ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
Ravi D. Channannavar: ರಾಜ್ಯ ಸರ್ಕಾರ ಆಗಾಗ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡುತ್ತಲಿರುತ್ತದೆ. ಇದೀಗ ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಅವರನ್ನು ಇಂದು (ಫೆಬ್ರವರಿ 5) ದಿಢೀರ್ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದು, ಈ ಬಾರಿ ಜನಪ್ರಿಯ ಹಾಗೂ ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಅವರನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆಡಳಿತಾತ್ಮಕ
ರವಿ ಡಿ.ಚನ್ನಣ್ಣನವರ್ ಅವರು ತಮ್ಮ ಸೇವಾ ಅವಧಿಯಲ್ಲಿ ವಿವಿಧ ಪ್ರಮುಖ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಉತ್ತಮ ಹೆಸರು ಗಳಿಸಿದ್ದರು.

ಚರ್ಚೆಗೆ ಕಾರಣವಾದ ವರ್ಗಾವಣೆ: ರವಿ ಡಿ.ಚನ್ನಣ್ಣನವರ್ ಅವರ ವರ್ಗಾವಣೆಯು ಪೊಲೀಸ್ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ಹುದ್ದೆಯಲ್ಲಿ ಕೂಡ ಅವರು ತಮ್ಮ ಅನುಭವ ಮತ್ತು ಸಾಮರ್ಥ್ಯದಿಂದ ಮಹತ್ವದ ಪಾತ್ರ ವಹಿಸುವ ನಿರೀಕ್ಷೆ ವ್ಯಕ್ತವಾಗಿದೆ. ರಾಜ್ಯ ಸರ್ಕಾರವು ಇತ್ತೀಚಿನ ದಿನಗಳಲ್ಲಿ ಹಲವಾರು ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದ್ದು, ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಿದೆ ಎಂದು ಹೇಳಲಾಗುತ್ತಿದೆ.
ರವಿ ಡಿ. ಚನ್ನಣ್ಣನವರ್ ಅವರಿಗೆ ಹೊಸ ಜವಾಬ್ದಾರಿ: ರಾಜ್ಯದಲ್ಲಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದ್ದು, ಈ ಬಾರಿ ಹಿರಿಯ ಹಾಗೂ ಜನಪ್ರಿಯ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರಿಗೆ ಹೊಸ ಹೊಣೆಗಾರಿಕೆ ನೀಡಲಾಗಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯ ಪೊಲೀಸ್ ಉಪ ಮಹಾನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಇಲಾಖೆ ಹೊರಡಿಸಿದ ಆದೇಶದಂತೆ, ಈ ಹುದ್ದೆಯನ್ನು ಐಪಿಎಸ್ ನಿಯಮಗಳು-2016ರ ನಿಯಮ12ರ ಅಡಿಯಲ್ಲಿ ಅಪರಾಧ ತನಿಖಾ ಇಲಾಖೆಯ ಉಪ ಮಹಾನಿರೀಕ್ಷಕರ ಹುದ್ದೆಗೆ ಸಮಾನವಾದ ಸ್ಥಾನಮಾನ ಹಾಗೂ ಜವಾಬ್ದಾರಿಗಳನ್ನು ಹೊಂದಿರುವ ಹುದ್ದೆ ಎಂದು ಘೋಷಿಸಲಾಗಿದೆ. ಇದೇ ವೇಳೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿದ್ದ ಭಾರತಿ ಡಿ. ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರಿಗೆ ಪ್ರಸ್ತುತ ಯಾವುದೇ ಸ್ಥಳ ನಿಯೋಜನೆ ನೀಡಲಾಗಿಲ್ಲ.
ಯಾವ ಬ್ಯಾಚ್?: ರವಿ ಡಿ. ಚನ್ನಣ್ಣನವರ್ ಅವರು 2008ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಹೊಸಪೇಟೆ, ಬೆಂಗಳೂರು, ಹಾಸನ, ಶಿವಮೊಗ್ಗ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಾಗೂ ಪೊಲೀಸ್ ಆಡಳಿತ ವಿಭಾಗಗಳಲ್ಲಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. 2023ರಲ್ಲಿ ಬೆಂಗಳೂರು ಗ್ರಾಮಾಂತರ ಎಸ್‌ಪಿಯಾಗಿದ್ದ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದ್ದು, ಬಳಿಕ ಅಗ್ನಿಶಾಮಕ ಹಾಗೂ ತುರ್ತು ಸೇವೆ ಇಲಾಖೆಗೆ ನಿಯೋಜಿಸಲಾಗಿತ್ತು. ಇದೀಗ ಸುಮಾರು ಎರಡುೂವರೆ ವರ್ಷದ ಬಳಿಕ ಮತ್ತೆ ಅವರ ಸ್ಥಳ ಬದಲಾಗಿದೆ.
ಕಾರ್ಮಿಕ ಇಲಾಖೆಯ ವ್ಯಾಪ್ತಿಗೆ ಬರುವ ಮಂಡಳಿಗೆ ಅವರನ್ನು ನಿಯೋಜಿಸಿರುವುದು ಪೊಲೀಸ್ ಇಲಾಖೆಯಿಂದ ಹೊರಗಿನ ಹುದ್ದೆ ಆಗಿರುವುದರಿಂದ ಚರ್ಚೆಗೆ ಕಾರಣವಾಗಿದೆ. ಈ ವರ್ಗಾವಣೆಯ ನಿಖರ ಕಾರಣದ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿಲ್ಲ.
ಅಗ್ನಿಶಾಮಕ ಹಾಗೂ ತುರ್ತು ಸೇವೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲೇ, ಕಳೆದ ವರ್ಷ ಒಂದು ಕಾರ್ಯಕ್ರಮದಲ್ಲಿ ಮಾತನಾಡಿದ್ದ ರವಿ ಚನ್ನಣ್ಣನವರ್ ಅವರು "ಕೆಲ ವರ್ಷಗಳಿಂದ ಖಾಲಿಯೇ ಇದ್ದೇವೆ," ಎಂದು ತಮ್ಮ ಹುದ್ದೆಯ ಸ್ಥಿತಿಯನ್ನು ಮಾರ್ಮಿಕವಾಗಿ ಉಲ್ಲೇಖಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅಧಿಕಾರಿಯನ್ನು ಕಚೇರಿ ಕೆಲಸಗಳಿಗೆ ಮಾತ್ರ ಸೀಮಿತಗೊಳಿಸಿದ್ದಕ್ಕೆ ಪೊಲೀಸ್ ವಲಯದಲ್ಲೂ ಅಸಮಾಧಾನ ವ್ಯಕ್ತವಾಗಿತ್ತು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications