ಮೈಸೂರಿನಲ್ಲಿಅಂತಾರಾಷ್ಟ್ರೀಯ ಯೋಗ ದಿನ: ಮೋದಿ ಬೊಮ್ಮಾಯಿ ವಿಡಿಯೋ ಸಂವಾದ

ಬೆಂಗಳೂರು, ಮೇ 30: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಬಾರಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ಅರಮನೆ ಮೈದಾನದಲ್ಲಿ ಜೂನ್ 21 ರಂದು ಆಯೋಜನೆ ಆಗಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರನ್ಸ್ ನಡೆಸಿ ಪೂರ್ವಭಾವಿ ಸಿದ್ಧತೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದರು.

International Yoga Day on June 21 in Mysore: PM Modi and CM Bommai Video conference

ಯೋಗ ದಿನಾಚರಣೆ ಮೈಸೂರಿನ ಅರಮನೆ ಆವರಣದಲ್ಲಿ ಆಯೋಜಿಸಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದ್ದು, ತಮ್ಮ ಆಗಮನವನ್ನು ಎದುರು ನೋಡುತ್ತಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಮೈಸೂರಿನಲ್ಲಿ ಯೋಗ ದಿನಾಚರಣೆ ಗೆ ಮಾಡಲಾಗಿರುವ ವ್ಯವಸ್ಥೆಯನ್ನು ಪ್ರಧಾನಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ವಿವರಿಸಿದರು.

International Yoga Day on June 21 in Mysore: PM Modi and CM Bommai Video conference

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮೊದಲಾದವರು ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+