Indira Canteen: ರಾಜ್ಯದಲ್ಲಿ ಹೊಸದಾಗಿ ಮತ್ತೆ 188 ಇಂದಿರಾ ಕ್ಯಾಂಟೀನ್‌ಗಳನ್ನು ತೆರೆಯುವ ಪ್ಲಾನ್‌, ಮೆನು ಹೇಗಿರುತ್ತೆ ಗೊತ್ತಾ?

ಕರ್ನಾಟಕ, ಸೆಪ್ಟೆಂಬರ್‌, 07: ಯಾವ ಯೋಜನೆಗಳು ಜನರ ಬಾಳಿಗೆ ಬೆಳಕಾಗಿವೆಯೋ ಗೊತ್ತಿಲ್ಲ. ಆದರೆ ಕಾಂಗ್ರೆಸ್‌ ಸರ್ಕಾರ ರಾಜ್ಯದ ಹಲವೆಡೆ ತೆರೆದಿರುವ ಇಂದಿರಾ ಕ್ಯಾಂಟೀನ್‌ಗಳು ಎಷ್ಟೋ ಬಡಜನರ ಹಸಿವನ್ನು ನೀಗಿಸುತ್ತಿವೆ. ಅದರಲ್ಲೂ ಕಡಿಮೆ ದರದಲ್ಲಿ ಊಟ ನೀಡಲಾಗುತ್ತಿದ್ದು, ಕೆಲಸಕ್ಕೆ ಹೋಗುವವರು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಈ ಕ್ಯಾಂಟೀನ್‌ಗಳನ್ನೇ ಆಶ್ರಯಿಸಿದ್ದಾರೆ. ಹಾಗೆಯೇ ಸರ್ಕಾರ ಮತ್ತೆ ಹೊಸದಾಗಿ ರಾಜ್ಯದಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ತೆರೆಯಲು ಮುಂದಾಗಿದೆ. ಹಾಗಾದರೆ ಮೆನು ಹೇಗಿದೆ ಎಂದು ತಿಳಿಯಿರಿ.

ಬಿಬಿಎಂಪಿ ಹೊರತುಪಡಿಸಿ ರಾಜ್ಯದಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ತೆರೆಯಲಾಗುತ್ತದೆ. ಅಲ್ಲದೆ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್‌ಗಳಿಗೆ ಹೊಸ ಜಾಗ ಮತ್ತು ನಿರ್ದಿಷ್ಟ ಊಟದ ಮೆನುವಿನ ಬಗ್ಗೆ ಪ್ರಸ್ತಾಪ ಮಾಡಲಾಗಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಮಾಹಿತಿ ನೀಡಿದ್ದಾರೆ.

Indira Canteen: 188 new Indira canteens will be start in state again

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಅವರು, ಸರ್ಕಾರದ ನಿರ್ಧಾರದದಂತೆ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೊಸ ಮೆನುಗಾಗಿ ಹೊಸ ಟೆಂಡರ್‌ಗಳನ್ನು ನೀಡಲಾಗುವುದು. ಬಿಬಿಎಂಪಿ ಹೊರತುಪಡಿಸಿ ರಾಜ್ಯದಲ್ಲಿ 197 ಇಂದಿರಾ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿವೆ. ಇನ್ನೂ ಹೆಚ್ಚುವರಿಯಾಗಿ 188 ಹೊಸ ಇಂದಿರಾ ಕ್ಯಾಂಟೀನ್‌ಗಳನ್ನು ತೆರೆಯಲಾಗುತ್ತದೆ ಎಂದು ತಿಳಿಸಿದರು.

ಬಜ್ಪೆ, ಬೆಳ್ತಂಗಡಿ, ಕಿನ್ನಿಗೋಳಿ, ಮೂಡುಬಿದಿರೆ, ಕಡಬ, ಮುಲ್ಕಿ, ಕೋಟೆಕಾರ್, ವಿಟ್ಲ, ಮತ್ತು ಸೋಮೇಶ್ವರದಲ್ಲಿ ನೂತನ ಇಂದಿರಾ ಕ್ಯಾಂಟೀನ್‌ಗಳನ್ನು ತೆರೆಯಲಾಗುತ್ತದೆ. ಪ್ರತಿಯೊಂದೂ ವಿವಿಧ ನಗರ ಸ್ಥಳೀಯ ಸಂಸ್ಥೆ ಮಿತಿಗಳ ಅಡಿಯಲ್ಲಿ ಬರುತ್ತದೆ. ಜನರಿಗೆ ಹೆಚ್ಚು ಅನುವಾಗುವ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗುತ್ತದೆ ಎಂದರು.

ಬಸ್ ನಿಲ್ದಾಣಗಳು, ಮಾರುಕಟ್ಟೆಗಳು, ಸರ್ಕಾರಿ ಆಸ್ಪತ್ರೆಗಳಂತಹ ಪ್ರಮುಖ ಸ್ಥಳಗಳಲ್ಲಿ ಇಂದಿರಾ ಕ್ಯಾಂಟೀನ್​ಗಳನ್ನು ತೆರಯಲಾಗುತ್ತದೆ. ಅಗತ್ಯ ಸ್ಥಳಗಳಲ್ಲಿ ಸಿಸಿಟಿವಿ ಮಾನಿಟರಿಂಗ್ ವ್ಯವಸ್ಥೆಗಳನ್ನು ಸಹ ನವೀಕರಿಸಲಾಗುವುದು. ಅಲ್ಲದೆ ಆನ್‌ಲೈನ್ ಬಿಲ್ಲಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ. ಈ ಹಿಂದೆ ರಾಜ್ಯದಲ್ಲಿ ಒಂದೇ ರೀತಿಯ ಆಹಾರದ ಮೆನು ಇತ್ತು. ಆದರೆ ಈಗ ಆಯಾ ಜಿಲ್ಲೆಗಳಿಗೆ ಅನುಗುಣವಾಗಿ ಸ್ಥಳೀಯ ಆಹಾರ ಮೆನುವಿಗೆ ಆದ್ಯತೆ ನೀಡಲಾಗುವುದೆಂದು ತಿಳಿಸಿದರು.

ಉಳ್ಳಾಲದ ತೊಕ್ಕೊಟ್ಟಿನಲ್ಲಿರುವ ಇಂದಿರಾ ಕ್ಯಾಂಟೀನ್​ಗೆ ದಿಢೀರ್ ಭೇಟಿ ನೀಡಿದ್ದೆ. ಈ ವೇಳೆ ಕೆಲವು ನ್ಯೂನ್ಯತೆಗಳು ಬೆಳಕಿಗೆ ಬಂದಿದೆ. ಬಿಲ್ಲಿಂಗ್ ಮಷಿನ್‌ ಇಲ್ಲ, ಸಿಸಿಟಿವಿ, ಸ್ವಚ್ಛತೆ ಇಲ್ಲದಿರುವುದು ಕಂಡುಬಂದಿದೆ. ಹೊಸ ಇಂದಿರಾ ಕ್ಯಾಂಟೀನ್​ಗಳಿಗೆ ಒಂದು ತಿಂಗಳ ಒಳಗಾಗಿ ಟೆಂಡರ್ ಕರೆಯಲಾಗುತ್ತದೆ. ಈಗಾಗಲೇ ಅಸ್ಥಿತ್ವದಲ್ಲಿರುವ ಇಂದಿರಾ ಕ್ಯಾಂಟೀನ್​ಗೂ ಟೆಂಡರ್ ಕರೆಯಲಾಗುವುದು. ಸರ್ಕಾರದ ಆದೇಶ ಜಾರಿಯಾಗುವವರೆಗೂ ಹಿಂದಿನಂತೆ ಮುಂದುವರೆಯಲಿದೆ ಎಂದರು.

ಬಡ ಜನರು ಹಸಿವಿಂದ ಇರಬಾರದು ಎನ್ನುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿದೆ. ಸರ್ಕಾರ ಸಬ್ಸಿಡಿ ಹಣವನ್ನು ಸಹ ಹೆಚ್ಚಿಗೆ ಮಾಡಿದೆ. ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ಆಹಾರವನ್ನು ವಿತರಿಸಬೇಕು. ಹಿಂದಿನ ಸರ್ಕಾರದ ಸಮಯದಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆ ಸರಿಯಾಗಿ ಆಗದೆ ಇರುವುದರಿಂದ ಮೂಲಭೂತ ಸೌಕರ್ಯಗಳ ಕೊರತೆ ಉಂಟಾಗಿದೆ. ಇವುಗಳ ದುರಸ್ತಿಗೆ ಅಗತ್ಯವಿರುವ ಅನುದಾನವನ್ನು ಒದಗಿಸಲಾಗುತ್ತದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+