Railway Good News: ಈ ವಿಶೇಷ ರೈಲುಗಳ ಸೇವೆ ವಿಸ್ತರಣೆ, ಪರಿಷ್ಕೃತ ವೇಳಾಪಟ್ಟಿ ವಿವರ
Indian Railways: ಭಾರತೀಯ ರೈಲ್ವೆ ವ್ಯಾಪ್ತಿಯ ನೈಋತ್ಯ ರೈಲ್ವೆ ವಿಭಾಗದಿಂದ ಶಬರಿಮಲೆ ಯಾತ್ರೆ ಮತ್ತು ಪೊಂಗಲ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಹಿನ್ನೆಲೆಯಲ್ಲಿ ವಿಶೇಷ ರೈಲುಗಳ ಅವಧಿ ವಿಸ್ತರಣೆ ಮಾಡಲಾಗಿದೆ. ಇದರೊಂದಿಗೆ ಬಾಗ್ಮತಿ ಎಕ್ಸ್ಪ್ರೆಸ್ಗೆ ರೈಲಿನ ತಾತ್ಕಾಲಿಕ ನಿಲುಗಡೆ ಘೋಷಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶಬರಿಮಲೆ ಯಾತ್ರೆ ಮತ್ತು ಮುಂಬರುವ ಪೊಂಗಲ್ ಹಬ್ಬದ ಕಾರಣಕ್ಕೆ ಪ್ರಯಾಣಿಕರ ಸಂಚಾರ ಹೆಚ್ಚಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು 2026ರ ಜನವರಿಯಲ್ಲಿ ಹಲವು ವಾರಾಂತ್ಯ ವಿಶೇಷ ರೈಲುಗಳ ಸಂಚಾರ ವಿಸ್ತರಿಸಲಾಗಿದೆ. ಶಬರಿಮಲೆ ಭಕ್ತರಿಗಾಗಿ ಕೆಲವು ವಿಶೇಷ ರೈಲುಗಳ ಸೇವೆಯನ್ನು ಡಿಸೆಂಬರ್ 2025 ನಂತರವೂ ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಈ ಕೆಳಗಿನ ರೈಲುಗಳು ಹೊಸ ವೇಳಾಪಟ್ಟಿಯಂತೆ ಕಾರ್ಯಾಚರಣೆ ನಡೆಸಲಿವೆ.

2025 ಡಿಸೆಂಬರ್ 28ರವರೆಗೆ ಮಾತ್ರ ನಡೆಯಬೇಕಾಗಿದ್ದ ಹುಬ್ಬಳ್ಳಿ-ಕೊಲ್ಲಂ ವಿಶೇಷ ರೈಲು (07313) ಈಗ 2026ರ ಜನವರಿ 4 ರಿಂದ 25ರವರೆಗೆ ವಿಸ್ತರಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಈ ರೈಲು ಈಗ ಕೊಲ್ಲಂ ಜಂಕ್ಷನ್ಗೆ ಮಧ್ಯಾಹ್ನ 13:15ಕ್ಕೆ ತಲುಪಲಿದೆ.
ಕೊಲ್ಲಂ-ಹುಬ್ಬಳ್ಳಿ ವಿಶೇಷ ಎಕ್ಸ್ಪ್ರೆಸ್ ರೈಲು (07314) ಮುಂದಿನ ಜನವರಿ 5 ರಿಂದ 26ರವರೆಗೆ ಸಂಚರಿಸಲಿದೆ. ಬೆಂಗಳೂರಿನಿಂದ ತಿರುವನಂತಪುರ ಉತ್ತರಕ್ಕೆ ಓಡುವ ಬೆಂಗಳೂರು ಎಸ್ಎಂವಿಟಿ-ತಿರುವನಂತರಪುರ ವಿಶೇಷ ಎಕ್ಸ್ಪ್ರೆಸ್ ರೈಲು (06523) ಮತ್ತು ತಿರುವನಂತಪುರದಿಂದ- ಬೆಂಗಳೂರು ಎಸ್ಎಂವಿಟಿ ರೈಲು (06524) ವಿವಿಧ ರೈಲುಗಳ ಸೇವೆಯನ್ನೂ ಜನವರಿ ಅಂತ್ಯದವರೆಗೂ ವಿಸ್ತರಿಸಲಾಗಿದೆ.
ಬಾಗ್ಮತಿ ಎಕ್ಸ್ಪ್ರೆಸ್ಗೆ ತಾತ್ಕಾಲಿಕ ನಿಲುಗಡೆ
ಈ ಮಧ್ಯೆ, ಈಸ್ಟ್ ಸೆಂಟ್ರಲ್ ರೈಲ್ವೆ ನೀಡಿರುವ ಮಾಹಿತಿಯಂತೆ ದಭಾಂಗ-ಮೈಸೂರು-ದರ್ಭಾಂಗ ಬಾಗ್ಮತಿ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲುಗಳಿಗೆ (12577/12578) ಪಾಟ್ನಾ ಸಾಹೇಬ್ ನಿಲ್ದಾಣದಲ್ಲಿ ಎರಡು ನಿಮಿಷಗಳ ತಾತ್ಕಾಲಿಕ ನಿಲುಗಡೆ ನೀಡಲಿದೆ. ಈ ನಿಲುಗಡೆ ನಿಯಮವು ಇದೇ 2025 ಡಿಸೆಂಬರ್ 19ರಿಂದ ಜನವರಿ 2 ರವರೆಗಿನ ಅವಧಿಗೆ ಮಾತ್ರವೇ ಅನ್ವಯವಾಗಲಿದೆ.
ಈ ತಾತ್ಕಾಲಿಕ ನಿಲುಗಡೆ ಶ್ರೀ ಗುರು ಗೋವಿಂದ್ ಸಿಂಗ್ ಜೀ ಮಹಾರಾಜರ 359ನೇ ಜಯಂತಿ ಆಚರಣೆಯ ಅಂಗವಾಗಿ ಹೆಚ್ಚಿನ ಜನರ ಸಂಚಾರ ಇರುವುದನ್ನು ಗಮನಿಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ದರ್ಭಾಂಗ ಬಾಗ್ಮತಿ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು (12577) ಪಾಟ್ನಾ ಸಾಹೇಬ್ಗೆ ರಾತ್ರಿ 19:41 ಗಂಟೆಗೆ ಆಗಮಿಸಿ 19:43ಕ್ಕೆ ಅಲ್ಲಿಂದ ಹೊರಡುತ್ತದೆ. ಅದೇ ರೀತಿ ಮರಳಿ ಬರುವ ರೈಲು (12578) ರಾತ್ರಿ 23:23 ಗಂಟೆಗೆ ಇದೇ ನಿಲ್ದಾಣಕ್ಕೆ ಬಂದು 23:25ಕ್ಕೆ ಅಲ್ಲಿಂದ ಹೊರಡುತ್ತದೆ ಎಂದು ನೈಋತ್ಯ ರೈಲ್ವೆ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ್ ಕನಮಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications