D.Roopa: ಐಪಿಎಸ್ ಅಧಿಕಾರಿ ಡಿ.ರೂಪಾಗೆ ಮುಂಬಡ್ತಿ

D.Roopa: ಐಪಿಎಸ್ ಅಧಿಕಾರಿಕಾರಿ ಡಿ.ರೂಪಾ ಮೌದ್ಗಿಲ್ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದ್ದರು. ಇದೀಗ ಅವರಿಗೆ ಎಡಿಜಿಪಿ ಹುದ್ದೆಗೆ ಬಡ್ತಿ ನೀಡಿ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ರೇಷ್ಮೆ ರೇಷ್ಮೆ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಿ.ರೂಪಾ ಅವರಿಗೆ ರಾಜ್ಯ ಸರ್ಕಾರ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ. 2000ನೇ ಸಾಲಿನ ಬ್ಯಾಚ್​ನ ಐಪಿಎಸ್​ ಅಧಿಕಾರಿ ಆಗಿರುವ ಅವರನ್ನು ಐಜಿಪಿಯಿಂದ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕಿ ಆಗಿ (ADGP) ಮುಂಬಡ್ತಿ ನೀಡಿದ್ದು, ಸದ್ಯ ಈಗ ಇರುವ ಹುದ್ದೆಯಲ್ಲೇ ಮುಂದುವರೆಸಿದೆ.

IPS Officer D Roopa promoted to ADGP State government order

ಮುಂಬಡ್ತಿ ನೀಡುವ ಸಂಬಂಧ ಡಿ.ರೂಪಾ ಅವರು ಏಪ್ರಿಲ್ 25ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯವಾಗಿ ತಮಗೆ ಸಿಗಬೇಕಾದ ಬಡ್ತಿ ಕುರಿತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​ನ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವು, ಮುಂಬಡ್ತಿ ಸಂಬಂಧ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡುವಂತೆ ಡಿ.ರೂಪಾ ಅವರಿಗೆ ಸೂಚನೆ ನೀಡಿತ್ತು.​

ಮನವಿ ಕುರಿತು ಸರ್ಕಾರ 8 ವಾರಗಳಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕೆಂದು ಆದೇಶಿಸಿ ಅರ್ಜಿಯನ್ನ ಇತ್ಯರ್ಥಪಡಿಸಿತ್ತು. ಕೊನೆಗೂ ಹೈಕೋರ್ಟ್​ ಗಡುವಿಗೆ ಮಣಿದ ಸರ್ಕಾರ ಡಿ.ರೂಪಾ ಅವರಿಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+