ಕಾಂಗ್ರೆಸ್‌ನಿಂದ ಕಣಕ್ಕಿಳೀತಾರಾ ಡಾಲಿ ಧನಂಜಯ? ಈ ಕ್ಷೇತ್ರದಿಂದ ಕಣಕ್ಕಿಳಿಸಲು ಕೈ ಪಡೆ ನಾಯಕರ ಸಿದ್ದತೆ?

ಬೆಂಗಳೂರು, ಫೆಬ್ರವರಿ 17: ವಿಧಾನಸಭಾ ಚುಣಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಕಾಂಗ್ರೆಸ್‌ ಗೆ ಲೋಕಸಭಾ ಚುನಾವಣೆಯಲ್ಲಿ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು, ಕಾಂಗ್ರೆಸ್‌ ಮುಂದಿನ ಲೋಕಸಭಾ ಚುಣಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.

ಹೌದು,ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕರು ಮಾಸ್ಟರ್‌ ಪ್ಲಾನ್‌ ನಡೆಸಿದ್ದಾರೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಬಾರೀ ತಮ್ಮ ತವರು ಕ್ಷೇತ್ರವನ್ನ ಗೆಲ್ಲಿಸುವ ನಿಟ್ಟಿನಲ್ಲಿ ಹಲವು ಸ್ಥಳೀಯ ನಾಯಕರ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

Is Dali Dhananjay Running for Lok Sabha? Congress Planning to field Him in This Constituency

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ದೊಡ್ಡದೊಂದು ಸಂಚಲನ ಸೃಷ್ಟಿ ಮಾಡಲು ಕಾಂಗ್ರೆಸ್‌ ಕಾರ್ಯತಂತ್ರ ಸಿದ್ಧವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯ ಕ್ಷೇತ್ರವಾಗಿರುವ ಮೈಸೂರು ಕ್ಷೇತ್ರವನ್ನು ಗೆಲ್ಲಲು ಕೈ ಪಡೆ ರಣತಂತ್ರವನ್ನು ರೂಪಿಸಿದೆ. ಈಗಾಗಲೇ ಮುಖ್ಯಮಂತ್ರಿ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಲೋಕಸಭಾ ಚುಣಾವಣೆಯಲ್ಲಿ ಸ್ಪರ್ಧಿಸುವ ಕುರಿತು ನಿರಾಸಕ್ತಿ ತೋರಿದ್ದು, ಈ ಕ್ಷೇತ್ರದಿಂದ ಖ್ಯಾತ ಚಿತ್ರ ನಟ ʻಬಡವರ ಮಕ್ಕಳು ಬೆಳೀಬೇಕುʼ ಖ್ಯಾತಿಯ ನಟ ರಾಕ್ಷಸ ಡಾಲಿ ಧನಂಜಯ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಾಯಕರು ಮಾಸ್ಟರ್ ಪ್ಲ್ಯಾನ್‌ ‌ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Is Dali Dhananjay Running for Lok Sabha? Congress Planning to field Him in This Constituency

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರಾಗಿರುವವರು ಪ್ರತಾಪ್‌ ಸಿಂಹ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೇರವಾದ ಠಕ್ಕರ್‌ ಕೊಡುತ್ತಿದ್ದಾರೆ. ಒಂದು ಹಂತದಲ್ಲಿ ಪ್ರತಾಪ್‌ ಸಿಂಹ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಅವರೇ ಕಣಕ್ಕಿಳಿಯುತ್ತಾರೆ ಎಂಬ ಚರ್ಚೆ ನಡೆದಿತ್ತು. ಪುತ್ರನನ್ನ ಲೋಕಸಭಾ ಕಣಕ್ಕಿಳಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲೆ ಶಾಸಕರು, ಸಚಿವರು ಹಾಗೂ ಮುಖಂಡರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದರು. ಆದರೆ, ಸಭೆಯಲ್ಲಿ ಒಮ್ಮತ್ತದ ಅಭಿಪ್ರಾಯ ಕೇಳಿ ಬರದ ಹಿನ್ನೆಲೆ ಡಾಲಿ ಧನಂಜಯ ಅವರ ಹೆಸರು ಕೇಳಿ ಬಂದಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ನಾಯಕರಿಗೆ ಪ್ರತಿಷ್ಠೆಯ ಪ್ರಶ್ನೆಯಾದರೇ ಇತ್ತ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಸಭಾ ಕ್ಷೇತ್ರ ಅಸ್ತಿತ್ವ ಪ್ರಶ್ನೆ ಎನ್ನಲಾಗಿದೆ. ಹೀಗಾಗಿ ಮೈಸೂರು ಕ್ಷೇತ್ರದಲ್ಲಿ ಡಾಲಿ ಧನಂಜಯ ಅವರನ್ನ ಕಣಕ್ಕಿಳಿದರೇ ದೊಡ್ಡ ಮಟ್ಟದ ಸಂಚಲನ ಸೃಷ್ಟಿಯಾಗುವುದರಲ್ಲಿ ಎರಡು ಮಾತಿಲ್ಲ. ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಉತ್ತಮ ಒಡನಾಟ ಹೊಂದಿರುವ ಡಾಲಿ ಅವರು ಜನಪ್ರಿಯ ನಟರಾಗಿದ್ದಾರೆ. ಇತ್ತ ಬಡವರ ಮಕ್ಕಳು ಬೆಳೆಯಬೇಕು ಎನ್ನುವ ಮಾತಿನ ಮೂಲಕ ಯುವ ಸಮುದಾಯವನ್ನ ಸೆಳೆದಿರುವ ಡಾಲಿ ಧನಂಜಯ ತಮ್ಮದೇ ಆದ ಅಭಿಮಾನಿ ಬಳಗವನ್ನ ಹೊಂದಿದ್ದಾರೆ.

ಕಾಂಗ್ರೆಸ್‌ ನಾಯಕರ ಲೆಕ್ಕಾಚಾರವೇನು?

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರು ಹಲವಾರು ಲೆಕ್ಕಾಚಾರವನ್ನ ಹಾಕಿಕೊಂಡಿದ್ದಾರೆ. ಇನ್ನೂ ಡಾಲಿ ಧನಂಜಯ ಅವರು ಒಬ್ಬ ನಟನಾಗಿ, ನಿರ್ಮಾಪಕನಾಗಿ ದೊಡ್ಡ ಜನಪ್ರಿಯತೆಯನ್ನು ಪಡೆದಿದ್ದಾರೆ. ಈ ನಿಟ್ಟಿನಲ್ಲಿ ಡಾಲಿ ಧನಂಜಯ ಅವರನ್ನ ಕಣಕ್ಕಿಳಿಸುವ ಕುರಿತು ಮಾಸ್ಟರ್‌ ಪ್ಲಾನ್‌ ನಡೆಸಿರುವ ಕೈ ಪಡೆಯ ಲೆಕ್ಕಾಚಾರವೂ ಜೋರಾಗಿಯೇ ಇದೆ.

ಡಾಲಿ ಧನಂಜಯ ಅವರು ಸಾಮಾಜಿಕ ಬದ್ಧತೆ, ಸೈದ್ಧಾಂತಿಕ ಸ್ಪಷ್ಟತೆ ಇರುವ ವ್ಯಕ್ತಿ. ಅವರ ಚಿಂತನೆಗಳು ಕಾಂಗ್ರೆಸ್‌ಗೆ ಹೆಚ್ಚು ಹತ್ತಿರವಾಗಿವೆ. ಆಂತರಂಗಿಕವಾಗಿ ರಾಜಕೀಯದ ಒಲವು ಇರುವುದು ಅವರ ಸಿನಿಮಾಗಳ ಡೈಲಾಗ್‌ಗಳಲ್ಲಿ ಸ್ವಷ್ಟವಿದೆ. ಆದರೆ, ಈ ಬಗ್ಗೆ ಡಾಲಿ ಧನಂಜಯ ಅವರು ಎಲ್ಲಿಯೂ ಮಾತನಾಡಿಲ್ಲ. ಇನ್ನೂ ಡಾಲಿ ಧನಂಜಯ ಅವರು ವಿಭಿನ್ನ ಜಾನರ್‌ಗಳ ಸಿನಿಮಾಗಳನ್ನು ನಿರ್ಮಿಸಿ ಹೊಸ ಅಲೆ ಕ್ರಿಯೇಟ್‌ ಮಾಡಿದ್ದಾರೆ. ಹಾಗಾಗಿ ಅವರಿಗೆ ಫ್ಯಾನ್‌ ಫಾಲೋಯಿಂಗ್‌ ಅಪಾರ ಪ್ರಮಾಣದಲ್ಲಿ ಅಭಿಮಾನಿಗಳಾಗಿದ್ದಾರೆ.

ಇನ್ನೂ ಹಲವು ಸಿನಿಮಾಗಳಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಕೋರುವ ಮೂಲಕ ಡಾಲಿ ಧನಂಜಯ ಅವರ ಸಿನಿಮಾಗಳಿಗೆ ಸಾಥ್‌ ನೀಡಿದ್ದಾರೆ.ಅಷ್ಟೇ ಅಲ್ಲದೇ ನಟ ರಾಕ್ಷಸ ಡಾಲಿ ಧನಂಜಯ ಲಿಂಗಾಯತರು. ಇನ್ನೂ ಅಹಿಂದ ನಾಯಕರಾಗಿರುವ ಸಿದ್ದರಾಮಯ್ಯ ಅವರಿಗೆ ಮೈಸೂರು ಭಾಗದಲ್ಲಿ ತಮ್ಮದೇ ಆದ ವರ್ಚಸ್ಸನ್ನ ಹೊಂದಿದ್ದಾರೆ. ಮೈಸೂರಿನಲ್ಲಿ ಎಸ್ಸಿ, ಕುರುಬ, ಮುಸ್ಲಿಂ ಕಾಂಗ್ರೆಸ್​ ಪಾಲಿನ ಸಾಂಪ್ರದಾಯಿಕ ಮತಗಳು. ಅದಕ್ಕೆ ಲಿಂಗಾಯತ ಶಕ್ತಿ ಸೇರಿಕೊಂಡರೆ ಗೆಲ್ಲಬಹುದು ಎನ್ನುವ ಲೆಕ್ಕಾಚಾರವನ್ನ ಕಾಂಗ್ರೆಸ್‌ ನಾಯಕರು ಹಾಕಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+