Lok Sabha Elections 2024: ಧಾರವಾಡ ಲೋಕಸಭಾ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಪುತ್ರ ಕಣಕ್ಕೆ?
ಬೆಂಗಳೂರು,ಜನವರಿ 03: 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡದ ಹಿನ್ನಲೆ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಿ ಸೋಲು ಅನುಭವಿಸಿದ್ದರು. ಆದರೆ 2024 ರ ಲೋಕಸಭಾ ಚುನಾವಣೆ ಕಾಂಗ್ರೆಸ್ ಪ್ರತಿಷ್ಠೆ ಕಣವಾಗಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಸ್ಪರ್ಧೆ ಗೆ ಕೈ ಪಾಳಯದಲ್ಲಿ ಸಾಕಷ್ಟು ಒತ್ತಡಗಳು ಕೇಳಿ ಬಂದಿವೆ.
ಹೌದು, ಲೋಕಸಭಾ ಚುನಾವಣೆಯಲ್ಲೂ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರನ್ನ ಪ್ರಹ್ಲಾದ್ ಜೋಶಿ ವಿರುದ್ಧ ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ತಮ್ಮ ಪುತ್ರನ ರಾಜಕೀಯ ಭವಿಷ್ಯವನ್ನ ರೂಪಿಸುವ ನಿಟ್ಟಿನಲ್ಲಿ ಜಗದೀಶ್ ಶೆಟ್ಟರ್ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಮೊದಲ ಪುತ್ರ ಸಂಕಲ್ಪ್ ಶೆಟ್ಟರ್ ಅವರನ್ನ ಬಿಜೆಪಿಯ ಭದ್ರಕೋಟೆಯಾಗಿರುವ ಧಾರವಾಡ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಕುರಿತು ಜಗದೀಶ್ ಶೆಟ್ಟರ್ ಅವರು ಪ್ಲಾನ್ ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಇತ್ತ ಬಿಜೆಪಿಯ ಭದ್ರಕೋಟೆಯಾಗಿದ್ದ ಹುಬ್ಬಳ್ಳಿ- ಧಾರವಾಡ ಭಾಗದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಈ ಬಾರೀ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಕಷ್ಟವಾಗಲಿದೆ ಎನ್ನುವ ಮಾತುಗಳು ಕೇಳಿ ಬಂದಿತ್ತು.
ಇತ್ತ ಬಿಜೆಪಿ ಪಕ್ಷದಲ್ಲಿರುವ ಜಗದೀಶ್ ಶೆಟ್ಟರ್ ಸಹೋದರ ಪ್ರದೀಶ್ ಶೆಟ್ಟರ್ ಹಾಗೂ ಅವರ ಆಪ್ತ ಹಾಗೂ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಬಿಜೆಪಿ ನಾಯಕರು ಹಾಗೂ ಪಕ್ಷ ಕಾರ್ಯಕ್ರಮದಿಂದ ಅಂತರವನ್ನ ಕಾಯ್ದುಕೊಳ್ಳುವ ಮೂಲಕ ಜಗದೀಶ್ ಶೆಟ್ಟರ್ ಸಂಪರ್ಕದಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
ಹೀಗಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಪುತ್ರನನ್ನ ಕಣಕ್ಕಿಳಿಸುವ ತಯಾರಿಯನ್ನ ಜಗದೀಶ್ ಶೆಟ್ಟರ್ ನಡೆಸಿದ್ದಾರೆ ಎನ್ನಲಾಗಿದೆ. ಧಾರವಾಡ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪರ್ಧೆ ಮಾಡಲಿದ್ದಾರೆಯೇ ಎಂಬ ವದಂತಿ ಬೆನ್ನಲ್ಲೇ ಜಗದೀಶ್ ಶೆಟ್ಟರ್ ಅವರ 68ನೇ ಜನ್ಮ ದಿನ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು ಜೊತೆಗೆ ಈ ವಿಚಾರವಾಗಿ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಇನ್ನೂ ಲೋಕಸಭಾ ಚುನಾವಣೆಯ ಸಮೀಪಿಸುತ್ತಿದ್ದಂತೆ ಜಗದೀಶ್ ಶೆಟ್ಟರ್ ಅವರನ್ನ ಮರಳಿ ಬಿಜೆಪಿ ತರುವ ಪ್ರಯತ್ನಗಳು ನಡೆಯುತ್ತಿದ್ದು, ಇತ್ತ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನಲ್ಲಿ ವಿಶೇಷ ಪ್ರಾಧ್ಯಾನ್ಯತೆ ನೀಡಲಾಗಿದೆ. ಹೀಗಾಗಿ ಈ ಬಾರೀ ಲೋಕಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಅವರು ತಮ್ಮ ಪುತ್ರನನ್ನ ಕಣಕ್ಕಿಳಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಇತ್ತ ರಾಜಕೀಯವಾಗಿಯೂ ತಮ್ಮ ತಂದೆ ಬೆಂಬಲಕ್ಕೆ ನಿಂತಿರುವ ಪುತ್ರ ಸಂಕಲ್ಪ ಶೆಟ್ಟರ್ ಈ ಹಿಂದೆ ಬಿಜೆಪಿ ನಾಯಕರ ವಿರುದ್ಧ ಟ್ವೀಟ್ ಮೂಲಕ ಕಿಡಿಕಾರಿದ್ದರು. ಕರ್ನಾಟಕ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇವರು ಪ್ರಮುಖ ಮಾನದಂಡ, ಜಗದೀಶ್ ಶೆಟ್ಟರ್ ವಿರುದ್ಧ ಯಾರು ಹೆಚ್ಚು ಮಾತನಾಡುತ್ತಾರೆ ಟ್ವಿಟ್ಟರ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅದನ್ನು ಅದಕ್ಕೆ ಬಿಎಲ್ ಅವರ ಆದೇಶ ಅಂತ ಅಡಿ ಬರಹ ಬರೆದು ಹ್ಯಾಶ್ ಟ್ಯಾಗ್ ಮಾಡಿ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ಹಿಂದೆ ಸಾಕಷ್ಟು ಚರ್ಚೆಯಾಗಿತ್ತು. ಇದೀಗ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದೆ.












Click it and Unblock the Notifications