ಐಎಸ್ಐಎಸ್ನಲ್ಲಿದ್ದ ಭಟ್ಕಳ ಮೂಲದ ಶಫಿ ಅರ್ಮರ್ ಹತ್ಯೆ?
ಬೆಂಗಳೂರು, ಏಪ್ರಿಲ್ 25 : ಐಎಸ್ಐಎಸ್ ಉಗ್ರ ಸಂಘಟನೆಯಲ್ಲಿದ್ದ ಭಟ್ಕಳ ಮೂಲದ ಶಫಿ ಅರ್ಮರ್ ಮೃತಪಟ್ಟಿದ್ದಾನೆ. ಸಿರಿಯಾದ ಮೇಲೆ ನಡೆದ ವಾಯುದಾಳಿಯಲ್ಲಿ ಅರ್ಮರ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದ್ದು, ಈ ಕುರಿತು ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿ ಬಂದಿದೆ.
ಶಫಿ ಅರ್ಮರ್ (26) ಮೃತಪಟ್ಟ ಬಗ್ಗೆ ಮಾಹಿತಿ ಬಂದಿದ್ದು, ಮಾಹಿತಿಯನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಒನ್ ಇಂಡಿಯಾಕ್ಕೆ ತಿಳಿಸಿದ್ದಾರೆ. ಅರ್ಮರ್ ಐಎಸ್ಐಎಸ್ನ ಭಾರತದ ಶಾಖೆಯಾಗಿರುವ ಅನ್ಸರ್-ಉತ್-ತಾಹಿದ್ನ ಸ್ಥಾಪಕ ಸುಲ್ತಾನ್ ಅರ್ಮರ್ನ ಸಹೋದರ. [ಭಟ್ಕಳ ಮೂಲದ ಶಫಿ ಭಾರತದಲ್ಲಿ ISIS ಮುಖ್ಯಸ್ಥ]

ಭಟ್ಕಳ ಮೂಲದ ಈ ಇಬ್ಬರು ಐಎಸ್ಐಎಸ್ ಉಗ್ರ ಸಂಘಟನೆಗೆ ಭಾರತೀಯರನ್ನು ನೇಮಕ ಮಾಡಲು ಅನ್ಸರ್-ಉತ್-ತಾಹಿದ್ ಸಂಘಟನೆ ಸ್ಥಾಪಿಸಿದ್ದರು. ಕಳೆದ ವರ್ಷ ಸುಲ್ತಾನ್ ಹತ್ಯೆಯಾದ ಬಳಿಕ, ಶಫಿ ಅರ್ಮರ್ ಸಂಘಟನೆಯ ನೇತೃತ್ವ ವಹಿಸಿಕೊಂಡಿದ್ದ. [ಉಗ್ರರಿಗೆ ಮುಂಬೈನಿಂದ ಸೂಚನೆ ಸಿಗುತ್ತಿತ್ತು]
ಈ ಇಬ್ಬರು ಸಹೋದರರು ಮೊದಲು ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಐಎಸ್ಐ ಸಂಘಟನೆ ಅಡಿಯಲ್ಲಿ ಕೆಲಸ ಮಾಡಲು ಒಪ್ಪದ ಇವರು ಅದರಿಂದ ಹೊರ ಬಂದಿದ್ದರು. ಭಾರತದಲ್ಲಿ ಇತ್ತೀಚೆಗೆ ಐಎಸ್ಐಎಸ್ ಪರ ಕೆಲಸ ಮಾಡುತ್ತಿದ್ದ ಉಗ್ರರನ್ನು ಬಂಧಿಸಿದ ಬಳಿಕ ಶಫಿ ಅರ್ಮರ್ ಹೆಸರು ಹಲವು ಬಾರಿ ಕೇಳಿಬಂದಿತ್ತು. [ಭಟ್ಕಳದ ಅಹಮದ್ ಗೆ ISIS ನಂಟಿಲ್ಲ]
ಶಫಿ ಅರ್ಮರ್ ಮೃತಪಟ್ಟ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಐಎಸ್ಐಎಸ್ ಸಾಮಾಜಿಕ ಜಾಲ ತಾಣಗಳಲ್ಲಿ ಈ ಬಗ್ಗೆ ಮಾಹಿತಿ ಇಲ್ಲ. ಹಿಂದೆ ಸುಲ್ತಾನ್ ಅರ್ಮರ್ ಹತ್ಯೆಯಾದಾಗ ಸಂಘಟನೆಯ ಸಾಮಾಜಿಕ ತಾಣದಲ್ಲಿ ಹಲವು ಉಗ್ರರು ಆತನಿಗೆ ಅಂತಿಮ ನಮನ ಸಲ್ಲಿಸಿದ್ದರು ಎನ್ನುತ್ತಾರೆ ಗುಪ್ತಚರ ಇಲಾಖೆ ಅಧಿಕಾರಿಗಳು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications