ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಡಿಗ್ರಿ ಕಾಲೇಜುಗಳಲ್ಲಿ ಸೀಟುಗಳ ಹೆಚ್ಚಳಕ್ಕೆ ಸುತ್ತೋಲೆ

By Nayana
|
Google Oneindia Kannada News

ಬೆಂಗಳೂರು, ಮೇ 5: ಸರ್ಕಾರಿ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ವಿದ್ಯಾರ್ಥಿಗಳು ಖಾಸಗಿ ಕಾಲೇಜುಗಳತ್ತ ಮುಖಮಾಡಿದ್ದಾರೆ. ಹಾಗಾಗಿ ಈ ಬಾರಿ ಪದವಿ ಪ್ರವೇಶವನ್ನು ಹೆಚ್ಚಿಸಲು ಕಾಲೇಜು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಸರ್ಕಾರಿ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಸಂಖ್ಯೆಯನ್ನು ಶೇ.20 ರಷ್ಟು ಹೆಚ್ಚು ಮಾಡಲು ಕಾಲೇಜು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ದ್ವಿತೀಯ ಪಿಯು ಫಲಿತಾಂಶ ಪ್ರಕಟ, ದಕ್ಷಿಣ ಕನ್ನಡ ಪ್ರಥಮದ್ವಿತೀಯ ಪಿಯು ಫಲಿತಾಂಶ ಪ್ರಕಟ, ದಕ್ಷಿಣ ಕನ್ನಡ ಪ್ರಥಮ

ಈ ಸಂಬಂಧ ರಾಜ್ಯದ ಎಲ್ಲ ಸರ್ಕಾರಿ ಪದವಿ ಕಾಳೇಜುಗಳಿಗೆ ಆಯುಕ್ತರು ಮೇ 2 ರಂದು ಸುತ್ತೋಲೆ ಹೊರಡಿಸಿದ್ದಾರೆ. ಇಲಾಖೆ ವ್ಯಾಪ್ತಿಯಲ್ಲಿ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿವೆ. ಈ ಬಾರಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ವಹಿಸಲಾಗಿದೆ.

Intake of admission increase 20% in govt colleges

ರಾಜ್ಯದಲ್ಲಿ ಪದವಿ ಶಿಕ್ಷಣಕ್ಕೆ ಉತ್ತೇಜನ ನೀಡಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರವೇಶಾತಿ ಪ್ರಮಾಣವನ್ನು ಶೇ.15ರಿಂದ 20 ರವರೆಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ವಯಕ್ತಿಕ ಗಮನಕ್ಕೆ ಸೂಚನೆ: ಪ್ರಾಚಾರ್ಯರು ಹಾಗೂ ಪ್ರತಿಯೊಬ್ಬ ಅಧ್ಯಾಪಕರು ಗಮನ ಹರಿಸಬೇಕು. ನೆರೆಹೊರೆಯ ಪಿಯು ಕಾಲೇಜುಗಳನ್ನು ಸಂಪರ್ಕಿಸಿ, ಸರ್ಕಾರಿ ಪದವಿ ಕಾಲೇಜಿನಲ್ಲಿ ಲಭ್ಯವಿರುವ ಕೋರ್ಸ್‌, ಕಾಂಬಿನೇಷನ್, ಸೌಲಭ್ಯಗಳ ಮಾಹಿತಿ ನೀಡಿದ ಬಗ್ಗೆ ಸಂಬಂಧಿಸಿದ ಪಿಯು ಕಾಲೇಜಿನ ಪ್ರಾಚಾರ್ಯರಿಂದ ದಾಖಲೆಗಳನ್ನು ಪಡೆದು ಕಾಲೇಜಿನಲ್ಲಿ ಇರಿಸಬೇಕು ಎಂದು ಆಯುಕ್ತರು ಸೂಚಿಸಿದ್ದಾರೆ.

English summary
Collegiate education department has issued a circular to all the degree colleges in the state to increase the intake capacity up to 20 percent to accommodate more students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X