Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ₹6,000 ಹಣ ಬಿಡುಗಡೆ: ಬಿಗ್ ಅಪ್ಡೇಟ್.!
ಬೆಂಗಳೂರು, ಅಕ್ಟೋಬರ್14: 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನ ನೀಡುವ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಇದೀಗ ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯವರ ಖಾತೆ ಪ್ರತಿ ತಿಂಗಳು 2000 ರೂಪಾಯಿ ಜಮಾ ಮಾಡುವುದನ್ನ ವಿಳಂಬ ಮಾಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರ ಮತಗಳ ಮೇಲೆ ಕಣ್ಣೀಟ್ಟು ಈ ಯೋಜನೆಯನ್ನ ಜಾರಿಗೊಳಿಸಿತ್ತು. ಅದರಂತೆ ರಾಜ್ಯದ ಮಹಿಳೆಯರಿಗೆ ಆರ್ಥಿಕ ಸಬಲೀಕರಣವನ್ನು ಒದಗಿಸುವ ಗುರಿಯೊಂದಿಗೆ ಈ ಯೋಜನೆಯನ್ನ ಜಾರಿಗೆ ತರಲಾಗಿದೆ.
ಗೃಹ ಲಕ್ಷ್ಮಿ ಯೋಜನೆಯು ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿದ್ದು, ಕುಟುಂಬದ ಆರ್ಥಿಕ ಚಟುವಟಿಕೆಗಳನ್ನು ಸುಗಮಗೊಳಿಸಲು ಮಹಿಳೆಯರಿಗೆ ಈ ಆರ್ಥಿಕ ಬೆಂಬಲವು ಮಹಿಳೆಯರಿಗೆ ಆತ್ಮವಿಶ್ವಾಸವನ್ನು ತುಂಬುವ ಜೊತೆಗೆ, ಕುಟುಂಬದ ಒಟ್ಟಾರೆ ಯೋಗಕ್ಷೇಮವನ್ನು ಸುಧಾರಿಸುತ್ತದೆ. ಇನ್ನೂ ಸರ್ಕಾರ ರಚನೆಯ ಸಂದರ್ಭದಲ್ಲಿ ಹಂತ ಹಂತವಾಗಿ ಪಂಚ ಗ್ಯಾರಂಟಿ ಯೋಜನೆಯನ್ನ ಜಾರಿಗೊಳಿಸಿದ ಕಾಂಗ್ರೆಸ್ ಆರಂಭದಲ್ಲಿ ಮಹಿಳೆಯವರ ಖಾತೆಗೆ 2000 ಹಣವನ್ನ ಪ್ರತಿ ತಿಂಗಳು ಜಮಾ ಮಾಡುತ್ತಿತ್ತು, ಇದೀಗ ಕಳೆ ಆರು ತಿಂಗಳಿನಿಂದ ಮಹಿಳೆಯರ ಬ್ಯಾಂಕ್ ಖಾತೆಗೆ ಸರಿಯಾಗಿ ಹಣ ಜಮಾ ಆಗುತ್ತಿಲ್ಲ ಎಂದು ರಾಜ್ಯದ ಮಹಿಳಾ ಫಲಾನುಭವಿಗಳು ಅಸಮಾಧಾನವನ್ನ ಹೊರಹಾಕಿದ್ದಾರೆ.

ಇನ್ನೂ ಗೃಹ ಲಕ್ಷ್ಮಿ ಯೋಜನೆಯಡಿ ಸುಮಾರು 21 ಕಂತುಗಳು, ಅಂದರೆ ಬರೋಬ್ಬರಿ 42,000 ರೂಪಾಯಿ ಲಕ್ಷಾಂತರ ಮಹಿಳೆಯರ ಖಾತೆಗೆ ಜಮಾ ಆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದು, ಆದಷ್ಟು ಬೇಗ ಬಾಕಿ ಕಂತಿನ ಹಣ ಬಿಡುಗಡೆಯಾಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.
ಇನ್ನೂ ದೀಪಾವಳಿ ಹಬ್ಬದ ವೇಳೆಗೆ ಜುಲೈ ಮತ್ತು ಆಗಸ್ಟ್ ತಿಂಗಳ ಬಾಕಿ ಇರುವ ಎರಡು ಕಂತುಗಳ 4,000 ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ. ಈ ಹಣವು ದೀಪಾವಳಿಯ ಒಂದು ವಾರದೊಳಗೆ, ಅಂದರೆ 7 ರಿಂದ 10 ದಿನಗಳ ಒಳಗೆ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಅಲ್ಲದೇ ಸೆಪ್ಟೆಂಬರ್ ತಿಂಗಳ 2,000 ಕಂತಿನ ಹಣವನ್ನು ಅಕ್ಟೋಬರ್ ಕೊನೆಯಲ್ಲಿ ಅಥವಾ ನವೆಂಬರ್ ಆರಂಭದಲ್ಲಿ ಬಿಡುಗಡೆ ಮಾಡಲು ಯೋಜನೆಯಿದೆ ಎಂದು ತಿಳಿದು ಬಂದಿದೆ.
ಕೆಲವು ಫಲಾನುಭವಿಗಳಿಗೆ ಜೂನ್ ತಿಂಗಳ ಕಂತಿನ ಹಣ ಇನ್ನೂ ತಲುಪಿಲ್ಲ. ಇದಕ್ಕೆ ತಾಂತ್ರಿಕ ಸಮಸ್ಯೆಗಳು ಅಥವಾ ಬ್ಯಾಂಕ್ ಖಾತೆಯ ವಿವರಗಳಲ್ಲಿನ ತಪ್ಪುಗಳು ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಅಲ್ಲದೇ ಈ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರವು ಕ್ರಮ ಕೈಗೊಂಡಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರಿಗೆ ಆರ್ಥಿಕ ಸಬಲೀಕರಣವನ್ನು ಒದಗಿಸುವ ನಮ್ಮ ಗುರಿಯನ್ನು ನಾವು ದೃಢವಾಗಿ ಮುಂದುವರಿಸಿದ್ದೇವೆ. ಬಾಕಿ ಕಂತುಗಳನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಸರ್ಕಾರವು ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.












Click it and Unblock the Notifications