ಮಂಡ್ಯ ಕಣದಲ್ಲಿ ಸುಮಲತಾ V/S ಕುಮಾರಸ್ವಾಮಿ: ಇಬ್ಬರಿಗೂ ಠಕ್ಕರ್ ಕೊಡಲು ಕಾಂಗ್ರೆಸ್ ನಿಂದ ಆ ನಾಯಕಿ ಕಣಕ್ಕೆ!?
2023 ವಿಧಾನಸಭಾ ಚುನಾವಣೆಯಲ್ಲಿ ಈ ಬಾರೀ ಮಂಡ್ಯ ವಿಧಾನಸಭಾ ಕ್ಷೇತ್ರ ಘಟಾನುಘಟಿ ನಾಯಕರ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಸುಮಲತಾ ಅವರ ರಾಜಕೀಯ ಎದುರಾಳಿಯಾಗಿರುವ ನಾಯಕರು ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.
ಮಂಡ್ಯ,ಮಾರ್ಚ್17: 2019 ರ ಲೋಕಸಭಾ ಚುನಾವಣೆಯಿಂದ ರಾಜಕೀಯ ಬದ್ದವೈರಿಗಳಾದ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನಡುವೆ ಸ್ವಾಭಿಮಾನಿ ಜಟಾಪಟಿ ಮುಂದುವರೆದಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವೇ ಸಾಕಷ್ಟು ಕುತೂಹಲವನ್ನ ಹುಟ್ಟ ಹಾಕುವಂತೆ ಮಾಡಿದೆ.
ಈ ಹಿಂದೆ ಮಂಡ್ಯ ಸಂಸದೆ ಸುಮಲತಾ ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗುತ್ತಾರೆ ಎನ್ನುವ ಜೋರಾಗಿ ಚರ್ಚೆಯಾಗಿದ್ದು, ಚುನಾವಣೆ ಹೊತ್ತಲಿ ಸುಮಲತಾ ಬಿಜೆಪಿಗೆ ಬೆಂಬಲವನ್ನ ಸೂಚಿಸಿದ್ದಾರೆ. ಇತ್ತ ಬಿಜೆಪಿಗೆ ಬೆಂಬಲ ಸೂಚಿಸಿರುವ ಮೂಲ ಉದ್ದೇಶವೇ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಕಾರಣಕ್ಕೆ . ಅದು ಅಲ್ಲದೇ ಕುರಿತು ಬಿಜೆಪಿ ಪಾಳಯದಲ್ಲಿ ಸಾಕಷ್ಟು ಚರ್ಚಗಳು ನಡೆಯುತ್ತಿವೆ.

ಈಗಾಗಲೇ ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರು ಬಿಜೆಪಿ ಜೆಡಿಎಸ್ ಭದ್ರಕೋಟೆಯನ್ನ ಛಿದ್ರಗೊಳಿಸಲು ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಇನ್ನೂ ಮೋದಿ ಮಂಡ್ಯ ಭೇಟಿಕೊಟ್ಟ ಬೆನ್ನೆಲ್ಲೇ ಮಂಡ್ಯ ಜಿಲ್ಲೆಯ 6 ಜನ ಜೆಡಿಎಸ್ ಶಾಸಕರು ಹಾಗೂ ಮುಖಂಡರ ಜೊತೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರು ಸಭೆ ನಡೆಸಿ ಹಲವು ಸೂಚನೆಗಳನ್ನ ನೀಡಿದ್ದಾರೆ.
ಇತ್ತ ಮಂಡ್ಯದ 7ಕ್ಕೆ 7 ಕ್ಷೇತ್ರ ಗೆಲ್ಲಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಕರೆ ತರಲು ಮುಂದಾಗಿದ್ದಾರೆ. ಮಂಡ್ಯದಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರೀ ಸುಮಲತಾ ಅಂಬರೀಶ್ ಬಿಜೆಪಿ ಬೆಂಬಲದ ಮೇಲೆ ಕಣಕ್ಕಿಳಿದರೇ ಜೆಡಿಎಸ್ ನಿಂದ ಮಂಡ್ಯ ಕ್ಷೇತ್ರಕ್ಕೆ ಎಚ್ ಡಿ ಕುಮಾರಸ್ವಾಮಿ ಕಣಕ್ಕಿಳಿಯಲಿದ್ದಾರೆ. ಇನ್ನೂ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನಗಳನ್ನ ಪಡೆಯುವ ತವಕದಲ್ಲಿರುವ ಕಾಂಗ್ರೆಸ್ ಸಹ ಹಲವು ಲೆಕ್ಕಾಚಾರವನ್ನ ಹಾಕಿಕೊಂಡಿದೆ.

ಸುಮಲತಾ ಹಾಗೂ ಕುಮಾರಸ್ವಾಮಿಗೆ ಠಕ್ಕರ್ ಕೊಡಲು ಮಾಜಿ ಸಂಸದೆ ರಮ್ಯಾ ಅವರನ್ನು ಮಂಡ್ಯಕ್ಕೆ ಕರೆ ತಂದು ನಿಲ್ಲಿಸಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಡಲಿದೆ ಎಂದು ಹೇಳಲಾಗಿದೆ.
ಈಗಾಗಲೇ ಅನಿತಾ ಕುಮಾರಸ್ವಾಮಿ ತನ್ನ ರಾಮನಗರ ಕ್ಷೇತ್ರವನ್ನು ನಿಖಿಲ್ ಗೆ ಬಿಟ್ಟುಕೊಟ್ಟಿದ್ದಾರೆ. ಹೀಗಾಗಿ ಜೆಡಿಎಸ್ ಸಿಎಂ ಅಭ್ಯರ್ಥಿ ಆಗಿರೋ ಕಾರಣ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಜೊತೆಗೆ ಮಂಡ್ಯ ನಗರದಿಂದಲೂ ಕಣಕ್ಕಿಳಿಯಲು ಮುಂದಾಗಿದ್ದಾರೆ. ಇನ್ನೊಂದೆಡೆ ಮಂಡ್ಯದಲ್ಲಿ ಕಮಲವನ್ನು ಅರಳಿಸಲು ಮುಂದಾಗಿರೋ ಬಿಜೆಪಿ ರಾಜ್ಯ ರಾಜಕಾರಣಕ್ಕೆ ಸುಮಲತಾ ಅವರನ್ನೇ ಕರೆ ತರೋ ಪ್ರಯತ್ನ ಮಾಡುತ್ತಿದೆ. ಹೀಗಾಗಿ ಸುಮಲತಾ ಅವರು ಬಿಜೆಪಿಯಿಂದ ಎಂಎಲ್‌ಎ ಎಲೆಕ್ಷನ್‌ಗೆ ಕಂಟೆಸ್ಟ್ ಮಾಡೋ ಸಾಧ್ಯತೆ ಇದೆ.

ಇನ್ನು, ಇತ್ತ ಸುಮಲತಾ ಮತ್ತು ಎಚ್.ಡಿ ಕುಮಾರಸ್ವಾಮಿ ಅವರ ನಡುವೆ ಕಾಂಗ್ರೆಸ್ ಮಾತ್ರ ಮಾಜಿ ಸಂಸದೆ ರಮ್ಯಾ ಅವರನ್ನು ಮಂಡ್ಯ ರಾಜಕಾರಣಕ್ಕೆ ಕರೆ ತಂದು ಪೈಪೋಟಿ ನೀಡಲು ಮುಂದಾಗಿದೆ. ಹೀಗಾಗಿ ಈ ಬಾರಿ ಮಂಡ್ಯದಲ್ಲಿ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಡುವೆ ರಮ್ಯಾ ಆರ್ಭಟ ಜೋರಾಗಿ ಇರಲಿದೆ. ಒಂದು ವೇಳೆ ಮಂಡ್ಯದಲ್ಲಿ ಸುಮಲತಾ ಸ್ಪರ್ಧಿಸೋದು ಖಚಿತವಾದರೇ ಕುಮಾರಸ್ವಾಮಿಯ ಸ್ಪರ್ದೆಯೂ ಸಹ ಖಚಿತವಾಗಲಿದ್ದು, ಈ ಬಾರೀ ರಾಜ್ಯ ವಿಧಾನಸಭಾ ಕ್ಷೇತ್ರದಲ್ಲಿ ಮಂಡ್ಯ ಮತ್ತೆ ಹೈವೋಲ್ವೇಜ್ ಕ್ಷೇತ್ರವಾಗಲಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications