ರಾಜ್ಯ ರಾಜಕೀಯದಲ್ಲಿ ಸಿಡಿ ಸ್ಫೋಟ; ರಮೇಶ್ ಜಾರಕಿಹೊಳಿ ವಿರುದ್ಧ ದೂರು

ಬೆಂಗಳೂರು, ಮಾರ್ಚ್ 02; ಕರ್ನಾಟಕ ರಾಜಕೀಯದಲ್ಲಿ ರಾಸಲೀಲೆ ಸಿಡಿಯೊಂದು ಮತ್ತೊಮ್ಮೆ ಸದ್ದು ಮಾಡಿದೆ. ಬಿಜೆಪಿ ನಾಯಕ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿಯೊಂದು ಬಿಡುಗಡೆಯಾಗಿದೆ.

Recommended Video

      Ramesh Jarakiholi ಕರ್ಮಕಾಂಡದ ಕಂಪ್ಲೀಟ್ ಸ್ಟೋರಿ | Oneindia Kannada

      ಮಂಗಳವಾರ ಬೆಳಗಾವಿ ಭಾಗದ ಪ್ರಭಾವಿ ರಾಜಕೀಯ ನಾಯಕ ರಮೇಶ್ ಜಾರಕಿಹೊಳಿ ಯುವತಿ ಜೊತೆ ರಾಸಲೀಲೆ ನಡೆಸಿದ ಸಿಡಿಯನ್ನು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬಿಡುಗಡೆ ಮಾಡಿದರು. ಸಚಿವರ ವಿರುದ್ಧ ಪೊಲೀಸರಿಗೆ ಸಹ ದೂರು ನೀಡಿದರು.

       Irrigation Minister Ramesh Jarakiholi Struck By Sexual Allegation Complaint Filed

      ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿ ಜೊತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ನಡೆಸಿದ್ದಾರೆ ಎಂದು ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾರೆ. ಯುವತಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಿಡಿ ಜೊತೆಗೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

      ಸಚಿವ ರಮೇಶ್ ಜಾರಕಿಹೊಳಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿ ಜೊತೆ ರಾಸಲೀಲೆ ನಡೆಸಿದ್ದಾರೆ. ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಕೆಲಸದ ಬಗ್ಗೆ ವಿಚಾರಿಸಿದಾಗ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

      ಯುವತಿ ತಂದೆ ಮತ್ತು ತಾಯಿಯೇ ಈ ಕುರಿತು ರಾಮನಗರ ಜಿಲ್ಲೆಯ ಕನಕಪುರ ಮೂಲದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಗೆ ಮಾಹಿತಿ ನೀಡಿದ್ದಾರೆ. ಮಂಗಳವಾರ ಈ ಕುರಿತು ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಕೊಟ್ಟಿದ್ದಾರೆ.

      ಸಚಿವರ ರಾಸಲೀಲೆ ಸಿಡಿ ಹೊರಬರುತ್ತಿದ್ದಂತೆ ಸಾಮಾಜಿಕ ತಾಲತಾಣಗಳಲ್ಲಿ ಚರ್ಚೆಗಳು ಆರಂಭವಾಗಿದೆ. ಪ್ರತಿಪಕ್ಷ ಕಾಂಗ್ರೆಸ್ ಟ್ವೀಟ್ ಮೂಲಕ "ಏನ್ರಿ @BJP4Karnataka ಇದೆಲ್ಲ?, ಏನು ಹೇಳ್ತೀರಾ ಅದರ ಬಗ್ಗೆ?" ಎಂದು ಪ್ರಶ್ನೆ ಮಾಡಿದೆ.

      ರಮೇಶ್ ಜಾರಕಿಹೊಳಿ ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಯುವತಿ ಜೊತೆ ರಾಸಲೀಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. "ಕರ್ನಾಟಕ ಭವನವೇನು @BJP4Karnataka ಪಕ್ಷದ ಬೆಡ್ ರೂಮಾ? ಮೊದಲು ತಿಳಿಸಿ" ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+