Industry Big Update: ಉತ್ತರ ಕರ್ನಾಟಕದಲ್ಲಿ 'ವಿದ್ಯುತ್‌ಚಾಲಿತ ವಾಹನ ತಯಾರಿಕಾ ಘಟಕ'
ಬೆಂಗಳೂರು, ಜೂನ್ 29: ಕರ್ನಾಟಕ ರಾಜ್ಯ ಸರ್ಕಾರ ವಿದೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆಗೆ ಮಹತ್ವದ ಚರ್ಚೆ ಜೊತೆಗೆ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳನ್ನು ಮನದಟ್ಟು ಮಾಡಿಕೊಡುತ್ತಿದೆ. ಇದರ ಭಾಗವಾಗಿ ಸಾಕಷ್ಟು ಬಂಡವಾಳ ಹರಿದು ಬರುವ ನಿರೀಕ್ಷೆಯಲ್ಲಿ ಸರ್ಕಾರ ಇದೆ.
ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳು ಇಲ್ಲ, ಅಭಿವೃದ್ಧಿ ಆಗುತ್ತಿಲ್ಲ ಎಂಬ ಕೂಗಿನ ಮಧ್ಯದಲ್ಲಿ ಜಪಾನ್ ಪ್ರವಾಸದಲ್ಲಿರುವ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಈ ಭಾಗದ ಜನರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಕರ್ನಾಟಕದ ಸಚಿವರ ನೇತೃತ್ವದ ನಿಯೋಗವು ಜಪಾನ್‌ನಲ್ಲಿ 5ನೇ ದಿನವಾದ ಶುಕ್ರವಾರ ಪಾನಾಸೋನಿಕ್ ಎನರ್ಜಿ, ನಿಡೆಕ್ ಕಾರ್ಪೊರೇಷನ್, ಶಿಮಡ್ಜು ಕಾರ್ಪೊರೇಷನ್, ಒಸಾಕಾ ಗ್ಯಾಸ್, ಜಾಯಿನ್ ಮತ್ತು ಸುಮಿತೊಮೊ ಕಾರ್ಪೋರೇಷನ್ ಕಂಪನಿಗಳ ಪ್ರಮುಖರನ್ನು ಭೇಟಿಯಾಗಿ ಫಲಪ್ರದ ಸಮಾಲೋಚನೆ ನಡೆಸಿತು.
ಹುಬ್ಬಳ್ಳಿಯಲ್ಲಿ ಬೃಹತ್ ಕೈಗಾರಿಕಾ ಘಟಕ
ಈ ವೇಳೆ ವಿದ್ಯುತ್‌ಚಾಲಿತ ಮೋಟರ್ಸ್ ಮತ್ತು ಸಂಬಂಧಿತ ಬಿಡಿಭಾಗಗಳನ್ನು ತಯಾರಿಸುವ ನಿಡೆಕ್ ಕಾರ್ಪೊರೇಷನ್ ರಾಜ್ಯದಲ್ಲಿ ತನ್ನ ವಹಿವಾಟು ವಿಸ್ತರಿಸಲು ಒಲವು ವ್ಯಕ್ತಪಡಿಸಿದೆ. ಕಂಪನಿಯು ₹456 ಕೋಟಿ (55 ದಶಲಕ್ಷ ಡಾಲರ್) ವೆಚ್ಚದಲ್ಲಿ ಹುಬ್ಬಳ್ಳಿಯಲ್ಲಿ 2025ರ ವೇಳೆಗೆ ವಿದ್ಯುತ್‌ಚಾಲಿತ ವಾಹನ ತಯಾರಿಕಾ ಘಟಕ ಆರಂಭಿಸುವ ಬಗ್ಗೆ ಬದ್ಧತೆ ತೋರಿದೆ.
ನಿಡೆಕ್ ಸಮೂಹದ ಕಂಪನಿಗಳಿಗೆ ಸಾಫ್ಟ್‌ವೇರ್ ಒದಗಿಸುವ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರ (ಆರ್‌ಆ್ಯಂಡ್‌ಡಿ) ಸ್ಥಾಪಿಸಲು ರಾಜ್ಯದಲ್ಲಿ ಅಗತ್ಯವಾದ ನೆರವು ಕಲ್ಪಿಸಲಾಗುವುದು ಎಂದೂ ಸಚಿವರು ಭರವಸೆ ನೀಡಿದರು.

ಪಾಲುದಾರಿಕೆ ಕಂಪನಿಗಳಿಗೆ ಅಗತ್ಯ ನೆರವು
ಬ್ಯಾಟರಿ ತಯಾರಿಕೆ ಹಾಗೂ ನವೀಕರಿಸಬಹುದಾದ ಇಂಧನ ಉತ್ಪನ್ನಗಳನ್ನು ತಯಾರಿಸುವ ಪಾನಾಸೋನಿಕ್ ಎನರ್ಜಿಯು ಬ್ಯಾಟರಿ ಬಿಡಿಭಾಗ ಪೂರೈಕೆ ಹೆಚ್ಚಿಸಲು ಬೆಂಗಳೂರಿನ ನವೋದ್ಯಮಗಳಾದ ನೊಪೊ ಮತ್ತು ಲಾಗ್ 9 ಜೊತೆ ಪಾಲುದಾರಿಕೆ ಮಾಡಿಕೊಳ್ಳಲು ರಾಜ್ಯ ಸರ್ಕಾರವು ಅಗತ್ಯ ನೆರವು ಒದಗಿಸಲಿದೆ ಎಂದು ಸಚಿವರು ಕಂಪನಿಯ ನಿರ್ದೇಶಕರಿಗೆ ಭರವಸೆ ಕೊಟ್ಟರು.
ಭಾರತೀಯ ವಿಜ್ಞಾನ ಸಂಸ್ಥೆ (IISc) ಯಂತಹ ಸಂಶೋಧನಾ ಸಂಸ್ಥೆಗಳ ಜೊತೆಗಿನ ಸಹಯೋಗದ ಸಾಧ್ಯತೆಗಳನ್ನೂ ಸಭೆಯಲ್ಲಿ ಚರ್ಚಿಸಲಾಯಿತು.
05 ವರ್ಷಗಳಲ್ಲಿ ₹4,980 ಕೋಟಿ ಹೂಡಿಕೆ
ಒಸಾಕಾ ಗ್ಯಾಸ್ ಕಂಪನಿಯು ಭಾರತದಲ್ಲಿ ಈಗಾಗಲೇ ₹1,992 ಕೋಟಿ ಹೂಡಿಕೆ ಮಾಡಿದ್ದು, ಮುಂದಿನ 5 ವರ್ಷಗಳಲ್ಲಿ ₹4,980 ಕೋಟಿ ಬಂಡವಾಳ ಹೂಡಿಕೆ ಮಾಡಲಿದೆ. ರಾಜ್ಯದಲ್ಲಿ ಕಂಪನಿಯ ಗೃಹ ಮತ್ತು ಕೈಗಾರಿಕಾ ಬಳಕೆಯ ಅನಿಲ ಉತ್ಪಾದನಾ ಘಟಕಗಳ ವಿಸ್ತರಣೆಗೆ ಅಗತ್ಯ ಬೆಂಬಲ ನೀಡಲಾಗುವುದು ಎಂದು ನಿಯೋಗವು ತಿಳಿಸಿದೆ.
ಶಿಮಡ್ಜು ಕಾರ್ಪೊರೇಷನ್‌ನ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಕತ್ಸುಅಕಿ ಕೈಟೊ ಅವರ ಜೊತೆಗೆ ನಿಯೋಗವು ಸಮಾಲೋಚನೆ ನಡೆಸಿತು. ರಾಜ್ಯದಲ್ಲಿ ತನ್ನ ವಹಿವಾಟು ಹಾಗೂ ಸಂಶೋಧನೆ ಹಾಗೂ ಅಭಿವೃದ್ಧಿ (ಆರ್‌ಆ್ಯಂಡ್‌ಡಿ) ಚಟುವಟಿಕೆ ವಿಸ್ತರಿಸಲು ಕಂಪನಿಯು ತೀವ್ರ ಆಸಕ್ತಿ ಹೊಂದಿರುವುದು ದೃಢಪಟ್ಟಿದೆ.
ರಾಜ್ಯದಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ಮತ್ತು ಸುಧಾರಿತ ವೈದ್ಯಕೀಯ ತಂತ್ರಜ್ಞಾನದ ವಿಸ್ತರಣಾ ಯೋಜನೆಗಳಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ರಾಜ್ಯ ಸರ್ಕಾರದ ಪರವಾಗಿ ಭರವಸೆ ನೀಡಲಾಗಿದೆ.
ಭಾರೀ ಬಂಡವಾಳ ಹೂಡಿಕೆಗೆ ಸರ್ಕಾರ ಭರವಸೆ
ಜಪಾನಿನ ಕಂಪನಿಗಳು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಅಗತ್ಯ ನೆರವು ಒದಗಿಸಲಾಗುವುದು ಎಂದು ಜಾಯಿನ್ (JOIN) ಪ್ರತಿನಿಧಿಗಳು ರಾಜ್ಯದ ನಿಯೋಗಕ್ಕೆ ಭರವಸೆ ನೀಡಿದ್ದಾರೆ.ರೇಷನ್, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ನಿಡೆಕ್ ಕಾರ್ಪೊರೇಷನ್ನಿನ ಸಿಇಒ ಮಿತ್ಸುಯಾ ಕಿಶಿಡಾ, ಕಾರ್ಯನಿರ್ವಾಹಕ ಉಪಾಧ್ಯಕ್ಷ ತತ್ಸುಯಾ ನಿಶಿಮೊತೊ ಅವರನ್ನು ಜಪಾನಿನ ಒಸಾಕಾದಲ್ಲಿ ಶುಕ್ರವಾರ ಭೇಟಿಯಾದರು.
ಆವಿಷ್ಕಾರ ಮುನ್ನಡೆ, ಸುಸ್ಥಿರತೆ ಮತ್ತು ಆರ್ಥಿಕ ಬೆಳವಣಿಗೆಗೆ ಕರ್ನಾಟಕ ರಾಜ್ಯವು ಸರ್ವ ರೀತಿಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರುವುದನ್ನು ಈ ಸರಣಿ ಸಭೆಗಳಲ್ಲಿ ಜಪಾನಿನ ಬಹುರಾಷ್ಟ್ರೀಯ ಕಂಪನಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.
ಸಚಿವರು ವೈದ್ಯಕೀಯ ಉಪಕರಣಗಳನ್ನೂ ತಯಾರಿಸುವ ಶಿಮಡ್ಜು ಕಾರ್ಪೊರೇಷನ್ನಿನ್ ಕ್ಯುಟೊ ಘಟಕದಲ್ಲಿ ಅತ್ಯಾಧುನಿಕ ವೈದ್ಯಕೀಯ ಸಾಧನ ಪರಿಶೀಲಿಸಿದರು. ಅವುಗಳ ಮಾಹಿತಿ ಪಡೆದರು.
ಕರ್ನಾಟಕದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಾಗೂ ಪ್ರಮುಖ ಕಂಪನಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಸಭೆಯ ಪ್ರಮುಖ ಅಂಶಗಳು
* ₹ 456 ಕೋಟಿ ವೆಚ್ಚದಲ್ಲಿ ಹುಬ್ಬಳ್ಳಿಯಲ್ಲಿ ಮುಂದಿನ ವರ್ಷ ವಿದ್ಯುತ್‌ಚಾಲಿತ ವಾಹನ ತಯಾರಿಕಾ ಘಟಕ ಆರಂಭಿಸಲು ಬದ್ಧತೆ ತೋರಿದ ನಿಡೆಕ್ ಕಾರ್ಪೊರೇಷನ್.
* ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ₹ 4,980 ಕೋಟಿ ಹೂಡಿಕೆ ಮಾಡಲಿರುವ ಒಸಾಕಾ ಗ್ಯಾಸ್.
* ಭಾರತದ ವಿವಿಧೆಡೆ ಇದುವರೆಗೆ ₹1,992 ಕೋಟಿ ಹೂಡಿಕೆ ಮಾಡಿರುವ ಒಸಾಕಾ ಗ್ಯಾಸ್.
* ರಾಜ್ಯದಲ್ಲಿ ವಹಿವಾಟು ವಿಸ್ತರಿಸಲು ಶಿಮಡ್ಜು ಕಾರ್ಪೊರೇಷನ್ ಒಲವು.
* ಬೆಂಗಳೂರಿನ ನವೋದ್ಯಮ ಮತ್ತು ಸಂಶೋಧನಾ ಸಂಸ್ಥೆಗಳ ಜೊತೆಗಿನ ಪಾನಾಸೋನಿಕ್ ಎನರ್ಜಿ ಪಾಲುದಾರಿಕೆಗೆ ರಾಜ್ಯ ಸರ್ಕಾರದ ನೆರವಿನ ಭರವಸೆ ನೀಡಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications