ಕರ್ನಾಟಕದಲ್ಲಿ ಮಾ.22ರಿಂದ ಗೋಲ್ಡನ್ ಚಾರಿಯೆಟ್ ರೈಲು ಸೇವೆ ಶುರು
ಬೆಂಗಳೂರು, ಫೆಬ್ರವರಿ 29: ಮಾರ್ಚ್ 22ರಿಂದ ರಾಜ್ಯದಲ್ಲಿ ಮತ್ತೊಮ್ಮೆ ಗೋಲ್ಡನ್ ಚಾರಿಯೆಟ್ ರೈಲಿನ ಸಂಚಾರ ಆರಂಭಗೊಳ್ಳಲಿದೆ.
ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ಐಷಾರಾಮಿ ಗೋಲ್ಡನ್ ಚಾರಿಯೆಟ್ ರೈಲು ಸೇವೆಯನ್ನು ಹಲವು ವರ್ಷಗಳ ವಿರಾಮದ ಬಳಿಕ ಐಆರ್ಸಿಟಿಸಿ ಪುನಃ ಆರಂಭಿಸಲು ಮುಂದಾಗಿದೆ.
2008ರಲ್ಲಿ ಗೋಲ್ಡನ್ ಚಾರಿಯೆಟ್ ರೈಲು ಸೇವೆಯನ್ನು ಪ್ರಾರಂಭಿಸಿದ್ದ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರವು ಇತ್ತೀಚೆಗೆ ಮಾಡಿಕೊಳ್ಳಲಾದ ಒಪ್ಪಂದದ ಹಿನ್ನೆಲೆಯಲ್ಲಿ ಐಆರ್ಸಿಟಿಸಿ ಗೋಲ್ಡನ್ ಚಾರಿಯೆಟ್ ರೈಲಿನ ಸೇವೆಯನ್ನು ಪುನರಾರಂಭಿಸುತ್ತಿದೆ.

ಮಾ.22 , ಮಾ.29 ಮತ್ತು ಏ.12ರಂದು ಪ್ರೈಡ್ ಆಫ್ ಕರ್ನಾಟಕ ಎಂಬ ಹೆಸರಿಲ್ಲಿ ಮೂರು ಪ್ರವಾಸಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ.ಏಳು ದಿನ ಆರು ರಾತ್ರಿಗಳ ಪ್ರಯಾಣ ಮುಂಜಾನೆ ಯಶವಂತಪುರ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿದ್ದು, ಬಂಡಿಪುರ ನ್ಯಾಷನಲ್ ಪಾರ್ಕ್, ಮೈಸೂರು, ಹಳೇಬೀಡು, ಚಿಕ್ಕಮಗಳೂರು, ಹಂಪಿ, ಬಾದಾಮಿ, ಪಟ್ಟದಕಲ್ಲು, ಐಹೊಳೆ ಹಾಗೂ ಗೋವಾಕ್ಕೆ ತೆರಳಿ ಬೆಂಗಳೂರಿಗೆ ಹಿಂದಿರುಗಲಿದೆ.
ನೂತನ ವಿನ್ಯಾಸದ ಪೀಠೋಪಕರಣಗಳು, ಹೊಸ ಮಾದರಿಯ ಕೋಣೆಯಗಳು, ಬಾತ್ರೂಮ್, ಮಣ್ಣಿನ ಪಾತ್ರೆಗಳು ಹೀಗೆ ಐಷಾರಾಮಿ ಸೌಲಭ್ಯಗಳನ್ನು ಒಳಗೊಂಡಿರುತ್ತದೆ,. ಅಮೆಜಾನ್, ನೆಟ್ಫ್ಲಿಕ್ಸ್ ವೀಕ್ಷಿಸಬಹುದಾದ ಸ್ಮಾರ್ಟ್ ಟಿವಿ, ಸಿಸಿಕ್ಯಾಮರಾವನ್ನು ಕೂಡ ಅಳವಡಿಸಲಾಗಿರುತ್ತದೆ.
-
Namma Metro: ಬೆಂಗಳೂರಿಗೆ ಮೊದಲ ಡಿಟಿಜಿ ರೈಲು ಆಗಮನ 750 ಕಿಮಿ ಪ್ರಾಯೋಗಿಕ ಪರೀಕ್ಷೆ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications