎಂಬುದನ್ನು ದೃಢಪಡಿಸಿಕೊಂಡು ಸಮೀಪದ ಇಂದಿರಾ ಕ್ಯಾಂಟೀನ್ ನಲ್ಲಿ ನೀಡುವ ಆಹಾರವನ್ನು ಸ್ಥಳೀಯ ಸಂಘ-ಸಂಸ್ಥೆಗಳನ್ನು ಕಾರ್ಯಕರ್ತರ ನೆರವಿನಿಂದ ಅಗತ್ಯವಿರುವವರಿಗೆ ಆಹಾರವನ್ನು ಪೂರೈಕೆ ಮಾಡಲಾಗುತ್ತದೆ.

English summary
India Lockdown: Karnataka Government Announced Helpline For Food To Labours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X