ಗುಪ್ತಚರ ಇಲಾಖೆ ಮಾಹಿತಿ ನಕಲಿ ಎಂದ ಸಿಎಂ ಕಚೇರಿ

Posted By:
Subscribe to Oneindia Kannada

ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧಿಸಲು ಇಚ್ಚಿಸಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ಕಷ್ಟ ಎಂಬ ಅಂಶ ಇದ್ದ ರಾಜ್ಯ ಗುಪ್ತಚರ ಇಲಾಖೆಯಿಂದ ಬಂದದ್ದು ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದು ನಕಲಿ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಸೇಫ್ ಅಲ್ಲ, ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿ

ಗುಪ್ತಚರ ಇಲಾಖೆಯದ್ದು ಎನ್ನಲಾದ ಪತ್ರ ಬೆಳಿಗ್ಗೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು, ಮಾಧ್ಯಮಗಳಲ್ಲಿಯೂ ಸುದ್ದಿಯಾಗಿತ್ತು. ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಬಿಟ್ಟು ವರುಣಾ, ಬಸವಕಲ್ಯಾಣ, ಶಾಂತಿನಗರ ಅಥವಾ ಗಂಗಾವತಿಯಲ್ಲಿ ಚುನಾವಣೆಗೆ ಸ್ಪರ್ಧಿಸುವಂತೆ ಸೂಚಿಸಲಾಗಿತ್ತು. ಆದರೆ ಅದು ನಕಲಿ ಪತ್ರ ಎಂಬುದು ಇದೀಗ ಬಹಿರಂಗವಾಗಿದೆ.

Inteligence report about Chamundeshwari constituency is fake

ಮುಖ್ಯಮಂತ್ರಿ ಕಚೇರಿಯು ಆ ವರದಿ ನಕಲಿ ಎಂದಿದ್ದು, ಮುಖ್ಯಮಂತ್ರಿಗಳು ನಕಲಿ ವರದಿ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಆದರೆ ಗುಪ್ತಚರ ಇಲಾಖೆ ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
viraled intelligence report in which says that CM Siddaramaiah may loose in Chamundeshwari constituency is a fake report. CM order to investigate on that fake report.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ