CS Puttaraju Joining Congress?: ಜೆಡಿಎಸ್‌ನ ಮಾಜಿ ಸಚಿವ ಸಿ ಎಸ್ ಪುಟ್ಟರಾಜುಗೆ ಕಾಂಗ್ರೆಸ್ ಗಾಳ? ಕೊಟ್ಟ ಆಫರ್ ಏನು ಗೊತ್ತಾ
ಮಂಡ್ಯ,ಆಗಸ್ಟ್ 21: 2024 ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಪಡೆ, ಬಿಜೆಪಿ ಹಾಗೂ ಜೆಡಿಎಸ್ ಹಾಲಿ, ಮಾಜಿ ಶಾಕಸರಿಗೆ ಗಾಳ ಹಾಕಿದ್ದು, ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲುವ ತಯಾರಿ ನಡೆಸಿದೆ.
ಹೌದು, ಮಂಡ್ಯ ಕ್ಷೇತ್ರದಲ್ಲಿ ಈ ಬಾರಿ ಗೆಲ್ಲಲೇ ಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ನಾಯಕರು ಜೆಡಿಎಸ್ ನಾಯಕರನ್ನ ಸೆಳೆಯಲು ಮುಂದಾಗಿದ್ದು,ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ಪಕ್ಷಕ್ಕೆ ಕರೆತರುವ ಸಿದ್ದತೆ ನಡೆದಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವ ಭರವಸೆಯನ್ನು ನೀಡಿದೆ ಎನ್ನಲಾಗಿದೆ. ಅಲ್ಲದೇ ಮಂಡ್ಯದಲ್ಲಿ ಜಿಲ್ಲೆಯೊಳಗೆ ಜೆಡಿಎಸ್ ಪ್ರಾಬಲ್ಯವನ್ನು ಕುಗ್ಗಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಪ್ಲಾನ್ ನಡೆಸಿದ್ದಾರೆ.

ಇನ್ನೂ ಲೋಕಸಭಾ ಚುನಾವಣೆ ಹಿನ್ನಲೆ ತಮ್ಮ ತಮ್ಮ ಜಿಲ್ಲೆಗಳ ಹೆಚ್ಚು ನಿಗಾ ಹಿಡುವಂತೆ ಹೈಕಮಾಂಡ್ ಸೂಚಿಸಿದ್ದು, ಮಂಡ್ಯ ಜಿಲ್ಲೆಯ ಸಚಿವ ಚಲುವರಾಯಸ್ವಾಮಿ ಅವರು ಜೆಡಿಎಸ್ ನ ಮಾಜಿ ಸಚಿವ ಸಿ ಎಸ್ ಪುಟ್ಟರಾಜು ಅವರನ್ನ ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆಸಿದ್ದು, ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ.
2023 ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರು ಸಿ ಎಸ್ ಪುಟ್ಟರಾಜು ಪಕ್ಷ ಕರೆತರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಆಗುವ ಅನುಕೂಲ ಹಾಗೂ ಅನಾನುಕೂಲಗಳ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಿದೆ.

ವಿಧಾನಸಭಾ ಚುನಾವಣಾ ಸೋಲಿನಿಂದ ತೀವ್ರ ಬೇಸರಗೊಂಡಿರುವ ಸಿ.ಎಸ್.ಪುಟ್ಟರಾಜು ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಇಚ್ಚೆ ಹೊಂದಿದ್ದಾರೆ. ಸಿ.ಎಸ್.ಪುಟ್ಟರಾಜು ಅವರು 2014ರಲ್ಲಿ ನಡೆದ ಲೋಕಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮ್ಯಾ ವಿರುದ್ಧ ಸೋಲನುಭವಿಸಿ, ಮತ್ತೆ 2015ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕೈ ಅಭ್ಯರ್ಥಿಯಾಗಿದ್ದ ರಮ್ಯಾ ಅವರನ್ನು ಸೋಲಿಸಿ ಸೇಡು ತೀರಿಸಿಕೊಂಡಿದರು. ಇದೀಗ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಟಿಕೆಟ್ ನೀಡುವ ಬಿಗ್ ಆಫರ್ ನೀಡಿದೆ ಎಂದು ಹೇಳಲಾಗಿದೆ.
ಈ ಬಾರೀ ಜೆಡಿಎಸ್ ನಾಯಕ ಸಿ.ಎಸ್.ಪುಟ್ಟರಾಜು ಅವರಿಗೆ ಜೆಡಿಎಸ್ ಪಕ್ಷವೇ ಮಂಡ್ಯ ಲೋಕಸಭೆ ಟಿಕೆಟ್ ನೀಡಿದರೂ ಗೆಲುವು ಸುಲಭವಲ್ಲ ಎಂಬುದು ತಿಳಿದಿದ್ದು, ಸ್ಪರ್ಧಿಸಿದ್ರು ಮಂಡ್ಯದಲ್ಲಿ ಗೆಲುವು ಕಷ್ಟಸಾಧ್ಯವಾಗಿದೆ. ಇನ್ನೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ದ ಪದೇ ಪದೇ ವಾಗ್ದಾಳಿ ನಡೆಸುತ್ತಿರುವ ಸಚಿವ ಚಲುವರಾಯಸ್ವಾಮಿ ಜಿಲ್ಲೆಯೊಳಗೆ ತಮ್ಮ ವಿರುದ್ಧ ರಾಜಕೀಯ ದ್ವೇಷ ಸಾಧಿಸುತ್ತಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಸೇಡು ತೀರಿಸಿಕೊಳ್ಳಲು ಸಚಿವ ಎನ್.ಚಲುವರಾಯಸ್ವಾಮಿ ಕೂಡ ಸಮಯಕ್ಕಾಗಿ ಕಾಯುತ್ತಿದ್ದಾರೆ. ಸಿ.ಎಸ್.ಪುಟ್ಟರಾಜು ಅವರೊಬ್ಬರನ್ನು ಪಕ್ಷಕ್ಕೆ ಸೇರಿಸಿಕೊಂಡು ಜೆಡಿಎಸ್ ಪಕ್ಷವನ್ನ ದುರ್ಬಲ ಮಾಡುವ ನಿಟ್ಟಿನಲ್ಲಿ ಪ್ಲಾನ್ ನಡೆಸಿದ್ದಾರೆ.












Click it and Unblock the Notifications