India Tv Pre-Poll Survey: ರಾಜ್ಯದಲ್ಲಿ ಕಾಂಗ್ರೆಸ್‌ಗೆ ಎಷ್ಟು ಸ್ಥಾನ? ಮೈತ್ರಿ ಕೂಟದ ಪಾಡೇನು?

ಕರ್ನಾಟಕದಲ್ಲಿ ಚುನಾವಣ ಕಾವು ದಿನೇ ದಿನೇ ಏರುತ್ತಿದೆ. ಗೆಲ್ಲುವ ಅಭ್ಯರ್ಥಿಗಳ ಯಾರು ಎಂಬ ಲೆಕ್ಕಾಚಾರವೂ ಆರಂಭವಾಗಿದೆ. ಅಲ್ಲದೆ ಅಭ್ಯರ್ಥಿಗಳ ಬಾಜಿ ನಡೆಯುತ್ತಿದೆ. ಈ ವೇಳೆ ವಿವಿಧ ಚುನಾವಣಾ ಸಮೀಕ್ಷೆಗಳು ತಮ್ಮ ತಮ್ಮ ಅಂಕಿ ಅಂಶಗಳನ್ನು ಪ್ರಕಟಿಸಿವೆ. ಈ ಸಾಲಿಗೆ ಈಗ ಇಂಡಿಯಾ ಟಿವಿ ಸಹ ಸೇರಿಕೊಂಡಿದೆ.

ಇಂಡಿಯಾ ಟಿವಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಎನ್‌ಡಿಯ ಮೈತ್ರಿ ಕೂಟಕ್ಕೆ ಅತಿ ಹೆಚ್ಚು ಸ್ಥಾನ ಲಭಿಸಿದೆ. ಕಳೆದ 20 ವರ್ಷದಿಂದ ಡಬಲ್‌ ಡಿಜಿಟ್‌ ಕಾಣುವಲ್ಲಿ ವಿಫಲವಾಗಿದ್ದ ಕಾಂಗ್ರೆಸ್‌ಗೆ ಮತ್ತೊಮ್ಮೆ ನಿರಾಸೆ ಕಾದಿದೆ. ಈ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್‌ ಸಿಂಗಲ್‌ ಡಿಜಿಟ್‌ನಲ್ಲೇ ಕೆಲಸ ಮುಗಿಸಿದೆ. ಈ ಸಮೀಕ್ಷೆಯನ್ನು ಗಮನಿಸಿದರೆ, ದಕ್ಷಿಣ ಭಾರತದಲ್ಲಿ ಎನ್‌ಡಿಎ ಕರ್ನಾಟಕದಲ್ಲಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ.

India TV Pre-poll Survey Bjp-Jds Set for 23 Seats in Karnataka Congress Eyeing 5

ಮೈತ್ರಿ ಕೂಟಕ್ಕೆ ಎಷ್ಟು?

ಇಂಡಿಯಾ ಟಿವಿ ನಚುನಾವಣಾ ಪೂರ್ವ ಸಮೀಕ್ಷೆಯ ಪ್ರಕಾರ, ಬಿಜೆಪಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 21 ರಲ್ಲಿ ಗೆಲುವು ಸಾಧಿಸಲಿದೆ ಎಂದು ಅಂದಾಜಿಸಲಾಗಿದೆ. ಮತ್ತೊಂದೆಡೆ, ಕಾಂಗ್ರೆಸ್ ಪಕ್ಷವು 5 ಸ್ಥಾನಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಇನ್ನು ಬಿಜೆಪಿ ಮೈತ್ರಿ ಪಕ್ಷವಾದ ಜೆಡಿಎಸ್‌ ಎರಡು ಸ್ಥಾನಗಳಲ್ಲಿ ಜಯ ಸಾಧಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆಗಳು ನಡೆಯಲಿವೆ. ಏಪ್ರಿಲ್ 26 ಮತ್ತು ಮೇ 7 ರಂದು ಮತದಾನ ನಡೆಯಲಿದ್ದು, ಜೂನ್‌ 4ರಂದು ಮತ ಏಣಿಕೆ ನಡೆಯಲಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದೆ. ಈ ಬಾರಿ ಶತಾಯಗತಾಯ ಹೆಚ್ಚಿನ ಸ್ಥಾನವನ್ನು ಗೆಲ್ಲುವ ಇರಾದೆಯನ್ನು ಹೊಂದಿದೆ. ತನ್ನ ಎರಡು ದಶಕಗಳ ದಾಖಲೆಯನ್ನು ಉತ್ತಮ ಪಡಿಸಿಕೊಳ್ಳುವ ಹುಮ್ಮಸ್ಸಿನಲ್ಲಿದೆ. ಹೀಗಾಗಿಯೇ ಕಾಂಗ್ರೆಸ್‌ ಮುಖಂಡರು ಭರ್ಜರಿ ಪ್ರಚಾರವನ್ನು ನಡೆಸಿದ್ದಾರೆ. ಹಳೇ ಮೈಸೂರು ಭಾಗವನ್ನು ಮತ್ತೆ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಕಾಂಗ್ರೆಸ್ ಪ್ಲ್ಯಾನ್‌ ಮಾಡಿದೆ. ಆದರೆ ಇಂಡಿಯಾ ಟಿವಿ ಸಮೀಕ್ಷೆ ಕಾಂಗ್ರೆಸ್‌ ಪಕ್ಷಕ್ಕೆ ಕೊಂಚ ನಿರಾಸೆ ತಂದಿದೆ.

India TV Pre-poll Survey Bjp-Jds Set for 23 Seats in Karnataka Congress Eyeing 5

ಎನ್‌ಡಿಎ ಮೈತ್ರಿ ಕೂಟಕ್ಕೆ ಕರ್ನಾಟಕದ ಜನ ಜೈ ಎಂದಿದ್ದಾರೆ. ಕರ್ನಾಟಕದಲ್ಲಿ ಮೋದಿ ಅಲೆ ಕೆಲಸ ಮಾಡಿದೆ ಎಂದು ಇಂಡಿಯಾ ಟಿವಿ ಚುನಾವಣ ಪೂರ್ವ ಸಮೀಕ್ಷೆಯಲ್ಲಿ ತಿಳಿದು ಬಂದಿದೆ.

ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28 ಕ್ಷೇತ್ರಗಳಲ್ಲಿ 25ನ್ನು ಗೆದ್ದು ಅಬ್ಬರಿಸಿತ್ತು. ಕಾಂಗ್ರೆಸ್, ಜೆಡಿಎಸ್ ಹಾಗೂ ಪಕ್ಷೇತರರು ತಲಾ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದರು. ಈ ಸಾಧನೆಯನ್ನು ಮರು ಕಳಿಸುವ ಬಿಜೆಪಿ ಆಸೆಗೆ ಪೆಟ್ಟು ಬಿದ್ದಿದೆ. ಈ ಬಾರಿ ಮೈತ್ರಿ ಮಾಡಿಕೊಂಡರೂ ಸಹ ಬಿಜೆಪಿ ಎರಡು ಸ್ಥಾನವನ್ನು ಕಳೆದುಕೊಳ್ಳಲಿದೆ ಎಂದು ಇಂಡಿಯಾ ಟಿವಿ ಚುನಾವಣೆ ಪೂರ್ವ ಸಮೀಕ್ಷೆ ತಿಳಿಸಿದೆ.

ಕಳೆದ ಬಾರಿಗೆ ಹೋಲಿಸಿದರೆ ಕಾಂಗ್ರೆಸ್‌ ನಾಲ್ಕು ಸ್ಥಾನವನ್ನು ಹೆಚ್ಚುವರಿಯಾಗಿ ಪಡೆಯುವ ನಿರೀಕ್ಷೆ ಇದೆ ಎಂದು ಈ ಸಮೀಕ್ಷೆ ತಿಳಿಸಿದೆ. ಅದು ಏನೇ ಇರಲಿ ನಿಶ್ಚಿತವಾಗಿ ಯಾರಿಗೆ ಎಷ್ಟು ಸೀಟುಗಳು ಸಿಗಲಿವೆ ಎಂಬುದನ್ನು ತಿಳಿಯಲು ಜೂನ್‌ 4ರ ವರೆಗೆ ಕಾಯಲೇ ಬೇಕು.

ಮೋದಿ ಹ್ಯಾಟ್ರಿಕ್‌

ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಹ್ಯಾಟ್ರಿಕ್‌ ಗೆಲುವಿನ ನಗೆ ಬೀರಲಿದೆ ಎಂದು ತಿಳಿಸಿದೆ. 2014, 2019ರಲ್ಲಿ ಮ್ಯಾಜಿಕ್‌ ನಂಬರ್‌ ದಾಟಿರುವ ಎನ್‌ಡಿಎ ಮೈತ್ರಿ ಕೂಟ ಮತ್ತೊಮ್ಮೆ ಸುಲಭವಾಗಿ ಅಧಿಕಾರದ ಗದ್ದುಗೆಗೆ ಏರಲಿದೆ ಎಂದು ಇಂಡಿಯಾ ಟಿವಿ ಚುನಾವಣೆ ಪೂರ್ವ ಸಮೀಕ್ಷೆ ತಿಳಿಸಿದೆ.

ಇನ್ನು ಕೇಂದ್ರದಲ್ಲಿ ಎನ್‌ಡಿಎ ಮೈತ್ರಿ ಕೂಟ ಭರ್ಜರಿ ಗೆಲುವು ಸಾಧ್ಯತೆ ಎನ್ನು ಇಂಡಿಯಾ ಟಿವಿ ಚುನಾವಣಾ ಪೂರ್ವ ಸಮೀಕ್ಷೆ ತಿಳಿಸಿದೆ. ಈ ಸಮೀಕ್ಷೆಯ ಪ್ರಕಾರ ಎನ್‌ಡಿಎ 393 ಸ್ಥಾನಗಳಲ್ಲಿ ಗೆಲುವು ನಿರೀಕ್ಷೆ ಇದೆ. ಇನ್ನು I.N.D.I.A ಮೈತ್ರಿ ಕೂಟ 99 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ ಎಂದು ಸಮೀಕ್ಷೆ ತಿಳಿಸಿದೆ. ಇನ್ನು ನರೇಂದ್ರ ಮೋದಿ ಅವರ ತವರು ಕ್ಷೇತ್ರ ಗುಜರಾತ್‌ನಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌ ಸಾಧಿಸುವ ಸಾಧ್ಯತೆ ಇದೆ ಎಂದು ಇಂಡಿಯಾ ಟಿವಿ ಸಮೀಕ್ಷೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+