ಸಿದ್ದರಾಮಯ್ಯ ಸುನ್ನ* ಮಾಡಿಸಿಕೊಳ್ಳುವುದೊಂದೇ ಬಾಕಿ ಎಂದ ಬಿಜೆಪಿ ಪ್ರಭಾವಿ ನಾಯಕ!

wakf board controversy: ವಕ್ಫ್‌ ಆಸ್ತಿ ವಿವಾದ ತಾರಕಕ್ಕೇರಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ನಾಯಕರೊಬ್ಬರು ಸ್ಫೋಟಕ ಹೇಳಿಕೆ ಕೊಟ್ಟಿದ್ದು, ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ವಕ್ಫ್‌ ಬೋರ್ಡ್‌ನಿಂದ ರೈತರಿಗೆ ನೋಟಿಸ್ ನೀಡಿರುವ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲವನ್ನೇ ಮೂಡಿಸಿದೆ. ಇದೀಗ ಬಿಜೆಪಿ ನಾಯಕ ಎಲ್ಲೆ ಮೀರಿ ಹೇಳಿಕೆ ಕೊಟ್ಟಿದ್ದಾರೆ. ಈ ಹೇಳಿಕೆ ಈಗ ಎಲ್ಲೆಡೆ ವೈರಲ್ ಆಗ್ತಿದೆ. ಸಿಎಂ ಸಿದ್ದರಾಮಯ್ಯ ಬಗ್ಗೆ ಬಿಜೆಪಿ ನಾಯಕ ಹೇಳಿದ್ದೇನು, ಆಕ್ರೋಶವೇಕೆ ಎನ್ನುವ ವಿವರ ಇಲ್ಲಿದೆ.

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುವ ಸಂದರ್ಭದಲ್ಲಿಯೇ ವಕ್ಫ್‌ ಬೋರ್ಡ್‌ ಆಸ್ತಿ ವಿವಾದ ತೀವ್ರ ಜಿದ್ದಾಜಿದ್ದಿನ ವಾಕ್ಸಮರಕ್ಕೆ ಕಾರಣವಾಗಿದೆ. ವಕ್ಫ್‌ ಬೋರ್ಡ್‌ನಿಂದ ರೈತರಿಗೆ ನೋಟಿಸ್‌ ನೀಡಲಾಗಿದೆ ಎನ್ನುವ ವಿಚಾರವನ್ನೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಪ್ರಧಾನವಾಗಿ ಇರಿಸಿಕೊಂಡು ಪ್ರತಿಭಟನೆ ನಡೆಸುತ್ತಿವೆ. ಆದರೆ, ಬಿಜೆಪಿ ನಾಯಕ ಕೊಟ್ಟಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

Influential BJP leader says Siddaramaiah s Sunnat is the only thing left

ವಕ್ಫ್ ಬೋರ್ಡ್‌ ಆಸ್ತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮಾಜಿ ಸಂಸದ ಹಾಗೂ ಬಿಜೆಪಿ ನಾಯಕ ಪ್ರತಾಪ್‌ ಸಿಂಹ ಅವರು ವಾಗ್ದಾಳಿಯನ್ನೇ ನಡೆಸಿದ್ದಾರೆ. ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿ ರೈತರಿಗೆ ನೀಡಲಾಗಿದ್ದ ನೋಟಿಸ್ ಹಿಂದಕ್ಕೆ ಪಡೆದಿರುವ ಬಗ್ಗೆ ಪ್ರತಾಪ್‌ ಸಿಂಹ ಮಾತನಾಡಿದ್ದಾರೆ. ಈಗಾಗಲೇ ಕೊಟ್ಟಿರುವ ನೋಟಿಸ್‌ಗಳನ್ನು ವಾಪಸ್‌ ಪಡೆಯುವಂತೆ ಸೂಚನೆ ಕೊಟ್ಟು ಬಿಟ್ಟರೆ ಎಲ್ಲಾ ಸಮಸ್ಯೆ ಪರಿಹಾರವಾಗುತ್ತಾ ಹೇಳಿ ಅಂತ ಕೇಳಿದ್ದಾರೆ.

ವಕ್ಫ್‌ ಆಸ್ತಿ ವಿವಾದ ಎನ್ನುವುದು ಇಂದು ನೆನ್ನೆಯ ವಿವಾದವಲ್ಲ. ಬಿಜೆಪಿ ಅವರು ಅಧಿಕಾರದಲ್ಲಿ ಇದ್ದ ಸಂದರ್ಭದಲ್ಲೂ ನೋಟಿಸ್ ನೀಡಲಾಗಿತ್ತು. ನಮ್ಮ ಸರ್ಕಾರದ ಅವಧಿಯಲ್ಲಿ ಸಹ ನೋಟಿಸ್‌ ನೀಡಲಾಗಿದೆ. ಆದರೆ, ಈ ನೋಟಿಸ್‌ಗಳನ್ನು ಈಗಾಗಲೇ ವಾಪಸ್‌ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು. ಈ ಹೇಳಿಕೆಗೆ ಇದೀಗ ಪ್ರತಾಪ್‌ ಸಿಂಹ ಅವರು ಪ್ರತಿಕ್ರಿಯಿಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಒಳ್ಳೆಯ ಉದ್ದೇಶವಿದ್ದಿದ್ದರೆ, ನೋಟಿಸ್ ವಾಪಸ್‌ ಪಡೆಯುವುದಕ್ಕೆ ಬದಲಿಗೆ ಗೆಝೆಟ್‌ ನೋಟಿಫಿಕೇಶನ್ ವಾಪಸ್‌ ಪಡೆದುಕೊಳ್ಳಬೇಕಾಗಿತ್ತು. ಅಲ್ಲದೇ ಕರ್ನಾಟಕ ಭೂಸುಧಾರಣಾ ಕಾಯ್ದೆಯನ್ನು ಸಹ ವಕ್ಫ್‌ಗೆ ಅನ್ವಯ ಮಾಡಬಹುದಿತ್ತಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ನಿಜಕ್ಕೂ ಈ ಕಾಂಗ್ರೆಸ್‌ ಸರ್ಕಾರಕ್ಕೆ ರೈತರ ಮೇಲೆ ಕಾಳಜಿ ಇದೆ ಎನ್ನುವುದು ನಿಜವೇ ಆದರೆ, ಗೆಝೆಟ್ ನೋಟಿಫಿಕೇಶನ್ ವಾಪಸ್ ಪಡೆಯಲಿ ಎಂದು ಪ್ರತಾಪ್ ಸಿಂಹ ಸವಾಲು ಹಾಕಿದ್ದಾರೆ.

ಸಿದ್ದರಾಮಯ್ಯ ಸುನ್ನತ್ ಮಾಡಿಸಿಕೊಳ್ಳುವುದು ಬಾಕಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಸಮುದಾಯದ ಓಲೈಕೆಗೆ ಇನ್ನಿಲ್ಲದಂತೆ ಕಷ್ಟಪಡುತ್ತಿದ್ದಾರೆ. ಅವರು ಈಗ ಸುನ್ನತ್‌ ಮಾಡಿಸಿಕೊಳ್ಳುವುದು ಮಾತ್ರ ಬಾಕಿ ಉಳಿದಿದೆ. ಉಳಿದಂತೆ ಎಲ್ಲಾ ವಿಚಾರಗಳಲ್ಲೂ ಸಿದ್ದರಾಮಯ್ಯ ಅವರು ಸಂಪೂರ್ಣವಾಗಿ ಮುಸ್ಲಿಂ ಆಗಿ ಬದಲಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ತಿರುಗೇಟು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ಪ್ರತಾಪ್ ಸಿಂಹ ಮಹಾನ್ ಕೋಮುವಾದಿ. ಕೋಮುವಾದಿಗಳಿಂದ ಇದನ್ನು ಬಿಟ್ಟು ಬೇರೆನು ನಿರೀಕ್ಷೆ ಮಾಡಲು ಸಾಧ್ಯ ಹೇಳಿ. ಇವರಿಗೆ ಸಂವಿಧಾನದ ಬಗ್ಗೆ ಗೌರವ ಎನ್ನುವುದು ಇಲ್ಲ. ಕೋಮುವಾದದ ಮೂಲಕವೇ ರಾಜಕೀಯದಲ್ಲಿ ನೆಲೆ ಕಂಡುಕೊಳ್ಳಬೇಕು ಎಂದು ಪ್ರಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+