ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಎಸ್ಐ ಪರೀಕ್ಷೆಯಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ; ಸಿಎಂಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ

|
Google Oneindia Kannada News

ಬೆಂಗಳೂರು, ಜನವರಿ 18: ಕರ್ನಾಟಕ ಪೊಲೀಸ್ ಇಲಾಖೆಯ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ಕುರಿತು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.

ಪಿಎಸ್‌ಐ ಪರೀಕ್ಷೆಯಲ್ಲಿ ಇಂಗ್ಲಿಷ್ ಭಾಷಾಂತರ ವಿಭಾಗವನ್ನು ನೇಮಕಾತಿಗೆ ಕಡ್ಡಾಯಗೊಳಿಸಿರುವುದನ್ನು ರದ್ದು ಮಾಡುವುದರ ಮೂಲಕ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಬೇಕೆಂದು ನಾನು ಮುಖ್ಯಮಂತ್ರಿಗಳನ್ನು ಈ ಮೂಲಕ ಒತ್ತಾಯಿಸುತ್ತಿದ್ದೇನೆ ಎಂದು ಟ್ವೀಟ್ ಸಹ ಮಾಡಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಪ್ರಾದೇಶಿಕ ಸಮಾನತೆಯನ್ನು ಸಾಧಿಸಲು ಅಡ್ಡಿಯಾಗಿರುವ, ಆ ಮೂಲಕ ಕಾನೂನು ಪರಿಪಾಲನೆಯಲ್ಲಿ ಪರೋಕ್ಷವಾಗಿ ಅಸಮತೋಲನತೆಗೆ ಕಾರಣವಾಗಿರುವ ಈ ನಿಯಮವನ್ನು ರದ್ದು ಮಾಡುವುದು ಪೊಲೀಸ್ ಇಲಾಖೆಯ ದೂರದೃಷ್ಟಿಯಿಂದಲೂ ಒಳಿತು ಎಂದಿದ್ದಾರೆ.

injustice to rural candidates in psi examination; congress mla who wrote to cm bommai

ಶಾಸಕ ರಿಜ್ವಾನ್ ಅರ್ಷದ್ ಬರೆದ ಪತ್ರದಲ್ಲೇನಿದೆ?
ವಿಷಯ; ಪಿಎಸ್ಐ ಪರೀಕ್ಷೆಯಲ್ಲಿ ಗ್ರಾಮೀಣ ಕನ್ನಡ ಅಭ್ಯರ್ಥಿಗಳಿಗೆ ಆಗುವ ಅನ್ಯಾಯವನ್ನು ತಡೆಯಬೇಕೆಂದು ಮನವಿ

ಪಿಎಸ್ಐ ಪರೀಕ್ಷೆಯ ಪೇಪರ್ ಒಂದರಲ್ಲಿ ಕನ್ನಡ ಸಾಲುಗಳನ್ನು ಇಂಗ್ಲೀಷ್‌ಗೆ ಅನುವಾದ ಮಾಡಲು ಹಾಗೂ ಇಂಗ್ಲೀಷ್ ಸಾಲುಗಳನ್ನು ಕನ್ನಡಕ್ಕೆ ಅನುವಾದ ಮಾಡಲು ಕೇಳಲಾಗಿದೆ. ಇದರಿಂದ ಗ್ರಾಮೀಣ ಭಾಗದ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಪಡೆದ ಅಭ್ಯರ್ಥಿಗಳಿಗೆ ತೀರಾ ಅನ್ಯಾಯವಾಗುತ್ತಿದೆ.

ಕನ್ನಡ ಮಾಧ್ಯಮದಲ್ಲಿ ಕಲಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಪ್ರಾಥಮಿಕ ಜ್ಞಾನ ಇರುತ್ತದೆ. ಆದರೆ ಇಂಗ್ಲೀಷ್‌ಗೆ ಅನುವಾದ ಮಾಡುವುದು ಅವರಿಗೆ ಕಷ್ಟವಾಗುತ್ತದೆ. ಹೀಗಾಗಿ ಅರ್ಹ ಅಭ್ಯರ್ಥಿಗಳು ಸ್ಪರ್ಧೆಯಲ್ಲಿ ಹಿಂದೆ ಬಿದ್ದು, ಸಮಾನ ಅವಕಾಶ ವಂಚಿತರಾಗುತ್ತಿದ್ದಾರೆ.

injustice to rural candidates in psi examination; congress mla who wrote to cm bommai

ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಎಲ್ಲಾ ಅಭ್ಯರ್ಥಿಗಳಿಗೂ ಅಮಾನ ಅವಕಾಶ ಸಿಗುವಂತೆ ಖಾತರಿ ಪಡಸಬೇಕಾದದ್ದು ಸರ್ಕಾರದ ಕರ್ತವ್ಯವಾಗಿರುತ್ತದೆ. ಕೇಂದ್ರ ಹಾಗೂ ರಾಜ್ಯ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲೂ ಭಾಷೆಗೆ ಸಂಬಂಧಿಸಿದ ಪರೀಕ್ಷೆ ಅಥವಾ ಪ್ರಶ್ನೆಗಳು ಇದ್ದರೂ, ಅವುಗಳನ್ನು ಕೇವಲ ಅರ್ಹತಾ ಮಟ್ಟಕ್ಕೆ ಮಾತ್ರ ಪರಿಗಣಿಸಲಾಗುತ್ತದೆ.

Recommended Video

ಹಿಮಪಾತದಲ್ಲಿ ಸಿಲುಕಿದ 14 ಜನರನ್ನು ರಕ್ಷಿಸಿದ ಭಾರತೀಯ ಸೇನೆ | Oneindia Kannada

ಅದರ ಅಂಕಗಳನ್ನು ಅಂತಿಮ ಪರೀಕ್ಷೆಗೆ ಪರಿಗಣಿಸುವುದಿಲ್ಲ. ಆದರೆ ಪಿಎಸ್ಐ ಪರೀಕ್ಷೆಯಲ್ಲಿ ಮಾತ್ರ ಇಂತಹ ತದ್ವಿರುದ್ಧ ನೀತಿ ಅನುಸರಿಸಲಾಗುತ್ತಿದೆ. ಇದರಿಂದ ನಮ್ಮ ಕನ್ನಡ ಮಾಧ್ಯಮ ಅಭ್ಯರ್ಥಿಗೆ ನಾವೇ ಅನ್ಯಾಯ ಮಾಡಿದಂತಾಗುತ್ತದೆ.

ಆದ್ದರಿಂದ ತಾವು ಈ ಬಗ್ಗೆ ಗಮನಹರಿಸಿ ಸಂಬಂಧಪಟ್ಟವರಿಗೆ ಈ ಇಂಗ್ಲೀಷ್ ಅನುವಾದ ಪ್ರಶ್ನೆಯನ್ನು ಕೈಬಿಡುವಂತೆ ನಿರ್ದೇಶನ ನೀಡಬೇಕೆಂದು ಈ ಮೂಲಕ ವಿನಂತಿಸಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶಿವಾಜಿನಗರ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಪತ್ರದಲ್ಲಿ ತಿಳಿಸಿದ್ದಾರೆ.

English summary
Congress MLA Rizwan Arshad has written to Chief Minister Basavaraj Bommai about the injustice being done to Kannada media candidates in the PSI recruitment test.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X