ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆ
Recommended Video

ಬೆಂಗಳೂರು, ಅಕ್ಟೋಬರ್ 24 : 'ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಅವಕಾಶ ನೀಡಲಾಗುತ್ತದೆ' ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, 'ಬಸ್ ನಿಲ್ದಾಣಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಬೇಕು ಎಂಬ ಒತ್ತಾಯ ಕೇಳಿಬಂದಿದೆ. ಸರ್ಕಾರ ಕೇಳುವ ಮೊದಲೇ ನಾವು ಕ್ಯಾಂಟೀನ್ ತೆರೆಯಲು ಅವಕಾಶ ನೀಡುತ್ತೇವೆ' ಎಂದರು.

'ಯಾವ-ಯಾವ ನಿಲ್ದಾಣಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸ್ಥಳಾವಕಾಶವಿದೆಯೋ ಅಲ್ಲಿ ಕ್ಯಾಂಟೀನ್ ತೆರೆಯಲು ಅನುಮತಿ ನೀಡಲಾಗುತ್ತದೆ. ಇದರಿಂದ ಕೆಎಸ್ಆರ್‌ಟಿಸಿ ಕ್ಯಾಂಟೀನ್‌ಗೆ ತೊಂದರೆಯಾಗಬಾರದು' ಎಂದು ತಿಳಿಸಿದರು.
246 ಕ್ಯಾಂಟೀನ್ ನಿರ್ಮಾಣ : ಕರ್ನಾಟಕ ಸರ್ಕಾರ ಈಗಾಗಲೇ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದೆ. ರಾಜ್ಯಾದ್ಯಂತ 246 ಕ್ಯಾಂಟೀನ್ ನಿರ್ಮಾಣ ಮಾಡಲಾಗುತ್ತದೆ. 2018ರ ಜನವರಿ 1ರಂದು ಅವುಗಳನ್ನು ಉದ್ಘಾಟಿಸಲಾಗುತ್ತದೆ.
ಜಂಟಿ ಕಾರ್ಯಾಚರಣೆ : ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣವನ್ನು ಪುನರಾರಂಭಿಸಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದರು. 'ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ಸುಗಳನ್ನು ಪೀಣ್ಯ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುತ್ತದೆ. ಈಗ ಇಲ್ಲಿಗೆ ನಮ್ಮ ಮೆಟ್ರೋ ಸಂಪರ್ಕವೂ ಇರುವುದರಿಂದ ನಿಲ್ದಾಣವನ್ನು ಪುನರಾರಂಭಿಸಲಾಗುತ್ತದೆ' ಎಂದರು.












Click it and Unblock the Notifications