371 ಜೆ ಅಡಿ ಉದ್ಯೋಗ ನೇಮಕಾತಿ: ಮಹತ್ವದ ಮಾಹಿತಿ ನೀಡಿದ ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ಜುಲೈ 04: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸುವಂತೆ 371 ಜೆ ಸಂಪುಟ ಉಪ ಸಮಿತಿ ಅಧ್ಯಕ್ಷರಾದ ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ವೈದ್ಯಕೀಯ ಶಿಕ್ಷಣ ಹಾಗೂ ಕೌಶಾಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ವಿಕಾಸಸೌಧದಲ್ಲಿ ಬುಧವಾರ ನಡೆದ ಸಭೆಯಲ್ಲಿ ಉದ್ಯೋಗ ನೇಮಕಾತಿಗೆ ಸಂಬಂಧಪಟ್ಟಂತೆ ಅರ್ಜಿ ಆಹ್ವಾನ, ಆಯ್ಕೆ ಪಟ್ಟಿ ಪ್ರಕಟಣೆ ವಿಷಯದಲ್ಲಿ ಪದೇ ಪದೇ ಕೆಲವಾರು ಗೊಂದಲಗಳು ಉದ್ಭವಿಸುತ್ತಿರುವದರಿಂದ ಸೂಕ್ತ ಮಾರ್ಗಸೂಚಿಗಳನ್ನು ಸಿದ್ಧಪಡಿಸಿ, ಅಂತಿಮವಾಗಿ ತಮ್ಮ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ಮುಂದಿನ ಸಭೆಯಲ್ಲಿ ಚರ್ಚೆ ಮಾಡುವ ಸಂಬಂಧ ಸಲ್ಲಿಸಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

Instruction To Prepare Guidelines Regarding Confusion In Relation To Job Recruitment Under Article 371 J

ಧಾರವಾಡ ಜಿಲ್ಲೆ ನೀರು ಪೂರೈಕೆ ಕಾಮಗಾರಿಗಳು ವಿಳಂಬ

ಧಾರವಾಡ ಜಿಲ್ಲೆಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಗ್ರಾಮೀಣ ನೀರು ಸರಬರಾಜು ಹಾಗೂ ನಗರ ನೀರು ಸರಬರಾಜು ಇಲಾಖೆಯ ಕಾಮಗಾರಿಗಳು ಕಾರ್ಯಗತ ಮಾಡುವಲ್ಲಿ ಗುತ್ತಿದಾರ ಸಂಸ್ಥೆಯಾದ ಎಲ್‌ ಅಂಡ್‌ ಟಿ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂಬ ಕಾರಣಕ್ಕೆ ಸಚಿವರು ಹಾಗೂ ಶಾಸಕರಿಂದ ವ್ಯಾಪಕ ಟೀಕೆಗೆ ಗುರಿಯಾಯಿತು.

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ, ಶಾಸಕರಾದ ಎನ್.ಹೆಚ್.ಕೋನರೆಡ್ಡಿ, ಪ್ರಸಾದ್‌ ಅಬ್ಬಯ್ಯ, ಎಂ.ಆರ್‌.ಪಾಟೀಲ್‌ ಹಾಗೂ ಹಿರಿಯ ಅಧಿಕಾರಿಗಳು ಪಾಲ್ಗೊಂಡು ಜಲಜೀವನ್‌ ಮಿಷನ್‌ ಯೋಜನೆಯಡಿ ಧಾರವಾಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ನೀರು ಸರಬರಾಜು ಮಾಡುವ ಯೋಜನೆಗಳನ್ನು ಶೀಘ್ರದಲ್ಲಿ ಕಾರ್ಯಗತಗೊಳಿಸುವ ಬಗ್ಗೆ ಚರ್ಚೆ ನಡೆಸಿದರು. ಕೆ.ಯು.ಐ.ಡಿ.ಎಫ್‌.ಸಿ ಮೂಲಕ ಕೈಗೆತ್ತಿಕೊಳ್ಳಲಾಗಿರುವ ನಗರ ನೀರು ಸರಬರಾಜು ಯೋಜನೆಗಳ ಬಗ್ಗೆಯೂ ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಯಿತು.

ಜಿಲ್ಲೆಯಲ್ಲಿ ನಡೆಯುತ್ತಿರುವ ನೀರು ಸರಬರಾಜು ಕಾಮಗಾರಿಗಳನ್ನು ಎಲ್‌ ಅಂಡ್‌ ಟಿ ಸಂಸ್ಥೆ ಗುತ್ತಿಗೆ ಪಡೆದಿದ್ದು ಕಾರ್ಮಿಕರ ಕೊರತೆಯಿಂದ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲವೆಂದು ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದರು. ಇದನ್ನು ಒಪ್ಪದ ಸಚಿವದ್ವಯರು ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದರಲ್ಲದೆ ಕಾಮಗಾರಿಗಳನ್ನು ಚುರುಕುಗೊಳಿಸಿ ಆದಷ್ಟು ಶೀಘ್ರದಲ್ಲಿ ಶುದ್ಧ ನೀರು ಸರಬರಾಜು ಮಾಡಲು ಅನುವು ಮಾಡಿಕೊಡಬೇಕೆಂದು ನಿರ್ದೇಶನ ನೀಡಿದರು.

ಗ್ರಾಮೀಣ ನೀರು ಸರಬರಾಜು ಇಲಾಖೆಯ ಮೂಲಕ ಧಾರವಾಡ ಜಿಲ್ಲೆಯ 388 ವಸತಿ ಪ್ರದೇಶಗಳಿಗೆ 832.57 ಕೋಟಿ ರೂ. ವೆಚ್ಚದಲ್ಲಿ ಶುದ್ಧ ನೀರು ಸರಬರಾಜು ಮಾಡುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಪ್ರದೇಶಗಳಿಗೆ ರೇಣುಸಾಗರ ಜಲಾಶಯದ ನವಿಲುತೀರ್ಥದಿಂದ ನೀರು ಸರಬರಾಜು ಮಾಡಲಾಗುವ ಯೋಜನೆಯನ್ನು ಹೊಂದಲಾಗಿದೆ. ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪಾ, ಗ್ರಾಮೀಣ ನೀರು ಸರಬರಾಜು ಇಲಾಖೆಯ ನಿರ್ದೇಶಕ ಕೆ.ನಾಗೇಂದ್ರಪ್ರಸಾದ್‌, ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿ ದಿವ್ಯಾಪ್ರಭು ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+