ಗೌರಿ ಹತ್ಯೆ : ಇಂದ್ರಜಿತ್ ಲಂಕೇಶ್ ಪತ್ರಿಕೆ ಸಂಪಾದಕರ ವಿಚಾರಣೆ

ಬೆಂಗಳೂರು, ಸೆಪ್ಟೆಂಬರ್ 28 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಎಸ್‌ಐಟಿ ಚುರುಕುಗೊಳಿಸಿದೆ. ಇಂದ್ರಜಿತ್ ಲಂಕೇಶ್ ಒಡೆತನದ ಪತ್ರಿಕೆಯ ಸಂಪಾದಕರನ್ನು ಎಸ್‌ಐಟಿ ವಿಚಾರಣೆ ನಡೆಸಿದೆ.

ಎಸ್‌ಐಟಿ ಪೊಲೀಸರು ಈಗಾಗಲೇ ಗೌರಿ ಲಂಕೇಶ್ ಸಹೋದರ ಇಂದ್ರಜಿತ್ ಲಂಕೇಶ್ ಅವರನ್ನು ವಿಚಾರಣೆ ನಡೆಸಿದ್ದರು. ತನಿಖೆಯನ್ನು ಮುಂದುವರೆಸಿರುವ ಪೊಲೀಸರು, ಇಂದ್ರಜಿತ್ ಲಂಕೇಶ್ ಒಡೆತನದ ಲಂಕೇಶ್ ಪತ್ರಿಕೆ ಸಂಪಾದಕರಾದ ಚಕ್ರವರ್ತಿ ಅವರನ್ನು ವಿಚಾರಣೆ ನಡೆಸಿದ್ದಾರೆ.

 Indrajit Lankesh magazine editor Chakravarthy questioned by SIT

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌರಿ ಲಂಕೇಶ್ ತಾಯಿ ಇಂದಿರಾ ಅವರ ಹೇಳಿಕೆ ಪಡೆಯಲಾಗಿದೆ. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಅಗ್ನಿ ಶ್ರೀಧರ್, ಮುತ್ತಪ್ಪ ರೈ ಸೇರಿದಂತೆ ಅನೇಕರ ಹೇಳಿಕೆಗಳನ್ನು ದಾಖಲು ಮಾಡಿಕೊಂಡಿದ್ದಾರೆ.

ಸೆ.5ರಂದು ರಾಜರಾಜೇಶ್ವರಿ ನಗರದ ನಿವಾಸದ ಮುಂಭಾಗದಲ್ಲಿ ಗೌರಿ ಲಂಕೇಶ್ ಹತ್ಯೆ ನಡೆದಿತ್ತು. ಕರ್ನಾಟಕ ಸರ್ಕಾರ ಹತ್ಯೆ ಪ್ರಕರಣದ ತನಿಖೆಗೆ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿದೆ. ಇದುವರೆಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+