• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾಗತಿಕ ಮಟ್ಟದಲ್ಲಿ ಭಾರತದ ಧ್ವನಿಗೆ ಬೆಲೆ ಧಕ್ಕಿದೆ: ಜೈಶಂಕರ್

|
Google Oneindia Kannada News

ಬೆಂಗಳೂರು, ಆಗಸ್ಟ್ 13: ಸುಮಾರು 40 ವರ್ಷಗಳ ಹಿಂದೆ ನಾನು ವಿದೇಶಾಂಗ ಸೇವೆಗೆ ಸೇರಿಕೊಂಡಾಗ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಧ್ವನಿಯೇ ಇರಲಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ನಾಯಕತ್ವದಿಂದಾಗಿ ಈಗ ನಮ್ಮ ದೇಶದ ಧ್ವನಿಗೆ ವಿಶ್ವದಲ್ಲಿ ಅಭೂತಪೂರ್ವ ಬೆಲೆ ಬಂದಿದೆ' ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಪ್ರತಿಪಾದಿಸಿದ್ದಾರೆ.

ಬೆಂಗಳೂರಿನ ಹಾರೋಹಳ್ಳಿಯಲ್ಲಿರುವ ಜೈನ್ ವಿವಿ ಆವರಣದಲ್ಲಿ ಶನಿವಾರ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ನಡೆದ 'ಹರ್ ಘರ್ ತಿರಂಗಾ' ಕಾರ್ಯಕ್ರಮದ ಚಾಲನೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ವಿದೇಶಾಂಗ ನೀತಿಯು ದೇಶದ ಜನರ ದಿನನಿತ್ಯದ ಬದುಕಿನ ಮೇಲೆ ಅಪಾರ ಪರಿಣಾಮ ಬೀರುತ್ತದೆ. ಇದರಲ್ಲಿ ಭಾರತೀಯರ ಹಿತಾಸಕ್ತಿ, ರಾಷ್ಟ್ರೀಯ ಅಭಿವೃದ್ಧಿ ಮತ್ತು ಜಾಗತಿಕ ಸಮಸ್ಯೆಗಳ ಬಗ್ಗೆ ನಾವು ತಾಳುವ ನಿಲುವು ನಿರ್ಣಾಯಕ ಪಾತ್ರ ವಹಿಸುತ್ತವೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡು ಬಳಿಕ, ಕಳೆದ ಎಂಟು ವರ್ಷಗಳಿಂದ ಈಚೆಗೆ ನಮ್ಮ ಯೋಗ, ಆಹಾರ, ಅಧ್ಯಾತ್ಮ, ಸಂಸ್ಕೃತಿ ಹಾಗೂ ಪರಂಪರೆಗಳಿಗೆ ವಿಶ್ವ ಮಟ್ಟದಲ್ಲಿ ಅಪಾರ ಗೌರವ ಪ್ರಾಪ್ತಿಯಾಗಿದೆ ಎಂದು ಜೈಶಂಕರ್ ಹೇಳಿದರು.

ತಾಯ್ನಾಡಿಗೆ ಮರಳಿದ 70 ಲಕ್ಷ ಮಂದಿ

ಮೋದಿ ಅವರ ನಾಯಕತ್ವವು ಜಗತ್ತಿಗೇ ಗೊತ್ತಾಗಿದೆ. ಕಳೆದ ಎಂಟು ವರ್ಷಗಳಲ್ಲಿ ಜಗತ್ತಿನ ನಾನಾ ದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 70 ಲಕ್ಷ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಕರೆತರಲಾಗಿದೆ. ಹಾಗೆಯೇ ವಿದೇಶಗಳಲ್ಲಿ ಓದುತ್ತಿರುವ 12 ಲಕ್ಷ ಭಾರತೀಯ ವಿದ್ಯಾರ್ಥಿಗಳ ಹಿತರಕ್ಷಣೆ ಮಾಡುವುದು ಸಾಧ್ಯವಾಗಿದೆ ಎಂದು ಅವರು ವಿವರಿಸಿದರು.

ಪರಸ್ಪರ ಬೆಸೆದುಕೊಂಡಿರುವ ಜಗತ್ತಿನಲ್ಲಿ ವಿದೇಶಾಂಗ ಸಚಿವರು ದೇಶದ ಹೂಡಿಕೆ, ತಂತ್ರಜ್ಞಾನ, ಮಧುರ ಬಾಂಧವ್ಯ, ಸಹಭಾಗಿತ್ವ, ಸಹಕಾರ ಇತ್ಯಾದಿಗಳನ್ನು ಗಮನಕ್ಕೆ ತೆಗೆದುಕೊಂಡು ಹೆಜ್ಜೆ ಇಡಬೇಕಾಗಿದೆ. ಉಕ್ರೇನ್-ರಷ್ಯಾ ಯುದ್ಧದ ಸಮಯದಲ್ಲಿ ನಾವು ಕಡಿಮೆ ಬೆಲೆಗೆ ತೈಲೋತ್ಪನ್ನಗಳನ್ನು ಪಡೆದುಕೊಂಡಿದ್ದೇವೆ.

Indias voice has been valued in globally after Modi become PM Jaishankar

ಭಾರತದ ವಿದೇಶಾಂಗ ನೀತಿಯು ಹಿಂದೆ ರಕ್ಷಣಾತ್ಮಕವಾಗಿತ್ತು. ಈಗ ತೀಕ್ಷ್ಣವಾಗಿದ್ದು, ಕೊರೋನಾ ಕಾಲದಲ್ಲಿ ನಮ್ಮ ಶಕ್ತಿ ಸಾಮರ್ಥ್ಯ ಕಂಡು ದೊಡ್ಡ ದೇಶಗಳು ಕೂಡ ಬೆರಗಾಗಿವೆ ಎಂದು ನೆರೆ ರಾಷ್ಟ್ರಗಳ ಜತೆಗಿನ ಭಾರತದ ಸ್ನೇಹ ಕುರಿತು ವಿವರಿಸಿದರು.

ಎನ್‌ಇಪಿ: 50ಸಾವಿರ ಮನೆ ಮೇಲೆ ಧ್ವಜ

ನಂತರ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವಥ್‌ ನಾರಾಯಣ್‌, ರಾಮನಗರ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಂಗವಾಗಿ 50ಸಾವಿರ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಲಾಗುತ್ತಿದೆ. ನರೇಂದ್ರ ಮೋದಿ ಅವರ ನಾಯಕತ್ವದಡಿ ರಾಜ್ಯದಲ್ಲಿ 'ರಾಷ್ಟ್ರೀಯ ಶಿಕ್ಷಣ ನೀತಿ' (ಎನ್ಇಪಿ) ಜಾರಿಯಾಗುತ್ತಿದೆ. ಗುಣಮಟ್ಟದ ಶಿಕ್ಷಣ ನಮ್ಮಲ್ಲಿ ಇದ್ದು, ಉಚಿತವಾಗಿ ಅತ್ಯುತ್ತಮ ಕೋರ್ಸುಗಳನ್ನು ಕಡ್ಡಾಯವಾಗಿ ಕಲಿಸಲಾಗುತ್ತಿದೆ ಎಂದು ಅವರು ಹೇಳಿದರು.

ಜೈಶಂಕರ್ ಅವರಂತಹ ಪ್ರತಿಭಾವಂತರು ವಿದೇಶಾಂಗ ಸಚಿವರಾಗಿರುವುದು ದೇಶದ ಸುದೈವವಾಗಿದೆ. ಇಂತಹ ಸಮರ್ಥರಿಂದ ಭಾರತದ ದಿಕ್ಕುದೆಸೆಯೇ ಬದಲಾಗುತ್ತಿದೆ ಎಂದು ಜೈಶಂಕರ್ ಅವರನ್ನು ಅಶ್ವಥ ನಾರಾಯಣ ಪ್ರಶಂಶಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅವಿನಾಶ್ ಮೆನನ್, ಎಸ್ಪಿ ಸಂತೋಷ್ ಬಾಬು, ಎಂ ಎಲ್ ಸಿ ದೇವೇಗೌಡ, ಜೈನ್ ವಿವಿ ಸ್ಥಾಪಕ ಚೆನ್ ರಾಜ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Recommended Video

   Chamarajpeteಯಲ್ಲಿ Zameer ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಅದ್ಧೂರಿ ಚಾಲನೆ | *Karnataka |OneIndia Kannada
   English summary
   India's voice has been valued in globally after Narendra Modi become a Prime Minister, Minister of External Affairs Jaishankar said.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X