ಕೋವಿಡ್-19 ಹಗರಣ: ವಿಚಾರಣಾ ಆಯೋಗದ ಅವಧಿ ವಿಸ್ತರಣೆ
ಬೆಂಗಳೂರು, ಮೇ 25: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೋವಿಡ್-19 ಸಂದರ್ಭದಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು ತನಿಖೆ ನಡೆಸಲು ವಿಚಾರಣಾ ಆಯೋಗ ರಚನೆ ಮಾಡಿತ್ತು.
ಈಗ ವಿಶೇಷ ರಾಜ್ಯಪತ್ರದಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದ ವಿಚಾರಣಾ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಮೇ 25 ರಿಂದ 31/8/2024ರ ತನಕ ಆಯೋಗದ ಅವಧಿ ವಿಸ್ತರಿಸಲಾಗಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ನಾಗರಾಜು ಎಸ್. ಸರ್ಕಾರದ ಅಧೀನ ಕಾರ್ಯದರ್ಶಿ ಒಳಾಡಳಿತ ಇಲಾಖೆ (ಕಾನೂನು ಮತ್ತು ಸುವ್ಯವಸ್ಥೆ) ಆದೇಶ ಹೊರಡಿಸಿದ್ದಾರೆ. ಅಧಿಕೃತ ರಾಜ್ಯಪತ್ರದ ಆದೇಶದ ಪ್ರಕಾರ 31/8/2024ರ ತನಕ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ.
ಆದೇಶದ ವಿವರಗಳು: ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರೆ ಇಲಾಖೆಗಳು ಹಾಗೂ ಈ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಸ್ಥೆಗಳಲ್ಲಿ ಔಷಧಿ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು 2021ರ ಜುಲೈ- ಆಗಸ್ಟ್‌ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪ ಕೇಳಿ ಬಂದಿತ್ತು.
ಈ ಬಗ್ಗೆ ತನಿಖೆಯನ್ನು ನಡೆಸಲು Commission of Inquiry Act 1952ರ ನಿಯಮ 3 ಉಪನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಿ 3 ತಿಂಗಳೊಳಗಾಗಿ ವರದಿ ಸಲ್ಲಿಸುವಂತೆ ದಿನಾಂಕ 25/08/2023ರಂದು ಅಧಿಸೂಚನೆ ಹೊರಡಿಸಲಾಗಿರುತ್ತದೆ ಹಾಗೂ ದಿನಾಂಕ 7/10/2023ರ ಅಧಿಸೂಚನೆಯಲ್ಲಿ ಸದರಿ ವಿಚಾರಣಾ ಆಯೋಗಕ್ಕೆ (Terms of References) ಅಂಶಗಳನ್ನು ನಿಗದಿಪಡಿಸಲಾಗಿರುತ್ತದೆ.
ದಿನಾಂಕ 22/11/2023ರ ಅಧಿಸೂಚನೆಯಲ್ಲಿ ವಿಚಾರಣಾ ಆಯೋಗದ ಅವಧಿಯನ್ನು ದಿನಾಂಕ 24/05/2024ರವರೆಗೆ ವಿಸ್ತರಿಸಲಾಗಿತ್ತು. ಕೋವಿಡ್-19ರ ವಿಚಾರಣಾ ಆಯುಕ್ತರು, ನ್ಯಾಯಮೂರ್ತಿ ಶ್ರೀ ಜಾನ್ ಮೈಕಲ್ ಕುನ್ಹಾ ನಿವೃತ್ತ ನ್ಯಾಯಾಧೀಶರು ಇವರ ಪತ್ರ ದಿನಾಂಕ 10/04/2024ರ ಮನವಿಯಲ್ಲಿ ಸದರಿ ವಿಚಾರಣಾ ಆಯೋಗದ ಅವಧಿಯು ದಿನಾಂಕ 24/05/2024ಕ್ಕೆ ಕೊನೆಗೊಳ್ಳಲಿರುವುದರಿಂದ, ದಿನಾಂಕ 25/05/2024 ರಿಂದ 31/08/2024 ರವರೆಗೆ ವಿಚಾರಣಾ ಆಯೋಗವನ್ನು ವಿಸ್ತರಿಸಲು ಕೋರಿರುತ್ತಾರೆ.
ಪತ್ರದ ಅನ್ವಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್ ಮೈಕಲ್ ಕುನ್ಹಾ ಇವರ ನೇತೃತ್ವದ ಕೋವಿಡ್-19ರ ವಿಚಾರಣಾ ಆಯೋಗದ ಅವಧಿಯನ್ನು ದಿನಾಂಕ 25/05/2024 ರಿಂದ 31/08/2024ರ ವರೆಗೆ ವಿಸ್ತರಿಸಲಾಗಿದೆ.
-
Vastu Tips: ಈ ವಾಸ್ತು ಟಿಪ್ಸ್ ಪಾಲಿಸಿದರೆ ಧನ ಮತ್ತು ಯಶಸ್ಸು ನಿಮ್ಮದೇ -
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications