Karnataka BJP: ರಾಜ್ಯದಲ್ಲಿ ಇರುವುದು ಕಾಂಗ್ರೆಸ್ ಸರ್ಕಾರವೋ..? ತಾಲಿಬಾನ್ ಸರ್ಕಾರವೋ..?
ಬೆಂಗಳೂರು, ಅಕ್ಟೋಬರ್ 03: ರಾಜ್ಯದಲ್ಲಿ ಇರುವುದು ಕಾಂಗ್ರೆಸ್ ಸರ್ಕಾರವೋ ಅಥವಾ ತಾಲಿಬಾನ್ ಸರ್ಕಾರವೋ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮೂಲಕ ಪ್ರಶ್ನಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಪೊಲೀಸರ ಮೇಲೆ ಕಲ್ಲು ತೂರಿ, ಸರ್ಕಾರಿ ವಾಹನಗಳಿಗೆ ಬೆಂಕಿ ಇಟ್ಟು ಕೋಮುಗಲಭೆ ನಡೆಸಿದ ತನ್ನ ಜಿಹಾದಿ ಬ್ರದರ್ಸ್‌ಗಳನ್ನು ಬಿಡುಗಡೆ ಮಾಡುವಂತೆ ಖುದ್ದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ.

ಈ ಹಿಂದೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಕೋರರಿಗೆ ಅಮಾಯಕರೆಂದು ತನ್ವೀರ್ ಸೇಠ್ ಸರ್ಟಿಫಿಕೇಟ್ ಕೊಟ್ಟಿದ್ದರು. ಉಗ್ರಗಾಮಿಗಳ ಬಂಧನವಾಗುತ್ತಿದ್ದಂತೆ ಕ್ಲೀನ್ ಚಿಟ್ ಕೊಡಲು ಉತ್ಸುಕರಾಗಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿರುವಾಗ ದಂಗೆಕೋರರನ್ನು ಬಿಟ್ಟು ಕಳಿಸುವುದು ಕಾಂಗ್ರೆಸ್‌ಗೆ ತುಂಬಾ ಸಲೀಸು ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.
ರಾಜ್ಯದಲ್ಲಿ ಇರುವುದು @INCKarnataka ಸರ್ಕಾರವೋ..? ತಾಲಿಬಾನ್ ಸರ್ಕಾರವೋ..?
— BJP Karnataka (@BJP4Karnataka) October 3, 2023
ಪೊಲೀಸರ ಮೇಲೆ ಕಲ್ಲು ತೂರಿ, ಸರ್ಕಾರಿ ವಾಹನಗಳಿಗೆ ಬೆಂಕಿ ಇಟ್ಟು ಕೋಮುಗಲಭೆ ನಡೆಸಿದ ತನ್ನ ಜಿಹಾದಿ ಬ್ರದರ್ಸ್‌ಗಳನ್ನು ಬಿಡುಗಡೆ ಮಾಡುವಂತೆ ಖುದ್ದು ಡಿಸಿಎಂ @DKShivakumar ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ.
ಈ ಹಿಂದೆ ಡಿಜೆ ಹಳ್ಳಿ, ಕೆಜಿ ಹಳ್ಳಿ… pic.twitter.com/nOe2CeRhY2
ಕಳೆದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಪಿಎಫ್‌ಐ ಗೂಂಡಾಗಳನ್ನು ಬಿಡುಗಡೆ ಮಾಡಿದ ಪರಿಣಾಮವೇ ಇಂದು ಶಿವಮೊಗ್ಗ ಕೋಮುಗಲಭೆಯಿಂದ ಹೊತ್ತಿ ಉರಿಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ತುಷ್ಟೀಕರಣಕ್ಕಾಗಿ ಜಿಹಾದಿಗಳ ಮೇಲಿನ ಪ್ರಕರಣ ಕೈಬಿಡುತ್ತಿರುವುದರಿಂದ ಕರ್ನಾಟಕದಲ್ಲಿ ಇಂದು ಐಸಿಸ್ ಕ್ಯಾಂಪ್‌ಗಳು ಸಕ್ರಿಯವಾಗುತ್ತಿವೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೇ, ಬಂದಿದ್ದು, ಭಯೋತ್ಪಾದಕರಿಗೆ ಹಾಗೂ ಜಿಹಾದಿ ರಕ್ಕಸರಿಗೆ ಕರ್ನಾಟಕ ಸ್ವರ್ಗವಾಗಿ ಮಾರ್ಪಟ್ಟಿದೆ. ಉಡುಪಿಯಲ್ಲಿ ಹಿಂದೂ ಯುವತಿಯರ ಖಾಸಗಿ ವಿಡಿಯೋಗಳ ರಹಸ್ಯ ಚಿತ್ರೀಕರಣ. ರಾಮನಗರದಲ್ಲಿ ಹಾಡುಹಗಲೇ ಗೋವುಗಳ ಕಳ್ಳತನ ಹಾಗೂ ವಧೆ ಹಾಗೂ ರಾಮನಗರದ ಟಿಪ್ಪು ನಗರಕ್ಕೆ ಕರೆಂಟ್ ಬಿಲ್ ಕೊಡಲು ಹೋದ ಬೆಸ್ಕಾಂ ಸಿಬ್ಬಂದಿಗಳ ಮೇಲೆ ಗುಂಪು ಹಲ್ಲೆ ಕುರಿತು ಬಿಜೆಪಿ ಟ್ವೀಟ್ ಮೂಲಕ ತಿಳಿಸಿದೆ.
ಭದ್ರಾವತಿಯಲ್ಲಿ ಹಿಂದೂ ಯುವಕನ ಮೇಲೆ, ಜಿಹಾದಿ ಸಂಘಟನೆಗಳಿಂದ ಮಾರಣಾಂತಿಕ ಹಲ್ಲೆ. ಹಾಸನದಲ್ಲಿ ಹಾಡುಹಗಲೇ ಗನ್ ಹಿಡಿದು, ಜಿಹಾದಿ ಯುವಕರಿಂದ ಪುಂಡಾಟ ಹಾಗೂ ಚಿಕ್ಕಬಳ್ಳಾಪುರದಲ್ಲಿ ಹಿಂದೂ ಯುವಕನ ಮೇಲೆ ಜಿಹಾದಿಗಳ ನೈತಿಕ ಪೊಲೀಸ್ ಗಿರಿ. ಇನ್ನೂ ಶಿವಮೊಗ್ಗದಲ್ಲಿ ಹಿಂದೂಗಳ ಮನೆ, ವಾಹನಗಳ ಮೇಲೆ ಕಲ್ಲೆಸೆತ - ತಲ್ವಾರ್‌ನಿಂದ ಕೊಲೆ ಯತ್ನ ಮಾಡಿರುವ ಕುರಿತು ಬಿಜೆಪಿ ಟ್ವೀಟ್ ನಲ್ಲಿ ಉಲ್ಲೇಖಿಸಿದೆ.
ತಾವೆಂತಹ ದೇಶದ್ರೋಹದ ಕೆಲಸವನ್ನು ಮಾಡಿದರೂ, ಕಾಂಗ್ರೆಸ್ ಪಕ್ಷ ನಮ್ಮ ಬೆಂಬಲಕ್ಕಿರಲಿದೆ ಎಂಬ ಕಾರಣಕ್ಕೆ ಜಿಹಾದಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಕರ್ನಾಟಕವನ್ನು ಮತ್ತೊಂದು ತಾಲಿಬಾನ್ ಮಾಡಲು ಕಾಂಗ್ರೆಸ್ "ಸಿದ್ದ"ವಾಗಿ ನಿಂತಂತೆ ಕಾಣುತ್ತಿದೆ ಎಂದು ಬಿಜೆಪಿ ಹೇಳಿದೆ.
ರಾಜ್ಯದ ಜನರ ಮುಂದೆ ಗ್ಯಾರಂಟಿಗಳ ಪುಂಗಿ ಊದಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರ ಸರ್ಕಾರ ಇದೀಗ ಕಿವಿ ಮೇಲೆ ಲಾಲ್‌ಬಾಗ್ ಇಟ್ಟು ತಮಾಷೆ ನೋಡುತ್ತಿದೆ. ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತರಿಗೆ ಶೂನ್ಯ ಬಡ್ಡಿದರ ಬೆಳೆಸಾಲವನ್ನು, ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಅನುದಾನದ ಕೊರತೆಯಿಂದಾಗಿ ಸಹಕಾರ ಸಂಘಗಳ ಮೂಲಕ ನೀಡುವ ಸಾಲವನ್ನು ರೈತರಿಗೆ ಕೊಡದೆ ಸಂಕಷ್ಟಕ್ಕೆ ದೂಡಿದೆ. ಸರ್ಕಾರದ ಖಜಾನೆಯನ್ನು ಗುಡಿಸಿ ಗುಂಡಾಂತರ ಮಾಡಿರುವ ಕಾಂಗ್ರೆಸ್, ಗ್ಯಾರಂಟಿಗಳ ಆದೇಶವನ್ನು ಕೇವಲ ಕಾಗದದ ಮೇಲೆ ಸೀಮಿತಗೊಳಿಸಿ ಜನರಿಗೆ ವಂಚಿಸುತ್ತಿದೆ.












Click it and Unblock the Notifications