ಕೊಪ್ಪಳ: ಗವಿಸಿದ್ದೇಶ್ವರ ಸ್ವಾಮಿಗಳ ಸಾನ್ನಿಧ್ಯದಲ್ಲಿ ಯೋಗದಿನ
ಕೊಪ್ಪಳ, ಜೂ. 16: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ 3ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21 ರಂದು ಬೆಳಿಗ್ಗೆ 06-00 ಗಂಟೆಗೆ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಉದ್ಘಾಟನೆ ನೆರೆವೇರಿಸುವರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಶಿವರಾಜ್ ಎಸ್. ತಂಗಡಗಿ, ಇಕ್ಬಾಲ್ ಅನ್ಸಾರಿ ಹಾಗೂ ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ಬಸವರಾಜ ಪಾಟೀಲ ಇಟಗಿ, ಅಮರನಾಥ ಪಾಟೀಲ ಹಾಗೂ ಶರಣಪ್ಪ ಮಟ್ಟೂರ ಆಗಮಿಸುವರು.
ಜಿ.ಪಂ ಉಪಾಧ್ಯಕ್ಷೆ ಲಕ್ಷಮ್ಮ ಎಸ್. ನೀರಲೂಟಿ, ಜಿ.ಪಂ. ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಶಾಂತಾ ರಮೇಶ ನಾಯಕ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ತಾ.ಪಂ ಅಧ್ಯಕ್ಷ ಬಾಲಚಂದ್ರನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಜುಲ್ಲು ಖಾದರ ಖಾದ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹಾದೇವನ್ ಪಾಲ್ಗೊಳ್ಳುವರು.
3ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರು ಆಯುಷ್ ನಿರ್ದೇಶನಾಲಯದ ನಿರ್ದೇಶಕ ರಾಜ ಕಿಶೋರ ಸಿಂಗ್ ಹಾಗೂ ಆಯುಷ್ ಇಲಾಖೆ ಯೋಗ ವಿಭಾಗದ ಉಪ ನಿರ್ದೇಶಕ ಡಾ. ಸತೀಶ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.












Click it and Unblock the Notifications