ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಮಾನದಂತೆ ರೈಲ್ವೆ ಪ್ರಯಾಣಿಕರಿಂದಲೂ ಅಭಿವೃದ್ಧಿ ಶುಲ್ಕ ವಸೂಲಿಗೆ ಚಿಂತನೆ

By Nayana
|
Google Oneindia Kannada News

ಬೆಂಗಳೂರು, ಮೇ 19: ವಿಮಾನ ಪ್ರಯಾಣಿಕರಿಂದ ಅಭಿವೃದ್ಧಿ ಶುಲ್ಕವನ್ನು ವಸೂಲಿ ಮಾಡುವುದು ಎಲ್ಲರಿಗೂ ತಿಳಿದೇ ಇದೆ ಆದರೆ ರೈಲು ಪ್ರಯಾಣಿಕರ ಬಳಿಯೂ ಅಭಿವೃದ್ಧಿ ಶುಲ್ಕ ವಸೂಲಿ ಮಾಡಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ.ವಿಮಾನ ಪ್ರಯಾಣಿಕರಿಗೆ ವಿಧಿಸುವ ಅಭಿವೃದ್ಧಿ ಶುಲ್ಕದ ಮಾದರಿಯಲ್ಲೇ ರೈಲು ಪ್ರಯಾಣಿಕರಿಂದ ನಿಗದಿತ ಶುಲ್ಕ ವಸೂಲಿ ಮಾಡಲು ಇಲಾಖೆ ಚಿಂತನೆ ನಡೆಸಿದೆ.

ನಿಲ್ದಾಣಗಳ ಉನ್ನತೀಕರಣ, ವಿವಿಧ ಸೌಲಭ್ಯಗಳನ್ನು ಒದಗಿಸಲು ಈ ಮೊತ್ತ ಬಳಕೆಯಾಗಲಿದೆ. ರೈಲ್ವೆ ಇಲಾಖೆ ಸಿದ್ಧಪಡಿಸಿರುವ ಕರಡು ನೀತಿಗೆ ಕೇಂದ್ರ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ರೈಲ್ವೆ ಬಯೋ ಟಾಯ್ಲೆಟ್ ವ್ಯವಸ್ಥೆ: ಸ್ವಚ್ಛತೆಗೆ ಟೆಂಡರ್ ರೈಲ್ವೆ ಬಯೋ ಟಾಯ್ಲೆಟ್ ವ್ಯವಸ್ಥೆ: ಸ್ವಚ್ಛತೆಗೆ ಟೆಂಡರ್

500 ರೂ.ಗಿಂತ ಹೆಚ್ಚು ಮೊತ್ತದ ಟಿಕೆಟ್ ಖರೀದಿಸಿ ಕೋಚ್‌ಗಳಲ್ಲಿ ಪ್ರಯಾಣಿಸುವವರಿಗೆ 10ರೂ ಅಭಿವೃದ್ಧಿ ಶುಲ್ಕ ವಿಧಿಸಲು ಚಿಂತನೆ ನಡೆದಿದೆ. ಎಸಿ ಕೋಚ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಕಡಿಮೆ ಇರುತ್ತದೆ. ಕನಿಷ್ಠ ಪ್ರಮಾಣದ ಶುಲ್ಕ ವಿಧಿಸುವ ಕಾರಣ ಜನಸಾಮಾನ್ಯರಿಗೆ ಹೆಚ್ಚಿನ ಹೊರೆ ಬೀಳುವುದಿಲ್ಲ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Indian Railway planning impose development charges on passengers

ದೇಶಾದ್ಯಂತ 400 ರೈಲ್ವೆ ನಿಲ್ದಾಣಗಳನ್ನು ಆದುನೀಕರಣಗೊಳಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿತ್ತು. ಬಳಿಕ ಇದನ್ನು 600 ಕ್ಕೆ ಏರಿಸಲಾಗಿದೆ. ಲೋಕಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗ ಪ್ರಮುಖ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಸಿಉವಂತೆ ಅಧಿಕಾರಿಗಳಿಗೆ ರೈಲ್ವೆ ಮಂಡಳಿ ಟಾರ್ಗೆಟ್ ಕೊಟ್ಟಿದೆ.

ಒಟ್ಟು 16 ವಲಯಗಳಿಗೆ ರೈಲ್ವೆ ಮಂಡಳಿ ಮುಖ್ಯಸ್ಥ ಅಶ್ವನಿ ಲೊಹಾನಿ ಪತ್ರ ಬರೆದಿದ್ದು ಈ ವರ್ಷ ಬಜೆಟ್‌ನಲ್ಲಿ ಘೋಷಣೆಯಾಗಿರುವ ಹೊಸ ರೈಲು ಮಾರ್ಗಗಳ ನಿರ್ಮಾಣ, ಗೇಜ್ ಪರಿವರ್ತನೆ ಮತ್ತು ದ್ವಿಪಥ ಕಾಮಗಾರಿಗಳನ್ನು ನಿಗದಿತ ದಿನಾಂಕದೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.

English summary
Indian railways thinking to impose development charges for passengers in the line of airlines to develop infrastructure of railway amenities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X