India Rain: ಏಪ್ರಿಲ್ 27ರವರೆಗೆ ದೇಶದ ಈ ಭಾಗಗಳಲ್ಲಿ ಬಿರುಗಾಳಿ ಮಳೆ ಮುನ್ಸೂಚನೆ
India rain: ಭಾರತದ ಉತ್ತರ ಭಾಗದ ಕೆಲವೆಡೆ ಗುಡುಗು, ಮಿಂಚು ಸಹಿತ ಅಬ್ಬರದ ಮಳೆಯಾಗುತ್ತಲೇ ಇದೆ. ಹಾಗೆಯೇ ಏಪ್ರಿಲ್ 27 ರವರೆಗೆ ದೇಶದ ಹಲವು ಭಾಗಗಳಲ್ಲಿ ವರುಣ ಆರ್ಭಟಿಸಲಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈಶಾನ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಏಪ್ರಿಲ್ 24ರ ಅವಧಿಯಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದ್ದು, ಈ ಭಾಗಗಲ್ಲಿ ಗಾಳಿ ವೇಗವು ಗಂಟೆಗೆ 30-40 ಕಿಮೀ ಇರಲಿದೆ ಎಂದು ತಿಳಿಸಿದೆ.

ಏಪ್ರಿಲ್ 25ರಿಂದ 27ರವರೆಗೆ ಅಸ್ಸಾಂ ಮತ್ತು ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಅಲ್ಲಲ್ಲಿ ಚದುರಿದ ಮಳೆ ಸುರಿಯಲಿದೆ ಎಂದು ತಿಳಿಸಿದೆ.
ಪೂರ್ವ ಭಾರತದಲ್ಲಿ ಯಾವ್ಯಾವಗ ಮಳೆ?: ಏಪ್ರಿಲ್ 22ರಿಂದ 24 ರವರೆಗೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಪ್ರತ್ಯೇಕವಾದ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಅಲ್ಲದೆ ಇಲ್ಲಿ ಗಾಳಿ ವೇಗ ಗಂಟೆಗೆ 30-40 ಕಿ.ಮೀ. ಇರಲಿದೆ. ಮತ್ತೊಂದಡೆ ಏಪ್ರಿಲ್ 23ರಂದು ಗಂಗಾನದಿ ಪಶ್ಚಿಮ ಬಂಗಾಳ ಹಾಗೂ ಜಾರ್ಖಂಡ್‌ನಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಉತ್ತರ ಭಾರತದಲ್ಲಿ ಯಾವ್ಯಾವಾಗ ಎಲ್ಲೆಲ್ಲಿ ಮಳೆ?: ಏಪ್ರಿಲ್ 22ರಂದು ಜಮ್ಮು & ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಾಫರಾಬಾದ್, ಮತ್ತು ಏಪ್ರಿಲ್ 22 ಮತ್ತು 23ರಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಇನ್ನು ಏಪ್ರಿಲ್ 22ರಂದು ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿಯೂ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗಲಿದ್ದು, ಇಲ್ಲಿ ಗಾಳಿ ವೇಗವು ಗಂಟೆಗೆ 30-40 ಕಿ.ಮೀ. ಬೀಸುವ ಸಾಧ್ಯತೆಯಿದೆ. ಇನ್ನು ಏಪ್ರಿಲ್ 23ರಂದು ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಸುರಿಯಲಿದೆ. ಏಪ್ರಿಲ್ 22ರಂದು ಪಶ್ಚಿಮ ಮಧ್ಯಪ್ರದೇಶದಲ್ಲಿಯೂ ಇದೇ ವಾತಾವರಣ ಇರಲಿದೆ ಎಂದು ತಿಳಿಸಿದೆ.
ದಕ್ಷಿಣ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಏಪ್ರಿಲ್ 22 ಮತ್ತು 24ರಂದು ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಗುಡುಗು, ಮಿಂಚು ಸಹಿತ ಪ್ರತ್ಯೇಕವಾದ ಲಘು ಮಳೆಯನ್ನು ನಿರೀಕ್ಷಿಸಲಾಗಿದೆ. ಇನ್ನು ಏಪ್ರಿಲ್ 22ರಂದು ತಮಿಳುನಾಡು, ಕೇರಳ ಮತ್ತು ಮಾಹೆ ಮತ್ತು ಕರ್ನಾಟಕದ ಪ್ರತ್ಯೇಕ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಭ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ ಮತ್ತು ತೆಲಂಗಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಈ ಭಾಗದಲ್ಲಿ ಗಾಳೆ ವೇಗವು ಗಂಟೆಗೆ 40-60 ಕಿ.ಮೀ. ವರೆಗೆಗೆ ಬೀಸುವ ಸಾಧ್ಯತೆಯಿದೆ ಅಂತಾ ತಿಳಿಸಿದೆ.
ತಾಪಮಾನದ ವಿವರ: ಹವಾಮಾನ ಇಲಾಖೆ ಪ್ರಕಾರ, ಮುಂದಿನ ಐದು ದಿನಗಳಲ್ಲಿ ಗಂಗಾನದಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ಹಾಗೂ ಒಡಿಶಾದಲ್ಲಿ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಇದೇ ಅವಧಿಯಲ್ಲಿ ಪಶ್ಚಿಮ ಬಂಗಾಳ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯಲ್ಲಿ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂವನೆ ನೀಡಿದೆ.












Click it and Unblock the Notifications