ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯ್ತು; ಬಾಂಬೆ ಬಾಯ್ಸ್‌ ವಿರುದ್ದ ಈಶ್ವರಪ್ಪ ಕಿಡಿ

ಹುಬ್ಬಳ್ಳಿ, ಜೂನ್‌ 26: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯ್ತು. ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದಿರುವುದಕ್ಕೆ ಸಮಸ್ಯೆ ಅನುಭವಿಸುತ್ತಿದ್ದೇವೆ. ಕಾಂಗ್ರೆಸ್‌ನ ಗಾಳಿ ಸೋಕಿರುವುದರಿಂದ ಬಿಜೆಪಿಯಲ್ಲಿ ಅಲ್ಲಲ್ಲಿ ಶಿಸ್ತು ಕಳೆದು ಹೋಗಿದೆ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಿದೆ, ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸಿಗರು ಬಂದ ನಂತರ ಪಕ್ಷದಲ್ಲಿ ಅಲ್ಪಸ್ವಲ್ಪ ಅಶಿಸ್ತು ಮೂಡಿದ್ದು, ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದ್ದಾರೆ.

Indiscipline In Party After Congress Leaders Come To BJP KS Eshwarappa Said

ಇನ್ನೂ ರಾಜ್ಯ ರಾಜಕಾರಣದಲ್ಲಿ ಬಹಿರಂಗವಾಗಿ ಹೊಂದಾಣಿಕೆ ರಾಜಕಾರಣದ ಬಗ್ಗೆ ಚರ್ಚೆ ಆಗುತ್ತಿರುವುದು ದುರ್ದೈವ. ಇಂತಹದ್ದೆನ್ನಲ್ಲ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರೊಂದಿಗೆ ಮಾತನಾಡುತ್ತೇನೆ, ಈ ಬಗ್ಗೆ ಅಧ್ಯಕ್ಷರ ಜೊತೆಗೆ ಚರ್ಚಿಸುತ್ತೇವೆ ಎಂದು ಹೇಳಿದರು.

ಇನ್ನು, ವಿಧಾನಸಭಾ ಚುನಾವಣಾ ಫಲಿತಾಂಶ ಕೆಟ್ಟ ಕನಸು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ ಕಾರ್ಯಕರ್ತರು ನಿರಾಶೆಯಲ್ಲಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಏಳು ತಂಡಗಳಲ್ಲಿ ಪ್ರವಾಸ ಕೈಗೊಂಡು ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಕೆಲಸ ಮಾಡಲಾಗುತ್ತಿದೆ. ಈ ಮೂಲಕ ಲೋಕಸಭೆ ಚುನಾವಣೆಗೆ ಬಿಜೆಪಿ ಸಕಲ ರೀತಿಯಲ್ಲಿ ಸಿದ್ದತೆ ನಡೆಸುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿ ಅನುಷ್ಟಾನಕ್ಕೆ ಎಲ್ಲಿಂದ ಹಣ ಹೊಂದಿಸುತ್ತದೆ ಎಂಬುದನ್ನು ಶೀಘ್ರ ಮುಖ್ಯಮಂತ್ರಿಗಳು ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದ ಅವರು, ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ಪೂರ್ವ ತನ್ನ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ, ಅಧಿಕಾರಕ್ಕೆ ಬಂದ ಮೊದಲ‌ ಕ್ಯಾಬಿನೆಟ್‌ನಲ್ಲಿ ಎಲ್ಲವನ್ನೂ ಜಾರಿಗೆ ತರುತ್ತೇವೆ ಎಂದು ಹೇಳಿ, ಒಂದುವರೆ ತಿಂಗಳು ಕಳೆಯುತ್ತಾ ಬಂದರೂ ಈವರೆಗೆ ಜಾರಿಗೆ ತರದೇ ರಾಜ್ಯದ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಇದೀಗ ಕೇವಲ ಮಾಧ್ಯಮಗಳ ಮುಂದೆ ಉಡಾಫೆ ಹೇಳಿಕೆ ಕೊಡುತ್ತಾ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ದವಿದ್ಯುತ್ ದರ ಹೆಚ್ಚಳ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಕೆಇಆರ್‌ಸಿ ಸ್ವಾಭಾವಿಕವಾಗಿ ತನ್ನ ಪ್ರಸ್ತಾವನೆ ಸಲ್ಲಿಸಿದೆ. ಅದನ್ನು ನಮ್ಮ ಸರ್ಕಾರ ತಿರಸ್ಕಾರ ಮಾಡಿತ್ತು. ಇದೀಗ ಕಾಂಗ್ರೆಸ್ ಅದನ್ನು ಒಪ್ಪಿಗೆ ಸೂಚಿಸಿದೆ. ಈ ದಿಸೆಯಲ್ಲಿ ವಿದ್ಯುತ್ ದರ ಹೆಚ್ಚಳ ಆಗಿದೆ. ಹೀಗಾಗಿ ಯಾರ ಅವಧಿಯಲ್ಲಿ ಕೆಇಆರ್ ಸಿ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ ಎಂಬುದನ್ನು ಸರ್ಕಾರ ಬಹಿರಂಗ ಪಡಿಸಲಿ, ಅದನ್ನು ಬಿಟ್ಟು ರಾಜಕೀಯ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ವಾಗ್ದಾಳಿ ನಡೆಸಿದರು.

ಇನ್ನೂ ಕಾಂಗ್ರೆಸ್‌ ವಿರುದ್ದ ವಾಗ್ದಾಳಿ ನಡೆಸಿದ ಈಶ್ವರಪ್ಪ, ಕಾಂಗ್ರೆಸ್ ಎಂದರೆ ಸುಳ್ಳಿನ ಪಕ್ಷ, ಅವರು ಸುಳ್ಳು ಹೇಳೋದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಐದು ಗ್ಯಾರಂಟಿ ನೀಡಿ, ಇದೀಗ ಪ್ರತಿಯೊಂದಕ್ಕೂ ಒಂದೊಂದು ಕಾರಣ ನೀಡುತ್ತಿದೆ. ಅಕ್ಕಿ ವಿಚಾರದಲ್ಲಿ ಕೂಡಾ ಕೇಂದ್ರ ಸರ್ಕಾರವನ್ನು ದೂರುತ್ತಿದೆ. ಇದು ಖಂಡನೀಯ, ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳ ಅನುಷ್ಟಾನವಾಗುವವರೆಗೆ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನ ಮಂಡಲ ಅಧಿವೇಶನದ ಒಳಗಡೆ, ಹೊರಗಡೆ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+