Exit Poll Result 2024: India Today Axis My India ಸಮೀಕ್ಷೆ, ಕಾಂಗ್ರೆಸ್‌ಗೆ ನಿರಾಸೆ

ಬೆಂಗಳೂರು, ಜೂನ್ 01; ಲೋಕಸಭೆ ಚುನಾವಣೆ 2024ರ ಮತದಾನ ಶನಿವಾರ ಮುಕ್ತಾಯವಾಗಿದೆ. ಜೂನ್ 4ರ ಮಂಗಳವಾರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಅಂತಿಮ ಹಂತದ ಮತದಾನ ಮುಕ್ತಾಯಗೊಂಡ ಬಳಿಕ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗುತ್ತಿವೆ.

ಶನಿವಾರ India Today-Axis My India ಲೋಕಸಭೆ ಚುನಾವಣೆ 2024ರಲ್ಲಿ ಕರ್ನಾಟಕ ರಾಜ್ಯದಲ್ಲಿ ಯಾರಿಗೆ? ಎಷ್ಟು ಸೀಟು? ಎಂದು ಚುನಾವಣೋತ್ತರ ಸಮೀಕ್ಷೆಯನ್ನು ನಡೆಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ ಪಕ್ಷವಾಗಿದೆ.

India Today Axis My India Exit Poll Result 2024 Karnataka 28 Seat

India Today Axis My India ಚುನಾವಣೋತ್ತರ ಸಮೀಕ್ಷೆ ಪ್ರಕಾರ ಕರ್ನಾಟಕದ 28 ಸೀಟುಗಳ ಪೈಕಿ ಬಿಜೆಪಿ 20-22, ಜೆಡಿಎಸ್ 3, ಕಾಂಗ್ರೆಸ್‌ 3-5 ಸೀಟುಗಳಲ್ಲಿ ಗೆಲುವು ಸಾಧಿಸಲಿದ್ದಾರೆ.

ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸುತ್ತಿವೆ. ಜೆಡಿಎಸ್ ಪಕ್ಷ 3 ಸೀಟುಗಳಲ್ಲಿ ಕಣಕ್ಕಿಳಿದಿದೆ. ಬಿಜೆಪಿ 25 ಸೀಟುಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಬಿಜೆಪಿ ಶೇ 55ರಷ್ಟು, ಕಾಂಗ್ರೆಸ್ ಶೇ 41ರಷ್ಟು ಮತ್ತು ಇತರರು ಶೇ 4ರಷ್ಟು ಮತಗಳನ್ನು ಪಡೆಯಲಿದ್ದಾರೆ.

ಇಂಡಿಯಾ ಮೈತ್ರಿಕೂಟ ಎಸ್‌ಸಿಯ 55, ಎಸ್‌ಟಿ 36, ಲಿಂಗಾಯತ 15, ಒಕ್ಕಲಿಗ 24, ಕುರುಬರ ಶೇ 50ರಷ್ಟು ಮತಗಳನ್ನು ಪಡೆಯಲಿದ್ದಾರೆ.

ಇತರರು ಎಸ್‌ಸಿ 4, ಎಸ್‌ಟಿ 5, ಲಿಂಗಾಯತ 5, ಒಕ್ಕಲಿಗ 6, ಕುರುಬರ ಶೇ 4ರಷ್ಟು ಮತಗಳನ್ನು ಪಡೆಯಲಿದ್ದಾರೆ.

ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಅಂತಿಮ ಫಲಿತಾಂಶದ ಪ್ರಕಾರ ಎನ್‌ಡಿಎ ಮೈತ್ರಿಕೂಟ 361-401, ಇಂಡಿಯಾ ಮೈತ್ರಿಕೂಟ 131-166, ಇತರರು 08-20 ಸೀಟುಗಳಲ್ಲಿ ಗೆಲುವು ಸಾಧಿಸಲಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಹಿಡಿದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಕಾಂಗ್ರೆಸ್ ಸರ್ಕಾರ ಮುನ್ನಡೆಸುತ್ತಿದ್ದಾರೆ.

ಕಾಂಗ್ರೆಸ್‌ಗೆ ಹಿನ್ನಡೆ ಉಂಟು ಮಾಡಬೇಕು ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿವೆ. ಚುನಾವಣಾಣೋತ್ತರ ಸಮೀಕ್ಷೆಗಳ ಪ್ರಕಾರ ಕಾಂಗ್ರೆಸ್‌ ಎರಡಂಕಿ ಸೀಟುಗಳನ್ನು ಸಹ ಪಡೆಯುವುದಿಲ್ಲ.

2019ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಕೇವಲ 1 ಸೀಟು ಗೆದ್ದಿತ್ತು. ಈ ಬಾರಿ ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿ ಇರುವುದರಿಂದ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗಳಿಸಲಿದೆ ಎಂದು ಅಂದಾಜಿಸಲಾಗಿದೆ. ಜೂನ್‌ 4ರಂದು ಚುನಾವಣಾ ಫಲಿತಾಂಶದ ಅಂತಿಮ ಚಿತ್ರಣ ಲಭ್ಯವಾಗಲಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಸಹ ಕರ್ನಾಟಕ. ಆದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿತ್ತು.

ಬಿಜೆಪಿ 2019ರ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಈ ಬಾರಿ 20+ ಸ್ಥಾನಗಳಲ್ಲಿ ಪಕ್ಷ ಜಯಗಳಿಸಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ಆದರೆ ಕಾಂಗ್ರೆಸ್ ನಾಯಕರು ಹೆಚ್ಚಿನ ಸ್ಥಾನಗಳಿಸುವ ನಿರೀಕ್ಷೆಯಲ್ಲಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+