Invest Karnataka 25: ಎಐ ತಂತ್ರಜ್ಞಾನದ ಬಗ್ಗೆ ಬಿಗ್ ಅಪ್ಡೇಟ್, ಮಹತ್ವದ ಚರ್ಚೆ!
ಎಐ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದೆ. ಜಗತ್ತಿನಲ್ಲಿ ಉದ್ಯಮಗಳಲ್ಲಿ ಭಾರೀ ದೊಡ್ಡ ಬದಲಾವಣೆ ಆಗಬಹುದು ಎಂದು ನಿರೀಕ್ಷೆ ಮಾಡಲಾಗುತ್ತಿದ್ದರೆ ಉದ್ಯೋಗಿಗಳಿಗೆ ಉದ್ಯೋಗ ಕಳೆದುಕೊಳ್ಳುವ ಆತಂಕ ಶುರುವಾಗಿದೆ. ಈ ನಡುವೆ ಈ ವಿಚಾರದ ಬಗ್ಗೆ ಬೆಂಗಳೂರಿನ ಜಾಗತಿ ಹೂಡಿಕೆದಾರರ ಸಮಾವೇಶದಲ್ಲಿ ಭಾರೀ ಚರ್ಚೆ ನಡೆದಿದೆ. ಎಐ ತಂತ್ರಜ್ಞಾನದ ಬಳಕೆ ಹಾಗೂ ಅದು ಉದ್ಯೋಗದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎನ್ನುವ ಬಗ್ಗೆ ಚರ್ಚೆ ಮಾಡಲಾಗಿದೆ. ತಂತ್ರಜ್ಞಾನದ ಅಭಿವೃದ್ಧಿಯೊಂದಿಗೆ ತಯಾರಿಕಾ ವಲಯದಲ್ಲಿ ಉದ್ಯೋಗಗಳು ಹಾಗೂ ಪೂರೈಕೆ ಸರಣಿಯ ಪರಿಸ್ಥಿತಿಗಳು ಬದಲಾಗುತ್ತಿವೆ ಎಂದು ಮಹಿಂದ್ರಾ ಗ್ರೂಪ್ ಸಂಸ್ಥೆಯ ಎಐ ವಿಭಾಗದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭುವನ್ ಲೋಧಾ ಅವರು ಹೇಳಿದ್ದಾರೆ. ಈ ಸಮಾವೇಶದಲ್ಲಿ ಏನೆಲ್ಲಾ ಚರ್ಚೆಯಾಗಿದೆ ಎನ್ನುವ ವಿವರ ಇಲ್ಲಿದೆ.
ಜಾಗತಿಕ ಹೂಡಿಕೆದಾರರ ಸಮಾವೇಶ (ಜಿಮ್-25)ದಲ್ಲಿ 'ಉದ್ಯಮ 5.0 - ಮಾನವ ಕೇಂದ್ರಿತ ಕ್ರಾಂತಿಯಾಗಿ ತಯಾರಿಕಾ ವಲಯದ ಮರುವ್ಯಾಖ್ಯಾನ' ಗೋಷ್ಠಿಯಲ್ಲಿ ವಿಚಾರ ಮಂಡಿಸಿ, ಎಐ ತಂತ್ರಜ್ಞಾನ ಬಳಕೆಯೊಂದಿಗೆ ತಯಾರಿಕೆ ಸೇರಿದಂತೆ ವಿವಿಧ ವಲಯಗಳ ಕೌಶಲ್ಯ ನಿರೀಕ್ಷೆ ಮತ್ತು ಬೇಡಿಕೆ ಬದಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಸುಧಾರಿತ ಸಾಫ್ಟ್ ವೇರ್ ಗಳ ಅಳವಡಿಕೆಯಿಂದಾಗಿ ಸರಕು ತಯಾರಿಕೆಯ ಸ್ವರೂಪ ಬದಲಾಗಿದೆ. ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳನ್ನು ನೈಜ ಕ್ಷಣದಲ್ಲಿ (ರಿಯಲ್ ಟೈಮ್ ನಲ್ಲಿ) ಒದಗಿಸುವುದು ಹಿಂದೆಂದಿಂಗಿಂತಲೂ ಹೆಚ್ಚು ಮುಖ್ಯವಾಗಿದೆ. ಡಾಟಾ ಸೈನ್ಸ್ ಸೇರಿದಂತೆ ವಿವಿಧ ತಂತ್ರಜ್ಞಾನದಿಂದಾಗಿ ಗ್ರಾಹಕರ ಮನೋಗುಣವನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿದೆ ಎಂದಿದ್ದಾರೆ.
ಉದ್ಯಮ ವಲಯದಲ್ಲಿ ನಿರ್ಧಾರ ಕೈಗೊಳ್ಳುವಿಕೆ ಅಥವಾ 'ಡಿಸಿಷನ್ ಮೇಕಿಂಗ್' ಅತಿ ಪ್ರಮುಖ ಘಟ್ಟವಾಗಿದ್ದು, ಸುಧಾರಿತ ತಂತ್ರಜ್ಞಾನದ ಬಳಕೆಯಿಂದಾಗಿ ಡಿಸಿಷನ್ ಮೇಕಿಂಗ್ ವಿಧಾನ ಈಗ ಬದಲಾಗುತ್ತಿದೆ. ತಂತ್ರಜ್ಞಾನ ಯುಗದ ಹೊಸಜಗತ್ತಿನಲ್ಲಿ ಮಾನವ ಮತ್ತು ಯಂತ್ರಗಳು ಸಮನ್ವಯದಿಂದ ಒಟ್ಟಿಗೆ ಕಾರ್ಯ ನಿರ್ವಹಿಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
'ಕಿಂಡ್ರಿಲ್ ಇಂಡಿಯಾ' ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಲಿಂಗರಾಜ್ ಸಾವಕಾರ್, ಪ್ರಸಕ್ತ ಕಾಲಘಟ್ಟದಲ್ಲಿ, ಮಾರುಕಟ್ಟೆಯ ಮುಂದಿನ ಋತುಮಾನದಲ್ಲಿ ಗ್ರಾಹಕರ ನಿರೀಕ್ಷೆಗಳೇನು ಎಂದು ಊಹಿಸುವುದು ಸವಾಲಾಗಿದೆ. ತಂತ್ರಜ್ಞಾನದಿಂದಾಗಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ಎಂ ಎಸ್ ಎಂ ಇ) ವಲಯದ ತಯಾರಿಕಾ ವಿನ್ಯಾಸ ಮತ್ತು ಉತ್ಪನ್ನದಲ್ಲಿ ಮೌಲ್ಯವರ್ಧನೆಯಾಗಿದೆ. ಇದಕ್ಕೆ ಪೂರಕವಾಗಿ ಈ ವಲಯಕ್ಕೆ ಹೂಡಿಕೆಯೂ ಹರಿದುಬರಬೇಕಿದ್ದು, ಸರ್ಕಾರದ ನೀತಿಯೂ ಬದಲಾಗಬೇಕಿದೆ ಎಂದರು.
ವೇಲ್ಸ್ ನ ಸ್ವಾನ್ ಸೀ ವಿ.ವಿ. ಕಂಪ್ಯೂಟರ್ ಸೈನ್ಸಸ್ ವಿಭಾಗದ ನಿರ್ದೇಶಕ ಬರ್ಟಿ ಮುಲ್ಲರ್, ತಯಾರಿಕಾ ವಲಯದಲ್ಲಿ ಸಾಂಪ್ರದಾಯಿಕ ವಿಧಾನಕ್ಕಿಂತ ತಂತ್ರಜ್ಞಾನ ಬಲದ ಸ್ಮಾರ್ಟ್ ವಿಧಾನ ಇಂದು ಹೆಚ್ಚು ಅಗತ್ಯವಾಗಿದೆ ಎಂದರು.
ಎಐ ತಂತ್ರಜ್ಞಾನದ ಬಳಕೆಯೊಂದಿಗೆ ಕೈಗಾರಿಕಾ ವಲಯದಲ್ಲಿ ಭಾವನಾತ್ಮಕ ಬುದ್ಧಿಮತ್ತೆ ಹಾಗು ಸೃಜನಶೀಲ ಬುದ್ಧಿಮತ್ತೆಯ ಸಮನ್ವಯತೆ ಆಗುತ್ತಿದೆ. ಇದರ ಪರಿಣಾಮವನ್ನು ಉತ್ಪನ್ನಗಳಲ್ಲಿ ಕಾಣುತ್ತಿದ್ದೇವೆ. ಇಂದು ಗ್ರಾಹಕರ ವೈಯಕ್ತಿಕ ಬೇಡಿಕೆ ಅನುಸಾರ ವ್ಯಕ್ತಿಗತ ಅಪೇಕ್ಷೆಗೆ ತಕ್ಕಂತೆ (ಪರ್ಸನಲೈಸ್ಡ್) ಉತ್ಪನ್ನಗಳ ತಯಾರಿಕೆ ಸಾಧ್ಯವಾಗಿದೆ ಎಂದರು. ಇನ್ನು ಈ ಹೂಡಿಕೆ ಸಮಾವೇಶವು ನಾಳೆ ಫೆಬ್ರವರಿ 14ಕ್ಕೆ ಮುಕ್ತಾಯವಾಗಲಿದೆ. ಈ ಸಮಾವೇಶದಲ್ಲಿ ರಾಜ್ಯದಲ್ಲಿ ಕೋಟ್ಯಾಂತರ ರೂಪಾಯಿ ಹೂಡಿಕೆಯಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications