ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಹೊರಟರೆ ಸಿದ್ದರಾಮಯ್ಯ?

|
Google Oneindia Kannada News

ಬೆಂಗಳೂರು, ಜನವರಿ 28 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ 'ರಾಜೀನಾಮೆ ನೀಡಲು ಸಿದ್ಧನಿದ್ದೇನೆ' ಎಂಬ ಹೇಳಿಕೆ ಬಗ್ಗೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ಹೇಳಿಕೆ ಹಿಂದೆ ಸಿದ್ದರಾಮಯ್ಯ ಇದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಬೆಂಬಲಿಗರು ನೀಡುತ್ತಿರುವ ಹೇಳಿಕೆಗಳಿಂದ ಅಸಮಾಧಾನಗೊಂಡಿರುವ ಎಚ್.ಡಿ.ಕುಮಾರಸ್ವಾಮಿ, ರಾಜೀನಾಮೆಯೆ ಮಾತನ್ನು ಆಡಿದರೆಯೇ?.

ಎಚ್‌ಡಿಕೆ ರಾಜೀನಾಮೆ ಹೇಳಿಕೆಗೆ ಕಾರಣವಾಗಿದ್ದು 5 ನಾಯಕರು!ಎಚ್‌ಡಿಕೆ ರಾಜೀನಾಮೆ ಹೇಳಿಕೆಗೆ ಕಾರಣವಾಗಿದ್ದು 5 ನಾಯಕರು!

ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿ ಇಲ್ಲ ಎಂದು ಟೀಕಿಸುತ್ತಿದೆ. ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳ ಮಾತಿಗೆ ತೇಪೆ ಹಚ್ಚುವ ಕಾರ್ಯವನ್ನು ಮಾಡುತ್ತಿದ್ದಾರೆ.

ಮುನಿಸಿಕೊಂಡ ಕುಮಾರಸ್ವಾಮಿ: ಸಂತೈಸುತ್ತೇನೆಂದ ಸಿದ್ದರಾಮಯ್ಯ!ಮುನಿಸಿಕೊಂಡ ಕುಮಾರಸ್ವಾಮಿ: ಸಂತೈಸುತ್ತೇನೆಂದ ಸಿದ್ದರಾಮಯ್ಯ!

ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಹುದ್ದೆಯಲ್ಲಿ ಇಲ್ಲದಿದ್ದರೂ ತಾವು ಪವರ್ ಫುಲ್ ಎಂಬುದನ್ನು ಸಿದ್ದರಾಮಯ್ಯ ಹಲವು ಬಾರಿ ತೋರಿಸಿದ್ದಾರೆ. ಈಗ ತಮ್ಮ ಬೆಂಬಲಿಗರ ಮೂಲಕ ಹೇಳಿಕೆ ಕೊಡಿಸಿ ಅದನ್ನು ಮತ್ತೆ ಸಾಬೀತು ಮಾಡಲು ಹೊರಟಿದ್ದಾರೆಯೇ? ಎಂಬ ಅನುಮಾನ ಕಾಡುತ್ತಿದೆ.

ರಾಜೀನಾಮೆಗೆ ಸಿದ್ಧ: ಎಚ್ಡಿಕೆ ಶಾಕಿಂಗ್ ಹೇಳಿಕೆಗೆ ಕಾರಣವೇನು?ರಾಜೀನಾಮೆಗೆ ಸಿದ್ಧ: ಎಚ್ಡಿಕೆ ಶಾಕಿಂಗ್ ಹೇಳಿಕೆಗೆ ಕಾರಣವೇನು?

ಚಾಮಂಡೇಶ್ವರಿ ಚುನಾವಣೆ ಸೋಲು

ಚಾಮಂಡೇಶ್ವರಿ ಚುನಾವಣೆ ಸೋಲು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರರಿಗೆ ಚಾಮುಂಡೇಶ್ವರಿ ಚುನಾವಣೆ ಸೋಲು ದೊಡ್ಡ ಅವಮಾನ. ಜೆಡಿಎಸ್‌ನ ಜಿ.ಟಿ.ದೇವೇಗೌಡ ವಿರುದ್ಧ ಸೋಲು ಕಂಡ ಅವರು ಹಳೆ ದ್ವೇಷವನ್ನು ಇನ್ನೂ ಮರೆತಿಲ್ಲ. ಜೆಡಿಎಸ್‌ಗೆ ಕಾಟ ಕೊಟ್ಟು ಸೇಡು ತೀರಿಸಿಕೊಳ್ಳುತ್ತಿದ್ದಾರೆ. ಅದಕ್ಕಾಗಿ ಸರ್ಕಾರವನ್ನು ಪದೇ-ಪದೇ ಕಾಡುತ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹಬ್ಬಿವೆ.

ಪವರ್ ಫುಲ್ ಎಂಬ ಸಂದೇಶ

ಪವರ್ ಫುಲ್ ಎಂಬ ಸಂದೇಶ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಇರುವುದು ಗುಟ್ಟಾಗಿ ಉಳಿದಿಲ್ಲ. ಸಿದ್ದರಾಮಯ್ಯ ಅವರು ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಪದವಿ ಹೊಂದಿಲ್ಲದಿದ್ದರೂ ತಾವೆಷ್ಟು ಪವರ್ ಫುಲ್ ಎಂದು ಹಲವು ಬಾರಿ ಸಾಬೀತು ಮಾಡಿದ್ದಾರೆ. ಈಗಲೂ ಕಾಂಗ್ರೆಸ್‌ಗೆ ಮುಖ್ಯಮಂತ್ರಿ ಸ್ಥಾನ, ಜೆಡಿಎಸ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಿಸಲು ಸಿದ್ದರಾಮಯ್ಯ ಪ್ರಯತ್ನ ನಡೆಸಿದ್ದಾರೆಯೇ? ಎಂಬ ಅನುಮಾನ ಮೂಡುತ್ತಿದೆ.

ಸಿದ್ದರಾಮಯ್ಯ ಬೆಂಬಲಿಗರು

ಸಿದ್ದರಾಮಯ್ಯ ಬೆಂಬಲಿಗರು

ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆ ಹೇಳಿಕೆಗೆ ಕಾರಣ ಮೂಲತಃ ಸಿದ್ದರಾಮಯ್ಯ ಬೆಂಬಲಿಗರು. ಡಾ.ಕೆ.ಸುಧಾಕರ್, ಎಚ್.ಎಂ.ರೇವಣ್ಣ, ಸಿ.ಪುಟ್ಟರಂಗ ಶೆಟ್ಟಿ, ಎಸ್.ಟಿ.ಸೋಮಶೇಖರ್ ಮುಂತಾದ ಸಿದ್ದರಾಮಯ್ಯ ಬೆಂಬಲಿಗರು ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಪರೋಕ್ಷ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದ್ದರಿಂದ, ಅಸಮಾಧಾನಗೊಂಡ ಕುಮಾರಸ್ವಾಮಿ ಹೇಳಿಕೆ ಕೊಟ್ಟಿದ್ದಾರೆ. ಇದರ ಅರಿವಿದ್ದೂ ಸಿದ್ದರಾಮಯ್ಯ ಸುಮ್ಮನಿದ್ದಾರೆ.

ಸರ್ಕಾರದ ವಿರುದ್ಧ ಅಸಮಾಧಾನ

ಸರ್ಕಾರದ ವಿರುದ್ಧ ಅಸಮಾಧಾನ

2018ರ ಚುನಾವಣೆಯ ಬಳಿಕ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುವುದು ಸಿದ್ದರಾಮಯ್ಯ ಅವರಿಗೆ ಇಷ್ಟ ಇರಲಿಲ್ಲ. ಆದರೆ, ಕಾಂಗ್ರೆಸ್ ಹೈಕಮಾಂಡ್ ನಾಯಕರ ಮಾತಿಗೆ ಇಲ್ಲ ಎನ್ನಲಾಗದೇ ಅವರು ಒಪ್ಪಿಕೊಂಡರು. ಅದಕ್ಕಾಗಿ ಸರ್ಕಾರವನ್ನು ಹೀಗೆ ಕಾಡುತ್ತಿದ್ದಾರೆ.

English summary
Is Former chief minister Siddaramaiah was not unhappy about coalition government. What lead the Kumaraswamy to say ready to step down, they are crossing the line.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X