ಗುಡ್‌ನ್ಯೂಸ್: ತುಂಗಭದ್ರಾ ಜಲಾಶಯದ ಮೊದಲ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ
ಕೊಪ್ಪಳ, ಆಗಸ್ಟ್ 16: ತುಂಗಭದ್ರಾ ಜಲಾಶಯದ 19ನೇ ಗೇಟ್‌ಗೆ ಮೊದಲ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. ಡ್ಯಾಂ ತಜ್ಞ ಕನ್ಹಯ್ಯ ನೇತೃತ್ವದ ತಂಡದಿಂದ ಈ ಕಾರ್ಯಾಚರಣೆ ನಡೆದಿದ್ದು, ಕಿತ್ತು ಹೋಗಿದ್ದ ಗೇಟ್ ನಂಬರ್ 19ರ ಜಾಗದಲ್ಲಿ ಸ್ಟಾಪ್ ಲಾಗ್ ಅಳವಡಿಸಲಾಗಿದೆ. ಕನ್ಹಯ್ಯ ಅವರ ತಂಡ ಇಂದು ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಜಾಗಕ್ಕೆ ಸ್ಟಾಪ್ ಲಾಗ್ ಗೇಟ್ ಅಳವಡಿಸುವ ಕಾರ್ಯವನ್ನು ಆರಂಭಿಸಿದ್ದು, ಇದೀಗ ಕಿತ್ತು ಹೋಗಿದ್ದ ಗೇಟ್ ನಂಬರ್ 19ರ ಜಾಗದಲ್ಲಿ ಇದೀಗ ಮೊದಲ ಸ್ಟಾಪ್ ಲಾಗ್ ಅಳವಡಿಸಲಾಗಿದೆ.
ಈ ಖುಷಿಯ ವಿಚಾರವನ್ನು ಸಚಿವ ಶಿವರಾಜ್ ತಂಗಡಗಿ ಹಂಚಿಕೊಂಡಿದ್ದಾರೆ. ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ಗೆ ಸ್ಟಾಪ್ ಲಾಗ್ ಅಳವಡಿಕೆಗೂ ಮುನ್ನ, ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗುವಂತೆ ಭಗವಂತನಲ್ಲಿ ಪ್ರಾರ್ಥಿಸಿ ಸಚಿವರು ಪೂಜೆ ಕಾರ್ಯ ನೆರವೇರಿಸಿದ್ದರು. ಈ ಕಾರ್ಯ ಯಶಸ್ವಿಯಾದ ಬೆನ್ನಲ್ಲೇ ಜಲಾಶಯದಲ್ಲೇ ಶಾಸಕರು, ಸಂಸದರು, ಸ್ಟಾಪ್ ಲಾಗ್ ಅಳವಡಿಕೆ ಸಿಬ್ಬಂದಿ, ಅಧಿಕಾರಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಸದ್ಯ 60 ಅಡಿ ಅಗಲ 4 ಅಡಿ ಉದ್ದದ ಮೊದಲ ಸ್ಟಾಪ್ ಲಾಗ್ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ.

ತುಂಗಭದ್ರಾ ಜಲಾಶಯದ 19ನೇ ಗೇಟ್‌ಗೆ ಮೊದಲ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯ ಯಶಸ್ವಿಗೊಂಡಿದೆ ಎಂದು ತಿಳಿಸಿರುವ ಸಚಿವರು, ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿಗೆ ಶ್ರಮಿಸಿದ ತಜ್ಞರಾದ ಕನ್ನಯ್ಯ ನಾಯ್ಡುರವರಿಗೆ, ನೀರಾವರಿ ಇಲಾಖೆ ಅಧಿಕಾರಿಗಳಿಗೆ, ಸಮಸ್ತ ಸಿಬ್ಬಂದಿ ವರ್ಗಕ್ಕೆ, ಜಿಂದಾಲ ಕಂಪನಿಯವರಿಗೆ, ಹಿಂದುಸ್ತಾನ ಮತ್ತು ನಾರಾಯಣ ಇಂಜಿನಿಯರಿಂಗ್ ವರ್ಕ್ಸ್ ನವರಿಗೆ, ಭದ್ರತಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ ಪೊಲೀಸ್ ಸಿಬ್ಬಂಧಿಯವರಿಗೆ, ಅಗ್ನಿಶಾಮಕ ದಳದವರಿಗೆ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇನ್ನು ಒಟ್ಟು 5 ಸ್ಟಾಪ್ ಲಾಗ್ ಗೇಟ್‌ಗಳನ್ನು ಅಳವಡಿಕೆ ಮಾಡಲು ಕಾರ್ಯ ಪ್ರಾರಂಭ ಮಾಡಲಾಗಿದ್ದು, ಒಂದು ಸ್ಟಾಪ್ ಲಾಗ್ ಗೇಟ್ 25 ಟಿಎಂಸಿ ನೀರನ್ನು ತಡೆಯುತ್ತದೆ. ಹೀಗಾಗಿ ಒಟ್ಟು 5 ಗೇಟ್‌ಗಳನ್ನು ಅಳವಡಿಕೆ ಮಾಡಲಾಗುತ್ತದೆ. ಅವಶ್ಯಕತೆ ಇದ್ದರೆ ಇನ್ನೂ ಮೂರು ಗೇಟ್‌ಗಳನ್ನು ಅಳವಡಿಕೆ ಮಾಡುತ್ತೇವೆ ಎಂದು ತಿಳಿಸಿರುವ ಅಧಿಕಾರಿಗಳು ಸದ್ಯ ಒಟ್ಟು 90 ಟಿಎಂಸಿ ನೀರನ್ನು ಸಂಗ್ರಹ ಮಾಡಲು ಪ್ರಯತ್ನ ಮಾಡುತ್ತೇವೆ ಎಂದು ಈ ಹಿಂದೆಯೇ ತಿಳಿಸಿದ್ದು. ಇದೀಗ ಮೊದಲ ಸ್ಟಾಪ್ ಲಾಗ್ ಅಳವಡಿಕೆ ಕಾರ್ಯಯಶಸ್ವಿಯಾಗಿದ್ದು, ಇದೇ ಉತ್ಸಾಹದಲ್ಲಿ ಮುಂದಿನ ಕಾರ್ಯ ಭರದಿಂದ ಸಾಗಲಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications