KRS Dam: ಭಾರಿ ಮಳೆಗೆ ಹೇಮಾವತಿ, ಕೆಆರ್ಎಸ್ ಮತ್ತು ಮೆಟ್ಟೂರು ಡ್ಯಾಂ ಒಳಹರಿವು ಹೆಚ್ಚಳ
ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ರೈತರಲ್ಲಿ ಸಂತಸ ಮೂಡಿಸಿದೆ. ರಾಜ್ಯದಲ್ಲಿ ಕೃತ್ತಿಕಾ ಮಳೆ ಆರಂಭವಾದಾಗಿನಿಂದ ಭಾರಿ ಮಳೆಯಾಗುತ್ತಿದ್ದು, ಹಳ್ಳ, ತೊರೆ, ನದಿಗಳು ಜೀವ ಪಡೆದುಕೊಂಡಿವೆ. ಹೇಮಾವತಿ, ಕೆಆರ್ ಎಸ್ ಮತ್ತು ಮೆಟ್ಟೂರು ಜಲಾಶಯಗಳಿಗೆ ಒಳಹರಿವು ಹೆಚ್ಚಿದೆ.
ಹಲವು ಜಿಲ್ಲೆಗಳಲ್ಲಿ ಕೆರೆ ಕಟ್ಟೆಗಳು ಭರ್ತಿಯಾಗಿದ್ದು, ನೀರಿನ ಹರಿವು ಆರಂಭವಾಗಿದೆ. ಪರಿಣಾಮ ಜಲಾಶಯಗಳ ಒಳಹರಿವು ಕೂಡ ದಿನೇ ದಿನೇ ಹೆಚ್ಚಾಗುತ್ತಿದ್ದು, ಜಲಾಶಯಗಳು ಮರುಜೀವ ಪಡೆದುಕೊಳ್ಳುತ್ತಿವೆ.

ಕೃಷ್ಣರಾಜ ಸಾಗರ ಜಲಾಶಯಕ್ಕೆ ಒಳಹರಿವು ನಿಧಾನವಾಗಿ ಹೆಚ್ಚಾಗುತ್ತಿದ್ದು, ರೈತರಲ್ಲಿ ಸಂತಸ ತಂದಿದೆ. ಕಳೆದ ವರ್ಷ ಭೀಕರ ಬರಗಾಲ ಮತ್ತು ಹೆಚ್ಚಿನ ತಾಪಮಾನದಿಂದ ಜಲಾಶಯದಲ್ಲಿ ನೀರಿನ ಸಂಗ್ರಹ ಮಟ್ಟ ಆರು ವರ್ಷದಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿತ್ತು. ಬರದ ನಡುವೆಯೂ ತಮಿಳುನಾಡಿಗೆ ನೀರು ಹರಿಸಿದ್ದು ಮತ್ತಷ್ಟು ಸಂಕಷ್ಟಕ್ಕೆ ಕಾರಣವಾಗಿತ್ತು.
ಒಳ ಹರಿವು ಪ್ರಮಾಣ ಹೆಚ್ಚಳ
ಹೇಮಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಹಾಸನ ಜಿಲ್ಲೆಯಲ್ಲಿರುವ ಗೊರೂರು ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಈ ವರ್ಷದಲ್ಲಿ 15 ನವೆಂಬರ್ 2023ರ ಬಳಿಕ ಇದೇ ಮೊದಲ ಬಾರಿಗೆ 500+ ಕ್ಯೂಸೆಕ್ಸ್ ನೀರಿನ ಒಳಹರಿವು ದಾಖಲಿಸಿದೆ. ಮೇ 20 ರಂದು ಗೊರೂರು ಜಲಾಶಯದ ಒಳಹರಿವು 628 ಕ್ಯೂಸೆಕ್ಸ್ ಆಗಿದೆ.
#Hemavathi Dam in Gorur , Hassan sees inflow of 628 cusecs today morning.
— ರವಿ ಕೀರ್ತಿ ಗೌಡ (@ravikeerthi22) May 20, 2024
First 500+ cusecs inflow this year & sees above 500 cusecs after 15th November 2023.#Kaveri #KarnatakaRains
ಕೃಷ್ಣರಾಜಸಾಗರದ ಒಳಹರಿವು ಹೆಚ್ಚಳ
ಮೇ 20 ರಂದು ಬೆಳಗ್ಗೆ 8 ಗಂಟೆ ವೇಳೆಗೆ ಕೃಷ್ಣರಾಜಸಾಗರ ಜಲಾಶಯದ ಒಳಹರಿವು 1416 ಕ್ಯೂಸೆಕ್ಸ್ ಆಗಿತ್ತು. ಮೈಸೂರು, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಸದ್ಯ ಕೆಆರ್ ಎಸ್ ಜಲಾಶಯದಲ್ಲಿ 80.72 ಅಡಿ ನೀರು ಸಂಗ್ರಹ ಇದೆ. ಒಟ್ಟು ಸಂಗ್ರಹ ಸಾಮರ್ಥ್ಯ 49.452 ಆಗಿದ್ದು, ಈಗ 11.107 ಟಿಎಂಸಿ ನೀರು ಇದೆ. ಒಟ್ಟು ಒಳಹರಿವು 1416 ಕ್ಯೂಸೆಕ್ಸ್ ಇದ್ದರೆ, ಹೊರ ಹರಿವು 270 ಕ್ಯೂಸೆಕ್ಸ್ ಇದೆ.
20.05.2024 ರಂತೆ ಪ್ರಮುಖ #ಜಲಾಶಯದ ಮಟ್ಟ.
— Karnataka State Natural Disaster Monitoring Centre (@KarnatakaSNDMC) May 20, 2024
Major #Reservoir Level as of 20.05.2024.
Source: WRDO & KPCL. pic.twitter.com/zuswVcTg8I
ಮೆಟ್ಟೂರು ಜಲಾಶಯದಲ್ಲಿ ಭಾರಿ ಮಳೆ
ಇನ್ನು ಕಾವೇರಿ ನದಿ ಪಾತ್ರದಲ್ಲಿರುವ ಮೆಟ್ಟೂರು ಡ್ಯಾಂ ವ್ಯಾಪ್ತಿಯಲ್ಲಿ ಕೂಡ ವ್ಯಾಪಕ ಮಳೆಯಾಗಿದೆ. ಮೇ 1 ರಿಂದ ಇದುವರೆಗೂ 139.4 ಮಿಮೀ ಮಳೆಯಾಗಿದೆ. ಜಲಾಶಯದ ಒಳಹರಿವು 390 ಕ್ಯೂಸೆಕ್ಸ್ ಇದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.
ಇನ್ನೂ ಒಂದು ವಾರ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಮುಂಗಾರು ಆಗಮನಕ್ಕೆ ದಿನಗಣನೆ ಆರಂಭವಾಗಿದ್ದು, ರಾಜ್ಯದಲ್ಲಿ ಎಲ್ಲಾ ಜಲಾಶಯಗಳು ತುಂಬುವ ಸಾಧ್ಯತೆ ಇದೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications