ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಡಗು ಜಿಲ್ಲೆ ಮಳೆ ಕಾರ್ಯಾಚರಣೆ ವಿಡಿಯೋ ಟ್ವೀಟ್ ಮಾಡಿದ ಐಪಿಎಸ್ ರೂಪಾ

|
Google Oneindia Kannada News

Recommended Video

ಕೊಡಗು ಜಿಲ್ಲೆಯಲ್ಲಿ ಮಹಾಮಳೆ ತಂದ ಅವಾಂತರ..! | Oneindia Kannada

ಬೆಂಗಳೂರು, ಆಗಸ್ಟ್ 16: ಮಳೆಯಿಂದ ಭಾರೀ ಸಮಸ್ಯೆಗೆ ಈಡಾಗಿರುವ ಕೊಡಗಿನ ಕುಶಾಲನಗರದ ವಿವಿಧೆಡೆ ನೂರಾ ಎಂಬತ್ತು ಮಂದಿಯನ್ನು ರಕ್ಷಣೆ ಮಾಡಿರುವ ಬಗ್ಗೆ ಐಪಿಎಸ್ ಅಧಿಕಾರಿ ಡಿ.ರೂಪಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಾಗರಿಕ ರಕ್ಷಣಾ ಸ್ವಯಂಸೇವಕರ ಈ ಕೆಲಸದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯದ ಫೋಟೋಗಳನ್ನೂ ಹಂಚಿಕೊಂಡಿದ್ದಾರೆ.

ಡಾ.ಚೇತನ್ ಅವರ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯ ಪಡೆಯ ಮೂವತ್ತೊಂದು ಮಂದಿ ಕಳೆದ ಎರಡು ದಿನಗಳಿಂದ ಕೊಡಗಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಸ್ವಯಂಸೇವಕರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದು, ಸಮಾಜಕ್ಕೆ ಅರ್ಥಪೂರ್ಣವಾದ ಕೊಡುಗೆ ನೀಡುತ್ತಿದ್ದಾರೆ ಎಂದು ವಿಡಿಯೋವೊಂದನ್ನು ಸಹ ಟ್ವೀಟ್ ಮಾಡಿದ್ದಾರೆ.

IPS D Roopa shared video of Kodagu rain rescue operation

ಧಾರಾಕಾರ ಮಳೆ: ವರುಣನ ಆರ್ಭಟ 'ಸಾಕಪ್ಪಾ ಸಾಕು' ಎಂದ ಕೊಡಗು ಜನತೆಧಾರಾಕಾರ ಮಳೆ: ವರುಣನ ಆರ್ಭಟ 'ಸಾಕಪ್ಪಾ ಸಾಕು' ಎಂದ ಕೊಡಗು ಜನತೆ

ಕೊಡಗು ಜಿಲ್ಲೆಯಲ್ಲಿ ಎರಡು ದಿನದಿಂದ ಭಾರೀ ಮಳೆ ಆಗುತ್ತಿದೆ. ಕೇರಳಕ್ಕೆ ಹೋಗುವ ಹೆದ್ದಾರಿ ಕೂಡ ಬಂದ್ ಆಗಿದೆ. ಜಿಲ್ಲೆಯಲ್ಲಿ ಪರಿಹಾರ ಕಾರ್ಯಾಚರಣೆ ತೀವ್ರಗೊಳಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಅಗತ್ಯ ನೆರವುಗಳನ್ನು ಪಡೆಯುವಂತೆ, ಜನರ ರಕ್ಷಣೆಗೆ ಹೆಲಿಕಾಪ್ಟರ್ ಗಳನ್ನು ಬಳಸುವಂತೆ ಕೂಡ ಸೂಚನೆ ನೀಡಿದ್ದಾರೆ.

English summary
IPS officer D Roopa shared video and photos of Kodagu rain rescue operation by civil defence volunteers and quick reaction team. She praised the work done by team.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X