ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಿಮ್ಮ ಕೆಲಸದ ಆತ್ಮಾವಲೋಕನ ಮಾಡಿಕೊಳ್ಳಿ : ಸಿಎಂ

|
Google Oneindia Kannada News

ಬೆಂಗಳೂರು, ಅ. 13 : 'ಶಿಕ್ಷೆ ಮತ್ತು ಶಿಸ್ತು ಕ್ರಮಗಳಿಂದ ತಪ್ಪಿಸಿಕೊಳ್ಳಲು ದಕ್ಷತೆ, ಪ್ರಾಮಾಣಿಕತೆ ಹಾಗೂ ಪಾರದರ್ಶಕತೆಯಿಂದ ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ, ತಮ್ಮ ಕಾರ್ಯನಿರ್ವಹಣೆ ಕುರಿತಂತೆ ವಾರಕ್ಕೊಮ್ಮೆಯಾದರೂ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿಗಳು, ಒಂದು ತಿಂಗಳಿನಲ್ಲಿ ಎರಡು ಮೂರು ಬಾರಿಯಾದರೂ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿ, ಜಿಲ್ಲಾಡಳಿಕ್ಕೆ ಸೂಕ್ತ ಮಾರ್ಗದರ್ಶನ ನೀಡಿ, ಆಡಳಿತದ ವೇಗ ಹೆಚ್ಚಿಸಲು ಸಹಕಾರ ನೀಡಿ ಎಂದು ಸೂಚಿಸಿದರು.

Siddaramaiah

ಸರ್ಕಾರಿ ಕೆಲಸಗಳನ್ನು ಸಮರ್ಪಕವಾಗಿ ನಿಭಾಯಿಸಬೇಕು. ಜನದ್ರೋಹಿ ಕೆಲಸಗಳನ್ನು ಅಧಿಕಾರಿಗಳು ಮಾಡಬಾರದು, ಸರಿಯಾಗಿ ಸರ್ಕಾರಿ ಕೆಲಸಗಳನ್ನು ನಿರ್ವಹಿಸದಿದ್ದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಗುವುದು ಎಂದು ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು. [ಅಧಿಕಾರಿಗಳೇ ಕನ್ನಡ ಕಲಿಯಿರಿ, ಇಲ್ಲವೇ ಹೊರಡಿ]

ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಓಗಳನ್ನು ಉದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ಅವರು, ಜಿಲ್ಲೆಗಳ ಸಮಸ್ಯೆಗಳು ಜಿಲ್ಲಾ ಮಟ್ಟದಲ್ಲಿ ಬಗೆಹರಿಯಬೇಕು. ಸರ್ಕಾರಿ ಕಚೇರಿಗಳಿಗೆ ಜನರು ಅಲೆದಾಡಿಸುವ ಪರಿಪಾಠ ಕಡಿಮೆಯಾಗಬೇಕು ಎಂದು ಹೇಳಿದರು.

ಸಭೆಯಲ್ಲಿ ಮಾತನಾಡಿದ ಸರ್ಕಾರದ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಇದನ್ನು ತಡೆಗಟ್ಟಲು ಯಾವ ಕ್ರಮ ತೆಗೆದುಕೊಂಡಿದ್ದೀರಿ ಎಂದು ಜಿಲ್ಲಾಧಿಕಾರಿಗಳನ್ನು ಪ್ರಶ್ನಿಸಿದರು.

English summary
'Inspect your work in once in a week, act according to your conscience' Karnataka Chief Minister Siddaramaiah calls for officials on Monday, October 13 in officers review meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X