IPS, IAS Officers Transfer: ರಾಜ್ಯದಲ್ಲಿ ಐಪಿಎಸ್‌, ಐಎಎಸ್‌ ಅಧಿಕಾರಿಗಳ ದಿಢೀರ್ ವರ್ಗಾವಣೆ: ಇಲ್ಲಿದೆ ಮಾಹಿತಿ

IPS, IAS Officers Transfer: ರಾಜ್ಯ ಸರ್ಕಾರವು ಆಗಾಗ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ರಾಜ್ಯ ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್ ಕುಮಾರ್, ಎಡಿಜಿಪಿ ಬಿ. ದಯಾನಂದ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಮೂರು ಮಂದಿ ಐಎಎಸ್‌ ಅಧಿಕಾರಿಗನ್ನು ಸಹ ವರ್ಗಾವಣೆ ಮಾಡಿದೆ. ಹಾಗಾದ್ರೆ ಯಾರು ಎಲ್ಲಿಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿ ಆಗಿದ್ದ ಅಲೋಕ್ ಕುಮಾರ್ ಅವರಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ, ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ನೇಮಕ ಮಾಡಲಾಗಿದೆ. ಅಲೋಕ್ ಕುಮಾರ್ ಅವರು ತಮ್ಮನ್ನು ಕಡೆಗಣಿಸಿ ಇತರರಿಗೆ ಬಡ್ತಿ ನೀಡಲಾಗುತ್ತಿದೆ ಎಂದು ಸಿಎಟಿಗೆ ಅರ್ಜಿ ಸಲ್ಲಿಲೆ ಮಾಡಿದ್ದರು. ಈ ಹಿನ್ನೆಲೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ.

IPS IAS Officers Sudden Transfer in state Know details

ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇತ್ತೀಚೆಗೆ ರದ್ದುಪಡಿಸಿತ್ತು. ಇದರ ಬೆನ್ನಲ್ಲೇ ಇದಿಗ ಅಲೋಕ್ ಕುಮಾರ್​ಗೆ ಎಡಿಜಿಪಿಯಿಂದ ಡಿಜಿಪಿಯಾಗಿ ಬಡ್ತಿ ನೀಡಿದ ರಾಜ್ಯ ಸರ್ಕಾರ, ಕಾರಾಗೃಹ ಇಲಾಖೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ 8 ತಿಂಗಳ ಹೋರಾಟಕ್ಕೆ ಫಲ ಸಿಕ್ಕಂತಾಗಿದೆ.

ಫೋನ್ ಟ್ಯಾಪಿಂಗ್ ಹಗರಣ ಪ್ರಕರಣದಲ್ಲಿ ಅಲೋಕ್ ಕುಮಾರ್ ಸೇರಿ ಕೆಲ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶ ಹೊರಡಿಸಿತ್ತು. ಈ ವೇಳೆ ಅಲೋಕ್ ಕುಮಾರ್ ನಗರ ಪೊಲೀಸ್ ಆಯುಕ್ತರು ಆಗಿದ್ದರು. ಸಿಬಿಐ ಪ್ರಕರಣದ ಬಗ್ಗೆ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿತ್ತು. ಆದರೆ, 2025 ಮೇ ತಿಂಗಳಿನಲ್ಲಿ ಇಲಾಖಾ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಅವರು ಇತ್ತೀಚೆಗೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದರು. ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ವಾದ ಮಾಡಿದ್ದರು.

ಅಲೋಕ್ ಕುಮಾರ್​ ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯ ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ಕೊಟ್ಟಿದ್ದರು. ಆದ್ದರಿಂದ ವಿಚಾರಣೆ ಸಿಎಟಿ ಮುಖ್ಯಸ್ಥ ನ್ಯಾಯಮೂರ್ತಿ ರಣ್‌ಜೀತ್ ಬಳಿಗೆ ಹೋಗಿತ್ತು. ಈ ವೇಳೆ ವಾದ-ಪ್ರತಿವಾದದದ ನಂತರ ಅಕ್ಟೋಬರ್ 14 ತನಿಖೆಯನ್ನು ರದ್ದುಗೊಳಿಸಿ ಮಹತ್ವದ ತೀರ್ಪು ನೀಡಲಾಗಿತ್ತು. ಜೊತೆಗೆ ತಡೆಹಿಡಿಯಲಾಗಿದ್ದ ಬಡ್ತಿ ಮತ್ತು ಸೌಲಭ್ಯಗಳನ್ನು ನೀಡುವಂತೆ ಆದೇಶ ಹೊರಡಿಸಲಾಗಿತ್ತು.

ಕಾರಾಗೃಹ ಇಲಾಖೆಯ ಎಡಿಜಿಪಿ ಆಗಿದ್ದ ಬಿ.ದಯಾನಂದ್ ಅವರನ್ನು ಇದೀಗ ಪೊಲೀಸ್ ತರಬೇತಿ ಶಾಲೆಯ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇದಕ್ಕೂ ಮುಂಚೆ ಅವರು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ಐಪಿಎಲ್‌ನಲ್ಲಿ ಗೆದ್ದ ಹಿನ್ನೆಲೆ ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿತ್ತು. ಈ ಘಟನೆಯಿಂದ ಅವರನ್ನು ಅಮಾನತು ಮಾಡಲಾಗಿತ್ತು. ಮತ್ತೆ ಕೆಲ ದಿನಗಳ ಬಳಿಕ ಅಮಾನತು ರದ್ದುಪಡಿಸಿ ಕಾರಾಗೃಹ ಇಲಾಖೆ ಎಡಿಜಿಪಿ ಜವಾಬ್ದಾರಿ ನೀಡಲಾಗಿತ್ತು.

ಮೂರು ಮಂದಿ ಅಧಿಕಾರಿಗಳ ವರ್ಗಾವಣೆ: ಜವಳಿ ಅಭಿವೃದ್ಧಿ ಆಯುಕ್ತರಾಗಿದ್ದ ಜ್ಯೋತಿ ಕೆ. ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ (KPSC) ನೂತನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ಆಯೋಗದ ಕಾರ್ಯದರ್ಶಿ ಆಗಿದ್ದ ಡಾ. ವಿಶಾಲ್ ಆರ್.ಅವರನ್ನು ಬಿಡುಗಡೆ ಮಾಡಲಾಗಿದೆ.
ಅವರನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಅಲ್ಲದೆ, ಇವರನ್ನು ಹಣಕಾಸು ಇಲಾಖೆಯ ಕಾರ್ಯದರ್ಶಿ ಹಾಗೂ ಹಣಕಾಸು ನೀತಿ ಸಂಸ್ಥೆಯ ನಿರ್ದೇಶಕ ಹುದ್ದೆಗಳಿಗೆ ಪ್ರಭಾರಿ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಆಗಿದ್ದ ಡಾ.ಮಂಜುಳಾ ಎನ್.ಅವರನ್ನು ಸಹ ಬಿಡುಗಡೆ ಮಾಡಲಾಗಿದೆ.

ಏಳು ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ

* ಕರೀಗೌಡ: ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
* ಡಾ. ಶಿವಶಂಕರ ಎನ್: ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರು
* ಬಸವರಾಜೇಂದ್ರ ಎಚ್: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರು
* ಡಾ. ಎಚ್.ಎನ್. ಗೋಪಾಲ ಕೃಷ್ಣ: ಕಾರ್ಮಿಕ ಇಲಾಖೆ ಆಯುಕ್ತರು
* ಕೃಷಿ ಇಲಾಖೆಯ ವಸಂತ್ ಕುಮಾರ್ ಪಿ
* ಕೃಷಿ ಮಾರುಕಟ್ಟೆ ಇಲಾಖೆಯ ನಿರ್ದೇಶಕ ಶಿವಾನಂದ ಕಾಪಶಿ
* ವಿಜಯನಗರದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+