ಇಂದಿರಾ ಕ್ಯಾಂಟೀನ್‌ಗೆ ಮರುಜೀವ: ಉಪಹಾರ ಮೆನು ಅಂತಿಮಗೊಳಿಸಿದ ಬಿಬಿಎಂಪಿ

ಬೆಂಗಳೂರು, ಮೇ. 26: ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಯಶಸ್ಸು ಪಡೆದಿರುವ ಕಾಂಗ್ರೆಸ್ ಈಗ ತಮ್ಮ ಅವಧಿಯಲ್ಲಿ ಜಾರಿಗೆ ಬಂದಿದ್ದ ಇಂದಿರಾ ಕ್ಯಾಂಟೀನ್‌ಗಳಿಗೆ ಮರುಜೀವ ನೀಡಲು ಪಣ ತೊಟ್ಟಿದೆ. ಇದೆ ಕಾರಣಕ್ಕೆ ಬಿಬಿಎಂಪಿ ಭಾರೀ ಸಿದ್ಧತೆ ನಡೆಸುತ್ತಿದೆ. ಹೊಸ ಸರ್ಕಾರ ಇಂದಿರಾ ಕ್ಯಾಂಟೀನ್‌ಗಳ ಪುನರಾರಂಭ ಘೋಷಿಸಿದ ಬಳಿಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರೋಗ್ಯ ಮತ್ತು ಪ್ರಮಾಣದ ಮೇಲೆ ಕೇಂದ್ರೀಕರಿಸುವ ಉಪಹಾರ ಮೆನುವನ್ನು ತಯಾರಿಸಿದೆ.

ವಿಶೇಷ ಆಯುಕ್ತ (ಆರೋಗ್ಯ) ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರ ಪ್ರಕಾರ, ಪ್ರತಿದಿನ ಇಂದಿರಾ ಕ್ಯಾಂಟೀನ್ ಮೆನುವನ್ನು ಬದಲಾಯಿಸಲಾಗುತ್ತದೆ. ಬೆಳಗಿನ ಉಪಾಹಾರಕ್ಕಾಗಿ ಉಪ್ಪಿಟ್ಟು, ಕೇಸರಿ ಬಾತ್, ಬಿಸಿಬೇಳೆ ಬಾತ್, ಪೊಂಗಲ್ ಮತ್ತು ಇಡ್ಲಿಗಳಂತಹ ತಿಂಡಿಗಳನ್ನು ನೀಡಲು ನಿರ್ಧರಿಸಲಾಗಿದೆ.

Indira Canteen breakfast menu finalises by BBMP

ಆಹಾರದ ಪ್ರಮಾಣ, ವೆಚ್ಚದ ವಿವರಗಳು ಮತ್ತು ಬಿಬಿಎಂಪಿಯಿಂದ ಟೆಂಡರ್ ಅನುಮೋದನೆಯ ಇತರ ವಿವರಗಳನ್ನು ಸರ್ಕಾರಕ್ಕೆ ಕಳುಹಿಸಲಾಗುತ್ತದೆ. ಈ ಕಾರ್ಯಕ್ರಮವನ್ನು ಆದಷ್ಟು ಬೇಗ ಪ್ರಾರಂಭಿಸಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಮಾಹಿತಿ ನೀಡಿದ್ದಾರೆ.

ಆಯುಕ್ತರು ಬುಧವಾರ ರಾತ್ರಿ ಅಧಿಕಾರಿಗಳೊಂದಿಗೆ ವಾಸ್ತವ ಸಭೆ ನಡೆಸಿ 175 ಇಂದಿರಾ ಕ್ಯಾಂಟೀನ್‌ಗಳ ಪೈಕಿ 163 ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದ್ದಾರೆ. ಆರ್‌ಆರ್‌ನಗರ ವಲಯದಲ್ಲಿ ಆರು ಮತ್ತು ದಕ್ಷಿಣ ವಲಯದ ಮೂರು ಸಾರ್ವಜನಿಕ ಕ್ಯಾಂಟೀನ್‌ಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಮಾಹಿತಿ ನೀಡಿದ ಅವರು, ಇಂದಿರಾ ಕ್ಯಾಂಟೀನ್‌ಗಳ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ವರದಿ ನೀಡುವಂತೆ ವಲಯ ಆಯುಕ್ತರು ಮತ್ತು ಆರೋಗ್ಯ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Indira Canteen breakfast menu finalises by BBMP

ಸುಮಾರು 80 ಇಂದಿರಾ ಕ್ಯಾಂಟೀನ್‌ಗಳನ್ನು ಈಗಾಗಲೇ ಮುಚ್ಚಲಾಗಿದೆ. 94 ಇತರ ಕ್ಯಾಂಟಿನ್‌ಗಳು ಕಾರ್ಯಾಚರಣೆಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಸುಮಾರು 24 ಮೊಬೈಲ್ ಕ್ಯಾಂಟೀನ್‌ಗಳನ್ನು ಸಹ ಮುಚ್ಚಲಾಗಿದೆ. ಇಂದಿರಾ ಕ್ಯಾಂಟೀನ್ ಪುನಶ್ಚೇತನಕ್ಕೆ ಸಿದ್ದರಾಮಯ್ಯ ಸರ್ಕಾರ 200 ರಿಂದ 250 ಕೋಟಿ ಬಜೆಟ್ ಮೀಸಲಿಡುವ ಸಾಧ್ಯತೆ ಇದೆ.

ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ಪುನರುಜ್ಜೀವನಗೊಳಿಸುವ ಪ್ರಯತ್ನ ಜೋರಾಗಿ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರವು ತನ್ನ ಮೆನುವಿನಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ಹಾಗೂ ಪಲ್ಯವನ್ನು ಸೇರಿಸುವ ಸಾಧ್ಯತೆಯಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವೂ ಮೆನುವಿನಲ್ಲಿ ಇನ್ನಷ್ಟು ಖಾದ್ಯಗಳನ್ನು ಸೇರಿಸಲು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+